ಯಾದಗಿರಿ: ಬೈಕ್ಗೆ ಕೆಕೆಆರ್ಟಿಸಿ ಬಸ್ (KKRTC Bus) ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆ ಸುರುಪುರ ತಾಲ್ಲೂಕಿನ ತಿಂಥಣಿ ಬಳಿ ನಡೆದಿದೆ.
ಮೃತರನ್ನು ಆಂಜನೇಯ (35), ಗಂಗಮ್ಮ (28), ಪವಿತ್ರ (05), ರಾಯಪ್ಪ (03), ಹನುಮಂತು (01) ಎಂದು ಗುರುತಿಸಲಾಗಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಘಟನೆ ಕುರಿತು ಮಾತನಾಡಿರುವ ಪೊಲೀಸ್ ಅಧಿಕಾರಿಯೊಬ್ಬರು, ಮೂವರು ಮಕ್ಕಳು ಐದು ಜನ ಒಂದೇ ಬೈಕಿನಲ್ಲಿ ಸುರಪುರದಿಂದ ತಿಂಥಣಿಯತ್ತ ಹೊರಟ್ಟಿದ್ದರು. ಲಿಂಗಸೂಗುರು ಕಡೆಯಿಂದ ವೇಗವಾಗಿ ಬಂದ ಕೆಕೆಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮೂವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
ಲಾರಿಯನ್ನು ಓವರ್ಟೇಕ್ ಮಾಡಲು ಮುಂದಾದಾಗ ಎದುರಿಗೆ ಬರುತ್ತಿದ್ದ ಬೈಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಭೇಟಿ ನೀಡಿದ ಸುರುಪುರ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದರ್ಶನ್ರನ್ನು ಮದುವೆಗೆ ಯಾಕೆ ಕರೆದಿಲ್ಲ; ನಟ ಡಾಲಿ Dhananjay ನೀಡಿದ ಉತ್ತರ ಹೀಗಿದೆ
ವಿಜಯೇಂದ್ರ ಯುವಕರ ಕಣ್ಮಣಿ, ಕೆಳಗಿಳಿಸಿದರೆ ರಾಜ್ಯದಲ್ಲಿ ಬಿಜೆಪಿಗೆ 10 ಸ್ಥಾನ ಬರೋದಿಲ್ಲ: MP Renukacharya ಕಿಡಿ