More

    ಐದಕ್ಕೆ ಐದೂ ಗ್ಯಾರಂಟಿಗಳು ಸಾಕಾರ: ಸಿಎಂ ಸಿದ್ದರಾಮಯ್ಯ

    ಶಿವಮೊಗ್ಗ: ಸರ್ಕಾರ ರಚನೆಯಾದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದೂ ಗ್ಯಾರಂಟಿಗಳ ಅನುಷ್ಠಾನಕ್ಕೆ ಆದೇಶ ನೀಡಲಾಗಿತ್ತು. ಈಗ ಎಲ್ಲವೂ ಪೂರ್ಣವಾಗಿದೆ. ಇಂದು ಶಿವಮೊಗ್ಗ ಪಾಲಿಗೆ ಐತಿಹಾಸಿಕ ದಿನವಾಗಿದೆ. ನಮ್ಮ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ಮಾಸಿಕ 5-6 ಸಾವಿರ ರೂ. ವಿವಿಧ ರೀತಿಯಲ್ಲಿ ದೊರೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

    ನಗರದ ಹಳೇ ಜೈಲು ಮೈದಾನದಲ್ಲಿ ಶುಕ್ರವಾರ ಯುವನಿಧಿ ಯೋಜನೆ ಫಲಾನುಭವಿಗಳ ಖಾತೆಗೆ ಸಾಂಕೇತಿಕವಾಗಿ ಹಣ ಬಿಡುಗಡೆ ಮಾಡಿ, ಸ್ವಾಮಿ ವಿವೇಕಾನಂದ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿನ ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು, ರೈತರು, ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಬೇಕು ಎಂಬ ಕಾರಣಕ್ಕೆ ಐದು ಪ್ರಮುಖ ಭರವಸೆ ಈಡೇರಿಸಿದ್ದೇವೆ ಎಂದರು.
    ಕಳೆದ ವರ್ಷ ಜೂ.11ರಂದು ಶಕ್ತಿ ಯೋಜನೆಗೆ ಚಾಲನೆ ನೀಡಿದ್ದೆವು. ಇದುವರೆಗೆ 130.28 ಕೋಟಿ ಮಹಿಳೆಯರು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಗೃಹಜ್ಯೋತಿ ಗ್ಯಾರಂಟಿ ಈಡೇರಿಕೆಯಾದ ಬಳಿಕ ಇದುವರೆಗೆ 1.65 ಕೋಟಿ ಕುಟುಂಬಕ್ಕೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
    ಅನ್ನಭಾಗ್ಯಕ್ಕೆ ಐದು ಕೆಜಿ ಅಕ್ಕಿಯನ್ನು ಕೇಂದ್ರ ಸರ್ಕಾರ ಕೊಡಲಿಲ್ಲ. ಮಾರುಕಟ್ಟೆಯಲ್ಲೂ ಸಿಗಲಿಲ್ಲ. ಹೀಗಾಗಿ ಒಬ್ಬರಿಗೆ 170 ರೂ. ನೀಡುತ್ತಿದ್ದೇವೆ. ಗೃಹಲಕ್ಷ್ಮಿ ಯೋಜನೆಯಡಿ 1.17 ಕೋಟಿ ಮಹಿಳೆಯರಿಗೆ ಮಾಸಿಕ ಎರಡು ಸಾವಿರ ನೀಡುತ್ತಿದ್ದೇವೆ. ಇದುವರೆಗೆ ಇಷ್ಟೆಲ್ಲಾ ಸವಲತ್ತುಗಳನ್ನೂ ಯಾರಾದರೂ ನೀಡಿದ್ದರೇ ಎಂದು ಪ್ರಶ್ನಿಸಿದರು.
    ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾರ್ಜ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ವೈದ್ಯಕೀಯ ಶಿಕ್ಷಣ ಮತ್ತು ಕೌಶಾಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಕ್ರೀಡಾ ಮತ್ತು ಯುವಜನ ಸೇವೆ ಸಚಿವ ಬಿ.ನಾಗೇಂದ್ರ, ಮೀನುಗಾರಿಕೆ ಸಚಿವ ಮಂಕಾಳೆ ಎಸ್ ವೈದ್ಯ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಬಿ.ಕೆ.ಸಂಗಮೇಶ್ವರ್, ಬೇಳೂರು ಗೋಪಾಲಕೃಷ್ಣ, ಶಾರದಾ ಪೂರ‌್ಯಾನಾಯ್ಕಾ, ಎಚ್.ಡಿ.ತಮ್ಮಯ್ಯ, ಟಿ.ಡಿ.ರಾಜೇಗೌಡ, ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು, ಡಿ.ಎಸ್.ಅರುಣ್ ಮುಂತಾದವರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts