26.8 C
Bangalore
Friday, December 13, 2019

ಗೋದಾವರಿ ನದಿಯಲ್ಲಿ ತಲೆಕೆಳಗಾಗಿ ಮುಳುಗಿದ ಪ್ರವಾಸಿ ದೋಣಿ; ಐವರು ದುರ್ಮರಣ, 30 ಮಂದಿ ನಾಪತ್ತೆ

Latest News

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಅಧ್ಯಕ್ಷ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಮಲ್ಲಾಪುರದಲ್ಲಿ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ: ಜಾತ್ರೆ ಕಣ್ತುಂಬಿಕೊಂಡ ಅಪಾರ ಭಕ್ತರು

ನೆಲಮಂಗಲ: ತಾಲೂಕಿನ ಮಲ್ಲಾಪುರದ ಪ್ರಸಿದ್ಧ ಶ್ರೀ ಬಯಲು ಉದ್ಭವ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಕಡಲೆಕಾಯಿ ಪರಿಷೆ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಪರಿಷೆ...

ಹೈದರಾಬಾದ್​: ಆಂಧ್ರಪ್ರದೇಶದ ದೇವಿಪುತ್ರಂ ಬಳಿ ಗೋದಾವರಿ ನದಿಯಲ್ಲಿ ಪ್ರವಾಸಿಗರ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ ಐವರು ಮೃತಪಟ್ಟಿದ್ದಾರೆ. ಈ ದೋಣಿಯಲ್ಲಿ ಸಿಬ್ಬಂದಿಯೂ ಸೇರಿ ಒಟ್ಟು 62 ಮಂದಿ ಇದ್ದರು.

ಒಟ್ಟು 24 ಜನರನ್ನು ಸದ್ಯ ರಕ್ಷಣೆ ಮಾಡಲಾಗಿದ್ದು 30 ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೂರ್ವ ಗೋದಾವರಿಯ ಎಸ್​ಪಿ ಅದ್ನಾನ್ ನಯೀಮ್​ ಆಸ್ಮಿ ಹೇಳಿದ್ದಾರೆ.

10 ಮಂದಿಯನ್ನು ಸ್ಥಳೀಯರೇ ರಕ್ಷಣೆ ಮಾಡಿದ್ದರು. ಎರಡು ಎನ್​ಡಿಆರ್​ಎಫ್​ ತಂಡಗಳು ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ಹಾಗೂ ನಾಪತ್ತೆಯಾದವರ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಒಂದೊಂದು ತಂಡದಲ್ಲೂ 30 ಮಂದಿ ಇದ್ದಾರೆ ಎಂದು ಪರಿಹಾರ ಮತ್ತು ಪುನರ್ವಸತಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನದಿಯಲ್ಲಿ ತಲೆಕೆಳಗಾಗಿ ಮುಳುಗಿರುವ ಈ ರಾಯಲ್​ ವಸಿಷ್ಠ ದೋಣಿಯಲ್ಲಿ ಇದ್ದವರು ಬಹುತೇಕ ಮಂದಿ ಪ್ರಸಿದ್ಧ ಪ್ರವಾಸಿ ತಾಣವಾದ ರಾಜಮಂಡ್ರಿ ಬಳಿಯ ಪಾಪಿಕೊಂಡಲುವಿಗೆ ಪ್ರಯಾಣ ಮಾಡುತ್ತಿದ್ದರು. ಕಳೆದ ಒಂದು ವಾರದ ಮಳೆಯಿಂದ ಗೋದಾವರಿ ನದಿಯಲ್ಲಿ ಪ್ರವಾಹದ ಪ್ರಮಾಣವೂ ಹೆಚ್ಚಿತ್ತು. ದೋಣಿಯನ್ನು ಪತ್ತೆ ಹಚ್ಚಲು ಹೆಲಿಕಾಪ್ಟರ್ ​ಅನ್ನು ಕೂಡ ಒದಗಿಸಲಾಗಿದೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್​ ಮೋಹನ್​ ರೆಡ್ಡಿಯವರು ಪರಿಸ್ಥಿತಿಯ ಅವಲೋಕನ ಮಾಡಿದ್ದು, ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನೋಡಿಕೊಳ್ಳುವಂತೆ ಸ್ಥಳೀಯ ಮಂತ್ರಿಗಳು ಹಾಗೂ ಶಾಸಕರಿಗೆ ಸೂಚನೆ ನೀಡಿದ್ದಾರೆ. ಆಂಧ್ರಪ್ರದೇಶ ಪ್ರವಾಸೋದ್ಯಮ ಇಲಾಖೆಯ ಎರಡು ಬೋಟ್​ಗಳನ್ನು ಸ್ಥಳಕ್ಕೆ ಕಳಿಸಲಾಗಿದೆ.

ಗೋದಾವರಿ ನದಿಯಲ್ಲಿ ಸಂಚಾರ ಮಾಡುತ್ತಿರುವ ಎಲ್ಲ ಬೋಟ್​ಗಳ ಲೈಸನ್ಸ್​ ರದ್ದುಗೊಳಿಸಲು ಮುಖ್ಯಮಂತ್ರಿ ಆದೇಶ ಹೊರಡಿಸಿದ್ದಾರೆ. ಸದ್ಯ ಮುಳುಗಿರುವ ದೋಣಿಯೂ ಸಹ ಪ್ರವಾಸೋದ್ಯಮ ಇಲಾಖೆಯಿಂದ ಪರವಾನಗಿ ಪಡೆದಿಲ್ಲ. ಆದರೆ ಕಾಕಿನಾಡ ಬಂದರು ಅಧಿಕಾರಿಗಳಿಂದ ಸಂಚಾರಕ್ಕೆ ಅನುಮತಿ ಪಡೆದಿತ್ತು ಎಂದು ಪ್ರವಾಸೋದ್ಯಮ ಸಚಿವರು ತಿಳಿಸಿದ್ದಾರೆ.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....