16 C
Bangalore
Thursday, December 12, 2019

ನಾಪತ್ತೆಯಾದ ಮೀನುಗಾರನ ಸಹೋದರ ಆತ್ಮಹತ್ಯೆ ಯತ್ನ

Latest News

ಕಿರುತೆರೆಯ ಪಾರು ಜತೆ ನಾರಾಯಣ್

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಬಹಳಷ್ಟು ಆಸಕ್ತಿಕರವಾಗಿ ನೋಡಿಸಿಕೊಂಡು ಹೋಗುತ್ತಿರುವ ಧಾರಾವಾಹಿ ‘ಪಾರು’ ಈಗ ಮತ್ತಷ್ಟು ಕುತೂಹಲ ಮೂಡಿಸಿದೆ. ಅದಕ್ಕೆ ಕಾರಣ, ಬೆಳ್ಳಿತೆರೆಯ ಹಿರಿಯ...

ಸಡಗರದ ಹುತ್ತರಿ ಹಬ್ಬ ಕೊಡವನಾಡಿನ ಸುಗ್ಗಿ

ಹುತ್ತರಿ ಹಬ್ಬ ಕೊಡವ ಜನರ ದೊಡ್ಡ ಹಬ್ಬ. ಗದ್ದೆಯಲ್ಲಿ ಹುಲುಸಾಗಿ ಬೆಳೆದ ಬತ್ತದ ಪೈರನ್ನು ಆರಾಧಿಸಿ, ಕುಯ್ಲು ಮಾಡಿ ವಿಧ್ಯುಕ್ತವಾಗಿ ಮನೆತುಂಬಿಕೊಳ್ಳುವ ಸುಮುಹೂರ್ತವೇ...

ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬಿಬಿಎಂಪಿಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಇಂಜಿನಿಯರ್​ಗಳನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಪಾಲಿಕೆಗೆ...

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಉಡುಪಿ: ಮಲ್ಪೆ ಸುವರ್ಣ ತ್ರಿಭುಜ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿ ನಾಪತ್ತೆಯಾದ ಮೀನುಗಾರರಲ್ಲಿ ಓರ್ವನಾದ ಭಟ್ಕಳದ ನಿವಾಸಿ ರಮೇಶ್ ಶನಿಯಾರ ಮೊಗೇರ(32) ಅವರ ಸಹೋದರ ಚಂದ್ರಶೇಖರ್ ಶನಿಯಾರ ಮೊಗೇರ (30) ಅಣ್ಣನ ಚಿಂತೆಯಲ್ಲಿ ವಿಷ ಸೇವಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗಂಭೀರ ಸ್ಥಿತಿಯಲ್ಲಿ ನಗರದ ಆದರ್ಶ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಂದ್ರಶೇಖರ್ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

ಕೆಲವು ದಿನಗಳಿಂದ ಜಾಂಡೀಸ್ ಉಲ್ಬಣಿಸಿ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ತೀವ್ರ ಹದಗೆಡುತ್ತಿದ್ದಂತೆ ನೆರೆಮನೆಯ ಸ್ನೇಹಿತನ ಬಳಿ ತಾನು ಆತ್ಮಹತ್ಯೆಗೆ ನಿರ್ಧರಿಸಿ ಇಲಿ ಪಾಷಾಣ ಸೇವಿಸಿದ ಬಗ್ಗೆ ಸೋಮವಾರವಷ್ಟೇ ಹೇಳಿಕೊಂಡಿದ್ದರು. ಇದರಿಂದ ಎಚ್ಚೆತ್ತ ಸ್ನೇಹಿತ ಮಾಧವ ಮತ್ತು ಇನ್ನೋರ್ವ ಸಹೋದರ ಸೋಮವಾರ ಭಟ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ತೋರಿಸಿ, ಸಾಯಂಕಾಲ 7 ಗಂಟೆ ವೇಳೆಗೆ ಅವರನ್ನು ಉಡುಪಿಗೆ ಕರೆ ತಂದಿದ್ದಾರೆ. ಅವರ ಲಿವರ್ ಭಾಗಕ್ಕೆ ತೀವ್ರ ಹಾನಿಯಾಗಿದೆ. ರಕ್ತಸ್ರಾವ ಹೆಚ್ಚುತ್ತಿದೆ, ಚಿಕಿತ್ಸೆ ಮುಂದುವರಿದಿದೆ ಎಂದು ವೈದ್ಯರು ತಿಳಿಸಿದ್ದಾರೆ.
* ಸದಾ ಅಣ್ಣನ ಚಿಂತೆ: ಬೋಟು ನಾಪತ್ತೆಯಾದಾಗಿನಿಂದ ಸದಾ ಅಣ್ಣನ ಚಿಂತೆಯಲ್ಲಿ ಸಹೋದರ ಚಂದ್ರಶೇಖರ್ ದಿನ ಕಳೆಯುತಿದ್ದರು. ಊಟ ತಿಂಡಿ ಸರಿಯಾಗಿ ಮಾಡುತ್ತಿರಲಿಲ್ಲ. ಸ್ವಲ್ಪ ಸಮಯದ ಬಳಿಕ ಸುಧಾರಣೆ ಕಂಡಿದ್ದರು. ಆದರೆ ಇತ್ತೀಚೆಗೆ ಅವಶೇಷ ದೊರೆತ ಬಳಿಕ ಮತ್ತೆ ತೀವ್ರ ಖಿನ್ನತೆಗೆ ಒಳಗಾಗಿದ್ದರು ಎಂದು ಅವರ ಸ್ನೇಹಿತ ಮಾಧವ ಹೇಳುತ್ತಾರೆ. ನಾಪತ್ತೆಯಾಗಿರುವ ರಮೇಶ್ ಕುಟುಂಬಕ್ಕೆ ಆಧಾರಸ್ತಂಭವಾಗಿದ್ದರು. ನಾಪತ್ತೆ ಘಟನೆ ಬಳಿಕ ತಾಯಿ ಹಾಸಿಗೆ ಹಿಡಿದಿದ್ದು, ತಂದೆಯು ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ.

ಚಂದ್ರಶೇಖರ್ ಮೂರ್ನಾಲ್ಕು ದಿನಗಳ ಹಿಂದೆ ಅಪಾಯಕಾರಿ ವಿಷ ಸೇವಿಸಿರುವ ಪರಿಣಾಮ ದೇಹದೋಳಗೆ ತೀವ್ರ ರಕ್ತಸ್ರಾವವಾಗುತ್ತಿದೆ. ಲಿವರ್ ಭಾಗಕ್ಕೆ ಹೆಚ್ಚು ಹಾನಿಯಾಗಿದೆ. ಪರಿಸ್ಥಿತಿ ಗಂಭೀರವಾಗಿದ್ದು, ಪ್ರಾಣ ಉಳಿಸುವ ನಿಟ್ಟಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
| ಡಾ.ಜಿ.ಎಸ್ ಚಂದ್ರಶೇಖರ್, ಆದರ್ಶ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ, ಉಡುಪಿ

ಇಂದು ಮೀನುಗಾರರ ನಿಯೋಗ ದೆಹಲಿಗೆ: ಮಲ್ಪೆ ಸುವರ್ಣ ತ್ರಿಭುಜ ಬೋಟು ಅವಘಡ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ಜನಪ್ರತಿನಿಧಿಗಳು, ನಾಪತ್ತೆಯಾಗಿರುವ ಮೀನುಗಾರ ಕುಟುಂಬ ಸದಸ್ಯರ ನಿಯೋಗ ಮೇ 15ರಂದು ರಾತ್ರಿ ದೆಹಲಿಗೆ ತೆರಳಲಿದೆ.

16 ಅಥವಾ 17ರಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಬೋಟ್ ಅವಘಡ ಸಂಭವಿಸಿದ ಬಗ್ಗೆ ಚರ್ಚಿಸಲಾಗುವುದು. ಮೀನುಗಾರ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಪರಿಹಾರ ನೀಡುವಂತೆ ಒತ್ತಾಯಿಸಲಾಗುವುದು ಎಂದು ಮೀನುಗಾರ ಸಂಘದ ಮುಖಂಡರು ತಿಳಿಸಿದ್ದಾರೆ.

ಪರಿಹಾರಕ್ಕೆ ಅರ್ಜಿ ಸಲ್ಲಿಕೆ: ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ತಲಾ 10 ಲಕ್ಷ ರೂ. ಪರಿಹಾರಕ್ಕೆ ನಾಪತ್ತೆಯಾದ ಮೀನುಗಾರ ಕುಟುಂಬ ಮಂಗಳವಾರ ಅರ್ಜಿ ಸಲ್ಲಿಸಿದೆ. ಪರಿಹಾರ ನಿಧಿಯನ್ನು ಪಡೆಯುವಲ್ಲಿ ಅಗತ್ಯವಿರುವ ಕರಾರು ಒಪ್ಪಂದ ದಾಖಲೆಗೆ ಚಂದ್ರಶೇಖರ್ ಕೋಟ್ಯಾನ್ ಮತ್ತು ದಾಮೋದರ ಸಾಲ್ಯಾನ್ ಮನೆಯವರು ಸಹಿ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಬೋಟ್ ಅವಶೇಷ ಪತ್ತೆಗೆ ಸಂಬಂಧಿಸಿ ಮನೆಯವರಿಗೆ ಯಾವುದೇ ವಿಚಾರವನ್ನು ತಿಳಿಸಿಲ್ಲ. ಕರಾರು ಒಪ್ಪಂದ ಪತ್ರ, ಅರ್ಜಿ ನಮೂನೆಯನ್ನು ಮನೆಗೆ ತರಿಸಿ ಸಹಿ ಮಾಡಲಾಗಿದೆ.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...