ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

death
Published on

ಕುಂದಾಪುರ: ಫಿಶಿಂಗ್ ಬೋಟ್‌ನಲ್ಲಿ ಗುರುವಾರ ಮೀನುಗಾರಿಕೆ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಸಮುದ್ರಕ್ಕೆ ಬಿದ್ದ ಶೇಷು(61) ಎಂಬುವರು ಮೃತಪಟ್ಟಿದ್ದಾರೆ. ಕುಂದಾಪುರ ಕೋಡಿಯ ಪ್ರದೀಪ ಅವರ ಜತೆ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಶೇಷು ಗುರುವಾರ ಪ್ರದೀಪ್ ಅವರ ಫಿಶಿಂಗ್ ಬೋಟ್‌ನಲ್ಲಿ ಮೀನುಗಾರಿಕೆ ಕಾರ್ಯದಲ್ಲಿದ್ದಾಗ ಆಯತಪ್ಪಿ ಸಮುದ್ರದಕ್ಕೆ ಬಿದ್ದು ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಕಂಡೊಯ್ಯಲಾಗಿದ್ದು, ದಾರಿಮಧ್ಯೆ ಮೃತಪಟ್ಟಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net