ದಕ್ಷಿಣ ಕರ್ನಾಟಕದಲ್ಲಿ ಐದು ದಿನ ಬಾರಿ ಮಳೆ

rain fall
Published on

ಬೆಂಗಳೂರು:ರಾಜ್ಯದಲ್ಲಿ ಮುಂಗಾರು ಮುಗಿದ ಬೆನ್ನಲ್ಲೇ ಹಿಂಗಾರು ಮಳೆಯ ಆರ್ಭಟ ಜೋರಾಗಿದೆ. ದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಬಿರುಸಾಗಿ ವರ್ಷಧಾರೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

ಚಾಮರಾಜನಗರದ ಹರದನಹಳ್ಳಿ, ಚಿಕ್ಕಬಳ್ಳಾಪುರ, ಕಲಬುರಗಿ,ಶಿವಮೊಗ್ಗದ ಆಗುಂಬೆ, ಬೆಂಗಳೂರು ಸೇರಿ ರಾಜ್ಯದಲ್ಲಿ ಕೆಲ ಭಾಗಗಳಲ್ಲಿ ಗುರುವಾರ ಮಳೆಯಾಗಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಮುಂದಿನ 5 ದಿನ ಹಾಗೂ ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಅ.5ರಿಂದ ಮತ್ತು ಮೈಸೂರಿನಲ್ಲಿ ಅ.6ರಿಂದ ಮುಂದಿನ 3 ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಇಲಾಖೆ ಯೆಲ್ಲೋ ಅರ್ಲಟ್​ ನೀಡಿದೆ.

ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ವಿಜಯಪುರದಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅರ್ಲಟ್​ ಇರಲಿದೆ. ಬೀದರ್​, ಬಾಗಲಕೋಟೆ, ಹಾವೇರಿ, ಕಲಬುರಗಿ, ರಾಯಚೂರು ಮತ್ತು ಯಾದಗಿರಿಯಲ್ಲಿ ಮುಂದಿನ 4 ದಿನ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿ ವ್ಯಾಪ್ತಿಯ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಈ ಬಾರಿ ಹಿಂಗಾರು ಆಶಾದಾಯಕವಾಗಿದ್ದು, ವಾಡಿಕೆಯಷ್ಟೇ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಅಂದಾಜಿಸಿದೆ. ಅದರಂತೆ, ಅ.1ರಿಂದ ಶುರುವಾಗಿರುವ ಹಿಂಗಾರು ರಾಜ್ಯಾದ್ಯಂತ ಸುರಿಯುತ್ತಿದೆ. ದಕ್ಷಿಣ ಕರ್ನಾಟಕದಲ್ಲಿ ಮುಂದಿನ ಐದಾರು ದಿನ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಶ್ರೀನಿವಾಸರೆಡ್ಡಿ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net