

ಉಪ್ಪಿನಂಗಡಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಆರು ತಿಂಗಳೊಳಗೆ ಪಂಚ ಗ್ಯಾರಂಟಿ ಯೋಜನೆಗಳ ಭರವಸೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಅದಕ್ಕಾಗಿ 56,000 ಕೋಟಿ ರೂ.ವನ್ನು ಬಜೆಟ್‌ನಲ್ಲಿ ಮೀಸಲಿಟ್ಟಿದೆ. ಈ ಪಂಚ ಗ್ಯಾರಂಟಿಯಿಂದ ಅದೆಷ್ಟೋ ಜನರಿಗೆ ಶಕ್ತಿ ತುಂಬುವ ಕೆಲಸ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಾಡಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ದ.ಕ. ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ತಿಳಿಸಿದರು.
ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಪುತ್ತೂರು ತಾಲೂಕು ವತಿಯಿಂದ ಉಪ್ಪಿನಂಗಡಿಯಲ್ಲಿ ಸೋಮವಾರ ನಡೆದ ನೋಂದಣಿ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ಹಾಗೂ ಯುವ ನಿಧಿ ವಿಶೇಷ ನೋಂದಣಿ ಅಭಿಯಾನವನ್ನು ಉದ್ಘಾಟಿಸಿ ವಾತನಾಡಿದರು.
ಉಪ್ಪಿನಂಗಡಿ, ಕೋಡಿಂಬಾಡಿ, 34 ನೆಕ್ಕಿಲಾಡಿ, ಹಿರೇಬಂಡಾಡಿ, ಬಜತ್ತೂರು ಗ್ರಾಮದವರ ನೋಂದಾವಣಿ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ಹಾಗೂ ಯುವ ನಿಧಿಯ ನೋಂದಣಿ ವಾಡಲಾಯಿತು.
ಅಕ್ರಮ ಸಕ್ರಮ ಸಮಿತಿ ಸದಸ್ಯ ಮುಹಮ್ಮದ್ ಬಡಗನ್ನೂರು, ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಕಡಬ ತಾಲೂಕು ಅಧ್ಯಕ್ಷ ಸುಧೀರ್ ಶೆಟ್ಟಿ, ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಸದಸ್ಯ ಪೂರ್ಣೇಶ್ ಭಂಡಾರಿ, ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷೆ ಲಲಿತಾ, ಕೋಡಿಂಬಾಡಿ ಗ್ರಾ.ಪಂ. ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು, ಉಪ್ಪಿನಂಗಡಿ ಗ್ರಾ.ಪಂ.ಸದಸ್ಯರಾದ ಯು.ಟಿ.ಮಹಮ್ಮದ್ ತೌಸೀಫ್, ಸಣ್ಣಣ್ಣ, ವಿನಾಯಕ ಪೈ, ಮೆಸ್ಕಾಂನ ಸಹಾಯಕ ಕಾರ್ಯಪಾಲಕ ಅಭಿಯಂತರ ರಾಮಚಂದ್ರ, ಆಹಾರ ಶಿರಸ್ತೇದಾರರಾದ ಸರಸ್ವತಿ, ಉದ್ಯೋಗ ವಿನಿಮಯ ಕೇಂದ್ರದ ದಯಾನಂದ, ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಸುಜಾತಾ, ಕೆಎಸ್ಸಾರ್ಟಿಸಿ ಪುತ್ತೂರು ಡಿಪೋ ಮೆನೇಜರ್ ಅಬ್ಬಾಸ್, ಗ್ಯಾರಂಟಿ ಸಮಿತಿ ಸದಸ್ಯರಾದ ಸಂತೋಷ್ ಭಂಡಾರಿ, ಸೇಸಪ್ಪ ನೆಕ್ಕಿಲು, ಬಬಿತಾ, ವಿಜಯಲಕ್ಷ್ಮೀ, ಅಬ್ಬು ಹುಸೈನ್, ಅಸ್ಮಾ, ಮುಹಮ್ಮದ್ ಫಾರೂಕ್ ಉಪಸ್ಥಿತರಿದ್ದರು.
ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಸ್ವಾಗತಿಸಿದರು. ತಾಲೂಕು ವಾಹಿತಿ ಶಿಕ್ಷಣ ಸಂವಹನ ಸಂಯೋಜಕ ಭರತ್ ನಿರೂಪಿಸಿದರು. ಉಪ್ಪಿನಂಗಡಿ ಗ್ರಾ.ಪಂ. ಕಾರ್ಯದರ್ಶಿ ಗೀತಾ ಶೇಖರ್ ವಂದಿಸಿದರು.