More

    ಮೀನುಗಾರಿಕೆ ಲಾಭದಾಯಕ ಉದ್ದಿಮೆ

    ಶಿವಮೊಗ್ಗ: ಮೀನು ಉತ್ತಮ ಪೌಷ್ಟಿಕ ಮತ್ತು ಆರೋಗ್ಯಕರ ಆಹಾರ. ಮೀನುಗಾರಿಕೆ ಅತ್ಯಂತ ಲಾಭದಾಯಕ ಉದ್ದಿಮೆ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿ ಕುಲಪತಿ ಡಾ. ಆರ್.ಸಿ.ಜಗದೀಶ್ ಹೇಳಿದರು.

    ಶಿವಮೊಗ್ಗ: ಮೀನು ಉತ್ತಮ ಪೌಷ್ಟಿಕ ಮತ್ತು ಆರೋಗ್ಯಕರ ಆಹಾರ. ಮೀನುಗಾರಿಕೆ ಅತ್ಯಂತ ಲಾಭದಾಯಕ ಉದ್ದಿಮೆ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿ ಕುಲಪತಿ ಡಾ. ಆರ್.ಸಿ.ಜಗದೀಶ್ ಹೇಳಿದರು.
    ಮೀನುಗಾರಿಕೆ ಇಲಾಖೆ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿ ಸಹಯೋಗದಲ್ಲಿ ಸೋಮವಾರ ಹೊನ್ನವಿಲೆ ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಿದ್ದ ಮೀನು ಕೃಷಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ದೇಶಕ್ಕೆ ಪೌಷ್ಟಿಕ ಆಹಾರ ಒದಗಿಸುವ ಜತೆಗೆ ಲಕ್ಷಾಂತರ ಜನರಿಗೆ ಉದ್ಯೋಗ ನೀಡುವಲ್ಲಿ ಮೀನುಗಾರಿಕೆ ಪ್ರಮುಖ ಪಾತ್ರವಹಿಸಿದೆ ಎಂದು ತಿಳಿಸಿದರು.
    ಬಿದಿರೆ ಗ್ರಾಪಂ ಅಧ್ಯಕ್ಷೆ ಅಶ್ವಿನಿ ಮಾತನಾಡಿ, ಮೀನು ಕೃಷಿಕರು ಹೆಚ್ಚಿನ ತಾಂತ್ರಿಕ ಮಾಹಿತಿಯನ್ನು ವಿವಿ ಹಾಗೂ ಸಂಬಂಧಪಟ್ಟ ಇಲಾಖೆಯಿಂದ ಪಡೆದು ತಮ್ಮ ವೃತ್ತಿಯಲ್ಲಿ ಇನ್ನಷ್ಟು ಯಶಸ್ಸು ಸಾಧಿಸಬೇಕು. ಬದಲಾದ ತಂತ್ರಜ್ಞಾನಗಳನ್ನು ಅರಿತುಕೊಳ್ಳಬೇಕು ಎಂದರು.
    ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಗಿರೀಶ್, ಉಪನಿರ್ದೇಶಕ ಜಿ.ಎಂ.ಶಿವಕುಮಾರ್, ಸಹಾಯಕ ನಿರ್ದೇಶಕ ಕೆ.ಎಸ್.ರಾಘವೇಂದ್ರ, ವಿವಿ ಸಂಶೋಧನಾ ನಿರ್ದೇಶಕ ಡಾ. ಬಿ.ಹೇಮ್ಲಾ ನಾಯ್ಕ, ಸಹ ಸಂಶೋಧನಾ ನಿರ್ದೇಶಕ ಡಾ. ಎಸ್.ಪ್ರದೀಪ್, ಸಹಾಯಕ ಪ್ರಾಧ್ಯಾಪಕ ಡಾ. ಎ.ಎಚ್.ಶಾಂತನಗೌಡ, ಮೈಸೂರಿನ ಮೀನುಗಾರಿಕೆ ಮಹಾಮಂಡಳಿ ನಿರ್ದೇಶಕ ಪಿ.ರಾಮಯ್ಯ ಇತರರಿದ್ದರು.
    ಮೀನುಗಾರಿಕೆ ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು, ವಿವಿ ಸಹಾಯಕ ಪ್ರಾಧ್ಯಾಪಕರು, ವಿಜ್ಞಾನಿಗಳು, ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಮೀನು ಕೃಷಿಕರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts