ಎಂಟು ಲಕ್ಷ ರೂ. ವೆಚ್ಚದಲ್ಲಿ ಮೀನು ಬಿತ್ತನೆ

fish
Published on

ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ

ಮತ್ಸೃ ಕ್ಷಾಮ ತಲೆದೋರಿರುವುದರ ನಡುವೆಯೂ ಮತ್ಸೃ ಸಂತತಿ ಉಳಿಸುವುದಕ್ಕಾಗಿ ಸಮುದ್ರಕ್ಕೆ ಮೀನಿನ ಮರಿಗಳನ್ನು ಬಿಡುವ ಕಾರ್ಯ ಮೂರ‌್ನಾಲ್ಕು ವರ್ಷಗಳಿಂದ ನಡೆಯುತ್ತಿದೆ. ಮೀನುಗಾರರಿಂದ ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತಿದ್ದು, ಈ ಬಾರಿ ಎಂಟು ಲಕ್ಷ ರೂ. ವೆಚ್ಚದಲ್ಲಿ ಗಂಗೊಳ್ಳಿ, ಕೊಡೇರಿ, ಪಡುವರಿ ಹಾಗೂ ಶಿರೂರು ಭಾಗಗಳಲ್ಲಿ ತಲಾ 5,400 ಮೀನು ಮರಿಗಳನ್ನು ಸಮುದ್ರಕ್ಕೆ ಬಿಡಲಾಗುತ್ತಿದೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ಗಂಗೊಳ್ಳಿ ಮೀನುಗಾರಿಕಾ ಬಂದರಿನ ಅಳಿವೆ ಪ್ರದೇಶದಲ್ಲಿ ಅಳಿವೆಯಲ್ಲಿ ಮೀನು ಮರಿ ಬಿತ್ತನೆ ಕಾರ್ಯಕ್ರಮದಡಿ ಸೀಬಾಸ್ ಮೀನು ಮರಿಗಳನ್ನು ಮಂಗಳವಾರ ಸಮುದ್ರಕ್ಕೆ ಬಿಟ್ಟು ಮಾತನಾಡಿದರು.

ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕ ವಿವೇಕ ಆರ್., ಉಪನಿರ್ದೇಶಕಿ ಅಂಜನಾದೇವಿ, ಸಹಾಯಕ ನಿರ್ದೇಶಕಿ ಸುಮಲತಾ, ಗಂಗೊಳ್ಳಿ ಗ್ರಾಪಂ ಅಧ್ಯಕ್ಷೆ ಜಯಂತಿ ಖಾರ್ವಿ, ಗ್ರಾಪಂ ಸದಸ್ಯರಾದ ರಾಜೇಂದ್ರ ಶೇರುಗಾರ್, ಚಂದ್ರ ಖಾರ್ವಿ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಗ್ರಾಪಂ ಕಾರ್ಯದರ್ಶಿ ಅನೂಪ್ ಶೇಟ್, ತಾಪಂ ಮಾಜಿ ಸದಸ್ಯ ಸುರೇಂದ್ರ ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net