More

    ಒಂದೇ ತಾಲೂಕಿನಲ್ಲಿ 5 ಸೇತುವೆಗಳು ಮುಳುಗಡೆ; ಕಾರಣ ಬರೀ ಮಳೆಯಲ್ಲ..

    ಬೆಳಗಾವಿ: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಬೆಳಗಾವಿ ಜಿಲ್ಲೆಯೊಂದರಲ್ಲೇ ಐದು ಸೇತುವೆಗಳು ಮುಳುಗಡೆಯಾಗಿದ್ದು ಒಂದೆಡೆಯಾದರೆ, ಮತ್ತೊಂದೆಡೆ ನೀರಾವರಿ ಇಲಾಖೆಯ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

    ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಐದು ಸೇತುವೆಗಳು ಜಲಾವೃತವಾಗಿದೆ. ಭಾರಿ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಸುಣಧೋಳಿ, ಕಮಲದಿನ್ನಿ, ಪಿವೈ ಹುಣಶ್ಯಾಳ, ಅವರಾದಿ, ಢವಳೇಶ್ವರ ಸೇತುವೆಗಳು ಜಲಾವೃತಗೊಂಡಿವೆ.

    ಸೇತುವೆಗಳು ಮುಳುಗಿದ್ದರಿಂದ ಸಾರ್ವಜನಿಕರು ಸಂಚಾರಕ್ಕೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸ್ಥಳೀಯರು ಪಕ್ಕದ ಊರಿಗೂ ಸುತ್ತಿಬಳಸಿ ಹೋಗುವ ಅನಿವಾರ್ಯತೆ ಉಂಟಾಗಿದೆ. ಹಾಗಂತ ಈ ಸೇತುವೆಗಳ ಮುಳುಗಡೆಗೆ ಬರೀ ಮಳೆ ಮಾತ್ರ ಕಾರಣವಲ್ಲ.

    ಭಾರಿ ಮಳೆ ಹಿನ್ನೆಲೆಯಲ್ಲಿ ನೀರು ತುಂಬಿದ್ದರೂ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬ್ರಿಡ್ಜ್ ಕಮ್ ಬ್ಯಾರೇಜ್ ಗೇಟ್​ಗಳನ್ನು ನೀರಾವರಿ ಇಲಾಖೆಯ ಅಧಿಕಾರಿಗಳು ತೆರೆಯದೇ ಇರುವುದರಿಂದ ಈ ಪರಿಸ್ಥಿತಿ ಉಂಟಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಹಿಡಿಶಾಪ ಹಾಕುತ್ತಿದ್ದಾರೆ.

    ಕೆನಡಾದಲ್ಲಿ ಕನ್ನಡ ಮಾತು: ಚಂದ್ರ ಆರ್ಯರಿಗೆ ಭಾರಿ ಬೆಂಬಲ; ಹಿಂಬಾಲಕರ ಸಂಖ್ಯೆಯಲ್ಲಿ ಹೆಚ್ಚಳ…

    ಕಟ್ಟುಮಸ್ತಾದ ಯುವಕ ಸಾವಿಗೆ ಶರಣು; ಮನೆಯಲ್ಲೇ ಆತ್ಮಹತ್ಯೆ, ಕಾರಣ ನಿಗೂಢ..

    50 ಪ್ರಯಾಣಿಕರಿದ್ದ ಬಸ್​ ಮೇಲೆಯೇ ಬಿತ್ತು ವಿದ್ಯುತ್​ ತಂತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts