ಮಂಡ್ಯ: ನಗರದ ತೋಟಗಾರಿಕೆ ಕಚೇರಿ ಆವರಣ ಹಾಗೂ ಕಾವೇರಿ ಉದ್ಯಾನದಲ್ಲಿ ಜ.24 ರಿಂದ 28ರವರೆಗೆ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ತಿಳಿಸಿದರು.
ಹಿಂದೆಗಿಂತ ಈ ಬಾರಿ ವಿಭಿನ್ನ ಮತ್ತು ವಿಶೇಷ ರೀತಿಯಲ್ಲಿ ಪ್ರದರ್ಶನ ಆಯೋಜಿಸಲಾಗಿದೆ. ವಿವಿಧ ಬಣ್ಣದ ಸೇವಂತಿಗೆ ಮತ್ತು ಗುಲಾಬಿ ಹೂಗಳನ್ನು ಬಳಸಿ ಪ್ರಮುಖ ಆಕರ್ಷಣೆಗಳನ್ನು ನಿರ್ಮಿಸಲಾಗಿದೆ. ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಾಲಯ, ಕರ್ನಾಟಕದ ಪ್ರಸಿದ್ಧ ತಾಣವಾದ ರಂಗನತಿಟ್ಟು, ಹಳ್ಳಿ ಸೊಗಡಿನ ರೈತನ ಮನೆ, ಏಳು ಬೆಟ್ಟದ ಒಡೆಯ ಮಲೆ ಮಹಾದೇಶ್ವರ, ಹತ್ತು ವಿವಿಧ ಕಡೆಗಳಲ್ಲಿ ಯುವ ಜನತೆಯನ್ನು ಸೆಳೆಯಲು ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಹೂವಿನ ಆಕೃತಿಯ ಮೂಲಕ ಕ್ಷಯ ರೋಗ ಕುರಿತು ಜಾಗೃತಿ, ನರೇಗಾ ಯೋಜನೆಯ ಮಾಹಿತಿಯನ್ನೊಳಗೊಂಡ ಸ್ಥಬ್ಧ ಚಿತ್ರ, ವಿವಿಧ ಆಕರ್ಷಕ ಬಗೆಯ ಅಡಿನಿಯಂ ಗಿಡಗಳ ಪ್ರದರ್ಶಿಕೆ, ಬೋನ್ಸಾಯ್ ಗಿಡ, ವಿವಿಧ ತರಕಾರಿ ಹಣ್ಣುಗಳನ್ನು ಬಳಸಿ ಕಲಾಕೃತಿಗಳ ಕೆತ್ತನೆ, ಇಕೆಬನಾ ಹೂವಿನ ಜೋಡಣೆ, ನಲವತ್ತು ಬಗೆಯ ವಿವಿಧ ಜಾತಿಯ ಹೂವುಗಳ ಅಲಂಕಾರಿಕ ಕುಂಡಗಳ ಜೋಡಣೆ ಇರಲಿದೆ. 1.50 ಲಕ್ಷ ವಿವಿಧ ಜಾತಿಯ ಅಲಂಕಾರಿಕ ಗಿಡಗಳಾದ ಪೆಟೊನಿಯಾ, ಸಾಲ್ವಿಯಾ, ಅಂಟಿರೈನಂ. ಸೆಲೋಶಿಯಾ, ಸೇವಂತಿಗೆ, ಜೀನಿಯಾ, ಪಾಯ್ನಿ ಸೆಟಿಯಾಗಳನ್ನು ಜೋಡಿಸಲಾಗುತ್ತದೆ. ವಿವಿಧ ಜಿಲ್ಲೆಗಳ ಕೈಮಗ್ಗ ನೇಕಾರರು ಸಹಕಾರ ಸಂಘಗಳು ಭಾಗವಹಿಸಿ ಕೈಮಗ್ಗ ಉತ್ಪನ್ನಗಳು, ಮೊಳಕಾಲ್ಮೂರು ರೇಷ್ಮೆ ಸೀರಿ, ಚಿಂತಾಮಣಿ ಸೀರೆ ಸೇರಿದಂತೆ ಹಲವು ಉತ್ಪನ್ನಗಳನ್ನು ಶೇ.20ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಕೃಷಿ, ಮೀನುಗಾರಿಕೆ, ಶಿಕ್ಷಣ, ಅರಣ್ಯ, ಪಶು ಸಂಗೋಪನೆ, ಆರೋಗ್ಯ, ಕೈಗಾರಿಕೆ ಇಲಾಖೆ ಮತ್ತು ಖಾದಿ ಗ್ರಾಮೋದ್ಯೋಗ ವತಿಯಂದ ಕಲಾಕೃತಿಗಳ ಪ್ರಾತ್ಯಕ್ಷಿತೆ, ರೈತರು ಬೆಳೆದ ವಿವಿಧ ಹಣ್ಣು, ತರಕಾರಿ, ಪ್ಲಾಂಟೇಷನ್‌ಗಳನ್ನು ಪ್ರದರ್ಶನದಲ್ಲಿ ಇವೆ. ಇದರೊಂದಿಗೆ ಸಂಜೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ‌್ಯಕ್ರಮಗಳು ನಡೆಯಲಿವೆ. ಒಟ್ಟಾರೆ ಕಾರ್ಯಕ್ರಮಕ್ಕೆ 28 ಲಕ್ಷ ರೂ ವೆಚ್ಚವಾಗಲಿದೆ. ಅಂತೆಯೇ ವಯಸ್ಕರಿಗೆ 30 ರೂ ಹಾಗೂ 6 ರಿಂದ 12 ವರ್ಷದ ಮಕ್ಕಳಿಗೆ 20 ರೂ ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಶಾಲಾ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. 24ರಂದು ಬೆಳಗ್ಗೆ 10ಗಂಟೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ರವಿಕುಮಾರ್ ಗಣಿಗ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.
ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಕೆ.ಎನ್.ರೂಪಶ್ರೀ, ತೋಟಗಾರಿಕೆ ಸಂಘದ ಉಪಾಧ್ಯಕ್ಷ ಡಾ. ಬಿ.ಎಸ್.ಉಮೇಶ್ ಚಂದ್ರ, ಎಸ್.ಪಿ.ಶ್ರೀಧರ್ ಇತರರಿದ್ದರು.
ಜ.24ರಿಂದ ಐದು ದಿನ ಫಲಪುಷ್ಪ ಪ್ರದರ್ಶನ: ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಮಾಹಿತಿ

You Might Also Like
ಈ ನಾಲ್ವರೊಂದಿಗೆ ನೀವು ಎಂದಿಗೂ ಜಗಳವಾಡಬೇಡಿ; ಅದರಿಂದ ನಿಮಗೆ ಹಾನಿ | Chanakya Niti
ಆಚಾರ್ಯ ಚಾಣಕ್ಯ ತನ್ನ ಒಂದು ನೀತಿಯ ಮೂಲಕ ಮಾನವನಿಗೆ ತನ್ನ ಜೀವನವನ್ನು ನಡೆಸುವ ಮಾರ್ಗವನ್ನು ಹೇಳಿದ್ದಾರೆ.…
ಬೊಜ್ಜು ಕರಗಿಸಿ ಫಿಟ್ ಆಗಿರಲು ಈ ತರಕಾರಿಗಳೇ ಸಾಕು; ನಿಮಗಾಗಿ ಹೆಲ್ತಿ ಮಾಹಿತಿ | Health Tips
ಇಂದಿನ ಕಾರ್ಯನಿರತ ಜೀವನದಲ್ಲಿ ತೂಕ ಹೆಚ್ಚಾಗುವುದು ತುಂಬಾ ಸಾಮಾನ್ಯ ಸಮಸ್ಯೆಯಾಗಿದೆ. ಅನೇಕರು ಹೆಚ್ಚಿದ ತೂಕದ ಬಗ್ಗೆ…
ಡಯಟ್ ಸೋಡಾ ಕುಡಿಯಲು ಇಷ್ಟಪಡುತ್ತೀರಾ?; ಹಾಗಾದ್ರೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದು.. | Health Tips
ನಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವ ಜನರು ಸಾಮಾನ್ಯ ಸೋಡಾಕ್ಕಿಂತ ಡಯಟ್ ಸೋಡಾ ಕುಡಿಯಲು…