ಟ್ರಕ್‌ಗೆ ಆಟೋ ಡಿಕ್ಕಿ; ಐವರು ಸಾವು, ಇಬ್ಬರ ಸ್ಥಿತಿ ಗಂಭೀರ

Five die after auto collides with truck in Warangal
Published on

ಹೈದರಾಬಾದ್: ಟ್ರಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಐವರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

- ಟ್ರಕ್ ಚಾಲಕ ಮದ್ಯದ ಅಮಲಿನಲ್ಲಿದ್ದ ಎಂದು ಶಂಕಿಸಿದ ಪೊಲೀಸರು

ವರ್ಧನ್ನಪೇಟೆ ಮಂಡಲದ ಯೆಲ್ಲಂಡ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಐವರು ಸಾವನ್ನಪ್ಪಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಪೊಲೀಸರ ಪ್ರಕಾರ, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಐದನೆಯವರು ಆಸ್ಪತ್ರೆಯಲ್ಲಿ ಅಸುನೀಗಿದರು. ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ.

ಆಟೊರಿಕ್ಷಾ ವಾರಂಗಲ್‌ನಿಂದ ತೊರ್ರೂರ್‌ಗೆ ಹೋಗುತ್ತಿದ್ದಾಗ ಎದುರಿನಿಂದ ಬಂದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಚಾಲಕ ಮದ್ಯ ಸೇವಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ರಾಜಸ್ಥಾನ ಮೂಲದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಮೃತರು ಮತ್ತು ಗಾಯಾಳುಗಳು ಜೇನು ಮಾರಾಟದಲ್ಲಿ ತೊಡಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net