ಈಜಲು ಬಾರದೆ ನೀರಿಗಿಳಿದ ಒಂದೇ ಕುಟುಂಬದ ಐವರ ದುರ್ಮರಣ

Drown
ಸಾಂದರ್ಭಿಕ ಚಿತ್ರ
Published on

ಉತ್ತರಕನ್ನಡ: ಈಜಲು ಬಾರದೆ ಹೊಳೆಗಿಳಿದ ಒಂದೇ ಕುಟುಂಬದ ಐವರು ದುರಂತ ಅಂತ್ಯ ಕಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಸಹಸ್ರಲಿಂಗ ಬಳಿಯ ಭೂತಗುಂಡಿಯಲ್ಲಿ ನಡೆದಿದೆ.

ಮೃತರನ್ನು ಉತ್ತರಕನ್ನಡ ಜಿಲ್ಲೆ ಶಿರಸಿ ನಗರದ ರಾಮನಬೈಲಿನ ನಿವಾಸಿಗಳಾದ ಮೌಲಾನ ಮಹಮ್ಮದ್ ಸಲೀಮ್ ಕಲೀಲ್ ರೆಹಮಾನ್ (44), ನಬಿಲ್ ನೂರ್ ಅಹ್ಮದ್‌(22), ಮಿಸ್ಬಾ ತಬಸುಮ್(21), ನಾದಿಯಾ ನೂರ್ (20), ಉಮರ್ ಸಿದ್ದಿಕ್(14) ಎಂದು ಗುರತಿಸಲಾಗಿದೆ.

Sirsi Death

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಭಾನುವಾರ ರಜೆ ಇದ್ದ ಕಾರಣ ಒಂದೇ ಕುಟುಂಬದ 20 ಸದಸ್ಯರು ಶಾಲ್ಮಲಾ ನದಿ ಪಾತ್ರದ ಭೂತನಗುಂಡಿ ಎಂಬ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ನಾದಿಯಾ ಶೇಖ್ ಹಾಗೂ ನಾಬಿಲ್ ಎಂಬುವವರು ಆಕಸ್ಮಿಕವಾಗಿ ನೀರಲ್ಲಿ ಬಿದ್ದ ಸಂದರ್ಭದಲ್ಲಿ ಅವರನ್ನು ಉಳಿಸಲು ಸಮೀಪವಿದ್ದ ಸಲೀಂ, ಉಮರ್ ಹಾಗೂ ಮಿಸಬಾ ನೀರಿಗೆ ಇಳಿದಿದ್ದಾರೆ.

ನೀರಿಗೆ ಇಳಿದ ಐದು ಮಂದಿಗೆ ಈಜು ಬರುತ್ತಿರಲಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ನೀರಿನ್ಲಲಿ ಮುಳುಗಿ ಮೃತಪಟ್ಟಿರುವ ಐವರು ಗುಂಡಿಯ ಆಳದಲ್ಲಿ ಸಿಲುಕಿರಬಹುದು ಎಂದು ಕುಟುಂಬಸ್ಥರು ಶಂಕಿಸಿದ್ಧಾರೆ. ಓರ್ವನ ಮೃತ ದೇಹ ಪತ್ತೆಯಾಗಿದ್ದು, ನಾಲ್ವರ ಮೃತ ದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿಗಳು ಭರದಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net