ಹೈದರಾಬಾದ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು (Car) ಕೆರೆಗೆ ಉರುಳಿದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ತೆಲಂಗಾಣದ ಭುವನಗಿರಿ ಜಿಲ್ಲೆಯ ಪೋಚಂಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನಡೆದಿದೆ.
ಪೋಚಂಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ಜಲಾಲ್ಪುರ ಗ್ರಾಮದಲ್ಲಿ ನಡೆದಿದ್ದು, ನಸುಕಿನ ಜಾವ ಕೋತಗುಡೆಂನಿಂದ ಪೋಚಂಪಲ್ಲಿಗೆ ಪ್ರಯಾಣಿಸುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ನಸುಕಿನ ಜಾವ ಕೋತಗುಡೆಂನಿಂದ ಪೋಚಂಪಲ್ಲಿಗೆ ಪ್ರಯಾಣಿಸುತ್ತಿದ್ದ ವೇಳೆ ಕಾರು (Car) ಚಾಲಕನ ನಿಯಂತ್ರಣ ಕೆರೆಗೆ ಬಿದ್ದ ಪರಿಣಾಮ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಐದು ಮಂದಿ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೆರೆಗೆ ಬಿದ್ದಿದ್ದ ಕಾರನ್ನು (Car) ಹೊರತೆಗೆಯಲಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಕಾನೂನು ಪ್ರಕ್ರಿಯೆ ಮುಗಿದ ಬಳಿಕ ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತೀಯರೇ ಆದಷ್ಟು ಬೇಗ ನಿಮ್ಮ ಸಾವು ಬರಲಿದೆ; ನಾಲಿಗೆ ಹರಿಬಿಟ್ಟ ಉಗ್ರ Masood Azhar