More

    ಪಾಕ್​ನಲ್ಲಿ ಆತ್ಮಾಹುತಿ ಬಾಂಬ್ ದಾಳಿ; 5 ಚೀನಿಯರ ಸಾವು

    ನವದೆಹಲಿ: ಚೀನಾ ದೇಶದ ಪ್ರಜೆಗಳು ಪ್ರಯಾಣಿಸುತ್ತಿದ್ದ ಬಸ್ಸನ್ನು ಗುರಿಯಾಗಿಸಿ ಉಗ್ರರು ನಡೆಸಿ ಆತ್ಮಾಹುತಿ ಬಾಂಬ್​ ದಾಳಿಯಲ್ಲಿ ಐವರು ಚೀನಿ ಪ್ರಜೆಗಳು ಮೃತಪಟ್ಟಿರುವ ಘಟನೆ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದಿದೆ.

    ಖೈಬರ್ ಪಖ್ತುಂಖ್ವಾ ಪ್ರಾಂತ್ಯದ  ಶಾಂಗ್ಲಾ ಜಿಲ್ಲೆಯ ಬಿಶಮ್ ಪ್ರದೇಶದಲ್ಲಿ ಘಟನೆ ನಡೆದಿದ್ದು, ಇಸ್ಲಮಾಬಾದ್​ನಿಂದ  ಕೊಹಿಸ್ತಾನ್‌ನತ್ತ ಬಸ್​ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಬಿಶಮ್ ಸ್ಟೇಷನ್ ಹೌಸ್ ಆಫೀಸರ್, ಇದೊಂದು ಆತ್ಮಾಹುತಿ ದಾಳಿಯಾಗಿದ್ದು, ಮೃತ ಚೀನಿಯರು ದಾಸು ಜಲವಿದ್ಯುತ್ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.  ಪ್ರಾಂತ್ಯದ ಶಾಂಗ್ಲಾ ಜಿಲ್ಲೆಯ ಬಿಶಮ್ ಪ್ರದೇಶದಲ್ಲಿ ಇಸ್ಲಾಮಾಬಾದ್‌ನಿಂದ ಕೊಹಿಸ್ತಾನ್‌ಗೆ ತೆರಳುತ್ತಿದ್ದ ಬಸ್‌ಗೆ ವಿರುದ್ಧ ದಿಕ್ಕಿನಿಂದ ಬಂದ ವಾಹನ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ.

    Pak Suicide Bomb

    ಇದನ್ನೂ ಓದಿ: ಎನ್​ಡಿಎ ಮೈತ್ರಿ ಅಭ್ಯರ್ಥಿಯಾಗಿ ಮಂಡ್ಯದಿಂದ ಎಚ್​ಡಿಕೆ ಕಣಕ್ಕೆ; ಅಧಿಕೃತ ಘೋಷಣೆಯಷ್ಟೇ ಬಾಕಿ

    ಸಂಬಂಧಪಟ್ಟ ಅಧಿಕಾರಿಗಳು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಘಟನೆ ನಡೆದ ಪ್ರದೇಶದ ಸುತ್ತ ಭದ್ರತೆ ಹೆಚ್ಚಿಸಲಾಗಿದ್ದು, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಶಮ್ ಸ್ಟೇಷನ್ ಹೌಸ್ ಆಫೀಸರ್ ತಿಳಿಸಿದ್ದಾರೆ.

    ಘಟನೆ ನಡೆದ ಪ್ರದೇಶವು ಶಾಂಗ್ಲಾ ಕೊಹಿಸ್ತಾನ್‌ಗೆ ಸಮೀಪದಲ್ಲಿದೆ. ಇಲ್ಲಿ 2021ರಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 9 ಮಂದಿ ಚೀನಿಯರು ಸೇರಿದಂತೆ 13 ಮಂದಿ ಸಾವಿಗೀಡಾಗಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts