

ಚೆನ್ನೈ: ನಕಲಿ ಮದ್ಯ ಸೇವಿಸಿದ ಕಾರಣ ಓರ್ವ ಮಹಿಳೆ ಸೇರಿದಂತೆ ಐವರು ಮೃತಪಟ್ಟಿರುವ ಘಟನೆ ತಮಿಳುನಾಡಿನ ವಿಲ್ಲುಪುರಂನಲ್ಲಿ ನಡೆದಿದೆ.
ಘಟನೆ ಸಂಬಂಧ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಿ ಸಿಎಂ ಸ್ಟಾಲಿನ್ ಆದೇಶ ಹೊರಡಿಸಿದ್ದಾರೆ.
ಮೃತ ಐವರು ನಕಲಿ ಮದ್ಯ ಸೇವಿಸಿದ ಕಾರಣ ಶನಿವಾರ ತಡರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಮೂವರು ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ.
ಭಾನುವಾರ ಸಮಜೆ ಮಹಿಳೆ ಸೇರಿದಂತೆ ಇನ್ನಿಬ್ಬರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಓರ್ವನನ್ನು ವಶಕ್ಕೆ ಪಡೆಯಲಾಗಿದ್ದು ಪ್ರಕರಣ ಸಂಬಂಧ ಮತ್ತಷ್ಟು ಜನರ ಬಂಧನವಾಗುವ ಸಾಧ್ಯತೆ ಇದೆಎಂದು ಹಿರಿಯ ಪೊಲೀಸ್ ಅಧಿಕಾರಿ ಒಬ್ಬರು ತಿಳಿಸಿದ್ಧಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ತಮಿಳುನಾಡು ಸಿಎಂ ಸ್ಟಾಲಿನ್ ನಕಲಿ ಮದ್ಯ ಹಾಗೂ ಡ್ರಗ್ಸ್ ನಿರ್ಮೂಲನೆಗೆ ನಮ್ಮ ಸರ್ಕಾರ ಆದ್ಯತೆ ನೀಡಿದ್ದು ಘಟನೆ ಸಂಬಂಧ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರದ ವತಿಯಿಂದ ಕೊಡಲಾಗುವುದು ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ.