20.5 C
Bangalore
Sunday, December 15, 2019

ಗಂಗೊಳ್ಳಿಯಲ್ಲಿ ಮೀನುಗಾರಿಕೆ ಬಂದ್

Latest News

ಆನೆ ದಾಳಿಗೆ ಬೆಳೆಗಾರ ಕಂಗಾಲು

ಚಿಕ್ಕಮಗಳೂರು: ಕಾಫಿ ಬೆಳೆಯುವ ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಾನವ ಹಾಗೂ ವನ್ಯಜೀವಿ ಸಂಘರ್ಷ ಮಿತಿಮೀರಿದೆ. ಇವುಗಳಿಂದ ಬೆಳೆಯನ್ನು ಉಳಿಸಿಕೊಳ್ಳುವುದೇ ಬೆಳೆಗಾರರಿಗೆ...

ಅಡುಗೆಗೆ ಗುಣಮಟ್ಟದ ಪದಾರ್ಥ ಬಳಸಿ

ಕೊಪ್ಪ: ಅಡುಗೆ ಮಾಡುವಾಗ ಸ್ವಚ್ಛತೆಗೆ ಗಮನ ಹರಿಸಬೇಕು. ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸಿ. ಹೆಚ್ಚು ಜವಾಬ್ದಾರಿಯಿಂದ ಅಡುಗೆ ಮಾಡಬೇಕು ಎಂದು ಅಕ್ಷರ...

ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸ್ಥಾಪನೆಗೆ ರಾಮಾಯಣ, ಮಹಾಭಾರತ, ಭಾಗವತಗಳೇ ಮೂಲಾಧಾರ: ಶ್ರೀ ರಾಘವೇಶ್ವರ ಸ್ವಾಮೀಜಿ

ಬೆಂಗಳೂರು: ರಾಮಾಯಣ ಮಹಾಕಾವ್ಯ ಕಲ್ಪನೆಯಲ್ಲ, ಅದು ಇತಿಹಾಸ. ರಾಮಾಯಣ, ಮಹಾಭಾರತ ಹಾಗೂ ಭಾಗವತ ನಮ್ಮ ಭರತ ಸಂಸ್ಕೃತಿಯ ಮೂಲಾಧಾರ. ಈ ಮೂರನ್ನು ಮೂಲವಾಗಿಟ್ಟುಕೊಂಡು ವಿಷ್ಣುಗುಪ್ತ ವಿಶ್ವವಿದ್ಯಾಪೀಠ...

ರೇವಣ್ಣರಿಂದ ಕಲಿಯುವುದು ಮುಗಿದಿದೆ

ಹಾಸನ ಜಿಲ್ಲೆಯನ್ನಷ್ಟೇ ನೋಡಿಕೊಳ್ಳಲಿ ಶಾಸಕ ಕೆ.ಸಿ.ನಾರಾಯಣಗೌಡ ವಾಗ್ದಾಳಿ ಕೆ.ಆರ್.ಪೇಟೆ: ಮಾಜಿ ಸಚಿವ ಎಚ್.ಡಿ.ರೇವಣ್ಣ ನಮ್ಮ ಜಿಲ್ಲೆ, ತಾಲೂಕು ನೋಡುವ ಅವಶ್ಯಕತೆ ಇಲ್ಲ. ಹಾಸನ ಜಿಲ್ಲೆಯನ್ನಷ್ಟೇ...

ಜೆಡಿಎಸ್‌ಗೆ ನಾರಾಯಣಗೌಡ ಯಾವ ಲೆಕ್ಕ!

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ತಿರುಗೇಟು ಪಾಂಡವಪುರ: ಮಾಜಿ ಪ್ರಧಾನಿ ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಮತ್ತವರ ಕುಟುಂಬದ ಬಗ್ಗೆ ಲಘುವಾಗಿ ಮಾತನಾಡಿ ಎಚ್ಚರಿಕೆ ನೀಡಿದವರೆಲ್ಲ ಮಣ್ಣಲ್ಲಿ ಮಣ್ಣಾಗಿ...

ಗಂಗೊಳ್ಳಿ: ಇಲ್ಲಿನ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಕಾನೂನು ಬಾಹಿರವಾಗಿ ಲೈಟ್ ಫಿಶಿಂಗ್ ನಡೆಸುತ್ತಿರುವ ಮೀನುಗಾರಿಕೆ ಬೋಟುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟದಿಂದ ಭಾನುವಾರ ಗಂಗೊಳ್ಳಿ ಮೀನುಗಾರಿಕೆ ಬಂದರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಮೀನುಗಾರಿಕೆ ಮುಗಿಸಿ ಗಂಗೊಳ್ಳಿ ಮೀನುಗಾರಿಕಾ ಬಂದರಿಗೆ ಬಂದ ಸುಮಾರು 10ಕ್ಕೂ ಹೆಚ್ಚು ಪರ್ಸಿನ್ ಬೋಟುಗಳಲ್ಲಿರುವ ಮೀನುಗಳನ್ನು ಖಾಲಿ ಮಾಡಲು ಮೀನುಗಾರರು ಒಪ್ಪಲಿಲ್ಲ. ಹೀಗಾಗಿ ಗಂಗೊಳ್ಳಿ ಬಂದರಿನಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಯಿತು. ಮೀನುಗಾರಿಕೆಗೆ ರಜೆ ಘೋಷಿಸಿ ಬಂದರು ಪ್ರದೇಶದಲ್ಲಿ ಸೇರಿದ ಮೀನುಗಾರರು, ಅನಧಿಕೃತವಾಗಿ ನಡೆಯುತ್ತಿರುವ ಬೆಳಕು ಮೀನುಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಪ್ರಮುಖರ ಸಭೆ: ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ಪರ್ಸಿನ್ ಹಾಗೂ ನಾಡದೋಣಿ ಮೀನುಗಾರ ಸಂಘಟನೆಗಳ ಪ್ರಮುಖರ ಸಭೆ ನಡೆಯಿತು. ನ್ಯಾಯಾಲಯದ ಆದೇಶದಂತೆ ಬೆಳಕು ಮೀನುಗಾರಿಕೆ ನಡೆಸುತ್ತಿರುವುದಾಗಿ ಪರ್ಸಿನ್ ಮೀನುಗಾರರು ವಾದ ಮಂಡಿಸಿದರೆ, ನ್ಯಾಯಾಲಯದ ಆದೇಶ ಉಲ್ಲಂಘಿಸಿ ಕಾನೂನುಬಾಹಿರವಾಗಿ ಬೆಳಕು ಮೀನುಗಾರಿಕೆ ನಡೆಸುತ್ತಿದ್ದು ಕ್ರಮ ಕೈಗೊಳ್ಳಬೇಕು ಎಂದು ನಾಡದೋಣಿ ಮೀನುಗಾರರು ಪಟ್ಟುಹಿಡಿದರು. ಇದೇ ವೇಳೆ ಎರಡೂ ಮೀನುಗಾರ ಸಂಘಟನೆಗಳ ಮುಖಂಡರ ನಡುವೆ ವಾದ ವಿವಾದ ತಾರಕಕ್ಕೇರಿತು.

ಕ್ರಮ ಸಾಧ್ಯವಿಲ್ಲವೆಂದ ಅಧಿಕಾರಿಗಳು: ಈ ಸಂದರ್ಭ ಮಧ್ಯಪ್ರವೇಶಿಸಿದ ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್ ಮತ್ತು ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಪರಮೇಶ್ವರ ಗುನಗ, ಬೆಳಕು ಮೀನುಗಾರಿಕೆಗೆ ನ್ಯಾಯಾಲಯ ಅನುಮತಿ ನೀಡಿರುವುದರಿಂದ ಪರ್ಸಿನ್ ಬೋಟುಗಳು ಮೀನುಗಾರಿಕೆ ನಡೆಸುತ್ತಿವೆ. ಬೆಳಕು ಮೀನುಗಾರಿಕೆ ಸಂಬಂಧ ಯಾವುದೇ ಸ್ಪಷ್ಟ ಮಾಹಿತಿ ಬಾರದೆ ಇರುವುದರಿಂದ ಸದ್ಯ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದರು. ಇದರಿಂದ ಆಕ್ರೋಶಗೊಂಡ ನಾಡದೋಣಿ ಮೀನುಗಾರರು ಅಧಿಕಾರಿಗಳು ಲಂಚ ಪಡೆದು ಒಂದು ಸಂಘಟನೆ ಪರವಾಗಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿ ನಾಡದೋಣಿ ಸಂಘದ ಕಚೇರಿಯಲ್ಲಿ ಮುಂದಿನ ಹೋರಾಟದ ಬಗ್ಗೆ ಸಭೆ ನಡೆಸಿದರು. ಗಂಗೊಳ್ಳಿ, ಬೈಂದೂರು ಹಾಗೂ ಮಲ್ಪೆ ವಲಯಗಳ ನಾಡದೋಣಿ ಮೀನುಗಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಂಧಾನ ಸಭೆ: ಬಳಿಕ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ಆಯೋಜಿಸಲಾದ ಸಂಧಾನ ಸಭೆಯಲ್ಲಿ ಒಮ್ಮತದ ತೀರ್ಮಾನಕ್ಕೆ ಬಂದ ಎರಡೂ ಮೀನುಗಾರ ಸಂಘಟನೆಗಳ ಪ್ರಮುಖರು ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ನಡೆಸಿದರು. ಮೀನುಗಾರಿಕಾ ಇಲಾಖೆ ಕಚೇರಿಯಿಂದ ಬೆಳಕು ಮೀನುಗಾರಿಕೆ ಬಗ್ಗೆ ಸ್ಪಷ್ಟ ಮಾಹಿತಿ ಪಡೆದುಕೊಂಡು ಫೆ.5ರಂದು ಇಲಾಖೆ ನೀಡಿದ ಮಾಹಿತಿ ಬಗ್ಗೆ ಚರ್ಚೆ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು ಹಾಗೂ ಫೆ.6ರವರೆಗೆ ಪರ್ಸಿನ್ ಹಾಗೂ ನಾಡದೋಣಿ ಮೀನುಗಾರರು ಮೀನುಗಾರಿಕೆ ಸ್ಥಗಿತಗೊಳಿಸುವ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು. ಗಂಗೊಳ್ಳಿ ಬಂದರಿನಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಭದ್ರತೆ ದೃಷ್ಟಿಯಿಂದ ಡಿಆರ್ ಪೊಲೀಸ್ ತುಕಡಿಯನ್ನು ಹಾಗೂ ಹೆಚ್ಚುವರಿ ಪೊಲೀಸರನ್ನು ಬಂದರು ಪ್ರದೇಶದಲ್ಲಿ ನಿಯೋಜಿಸಲಾಗಿದೆ.

Stay connected

278,756FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...