ದ್ವಿಚಕ್ರ ವಾಹನಗಳಿಗೆ Bolero ಡಿಕ್ಕಿ; ಕೂಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಐವರು ಕಾರ್ಮಿಕರು ಸಾವು

Kolar Accident
Published on

ಕೋಲಾರ: ದ್ವಿಚಕ್ರ ವಾಹನಗಳಿಗೆ ಬೊಲೊರೋ (Bolero) ಪಿಕ್​ಅಪ್​ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕಿನ ಆಂಬ್ಲಿಕಲ್ ಸಮೀಪದ ಎನ್.ವಡ್ಡಹಳ್ಳಿ-ಗುಡಿಪಲ್ಲಿ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಮೃತರನ್ನು ಮುಳಬಾಗಿಲು ತಾಲ್ಲೂಕಿನ ನಾಗನಹಳ್ಳಿಯ ವೆಂಕಟರಾಮಪ್ಪ (50), ಗಾಯತ್ರಿ (43), ಕೋನಂಗುಂಟೆ ಗ್ರಾಮದ ವೆಂಕಟರಾಮಪ್ಪ (40), ಅಲುಮೇಲಮ್ಮ (30) ಹಾಗೂ ರಾಧಮ್ಮ ಎಂದು ಗುರುತಿಸಲಾಗಿದೆ.

ಮೃತರೆಲ್ಲರೂ ಕೂಲಿ ಕಾರ್ಮಿಕರೆಂದು ತಿಳಿದು ಬಂದಿದ್ದು, ಕೆಲಸ ಮಗಿಸಿಕೊಂಡು ಮನೆಗ ವಾಪ್​ ತೆರಳುತ್ತಿದ್ದಾಗ ಬೊಲೆರೋ ಪಿಕ್​ಅಪ್(Bolero Pickup) ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಓರ್ವನಿಗೆ ಗಾಯವಾಗಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರಕ್ಕೆ ರವಾನಿಸಲಾಗಿದೆ.

ಅತಿವೇಗ ಹಾಗೂ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದ್ದು, ಈ ಕುರಿತು ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net