ಟಿಪ್ಪರ್-ಕಾರಿನ ನಡುವೆ ಭೀಕರ ರಸ್ತೆ ಅಪಘಾತ; ಐದು ಮಂದಿ ಸ್ಥಳದಲ್ಲೇ ಸಾವು

Car Accident
Published on

ಚಾಮರಾಜನಗರ: ಕಾರು ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಿಂದುವಾಡಿ ಗ್ರಾಮದ ಬಳಿ ನಡೆದಿದೆ.

ಮೃತರ ಹೆಸರು ಹಾಗೂ ವಿಳಾಸ ಇನ್ನಷ್ಟೇ ತಿಳಿಯಬೇಕಿದ್ದು, ಪೊಲೀಸರು ಮೃತದೇಹಗಳನ್ನ ಹೊರತೆಗೆದಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ಧಾರೆ.

ಘಟನೆ ಕುರಿತು ಮಾತನಾಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಮೃತ ಐವರು ಮಂಡ್ಯ ಮೂಲದವರು ಎಂದು ತಿಳಿದು ಬಂದಿದ್ದು, ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ ಕಡೆಗೆ ಹೋಗುತ್ತಿದ್ದರು. ಟಿಪ್ಪರ್​ ಡಿಕ್ಕಿ ಹೊಡೆದ ರಭಸಕ್ಕೆ ಕಾರು  ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಚಾರ ತಿಳಿದು ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಧಿಕಾರಿಗಳು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net