ಮಂಡ್ಯ: ಹೃದಯಘಾತಕ್ಕೆ ಒಳಗಾಗಿ ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಐದು ರೂಪಾಯಿ ಡಾಕ್ಟರ್ ಎಂದೇ ಖ್ಯಾತರಾಗಿರುವ ಡಾ.ಎಸ್.ಸಿ.ಶಂಕರೇಗೌಡ ಅವರು ಚೇತರಿಸಿಕೊಳ್ಳುತ್ತಿದ್ದಾರೆ.
ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡಾ.ಶಂಕರೇಗೌಡರನ್ನು ಬುಧವಾರ ತೆರೆದ ಹೃದಯ ಸರ್ಜರಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಶಂಕರೇಗೌಡ ಅವರು ಚಿಕಿತ್ಸೆಯಿಂದಾಗಿ ಚೇತರಿಸಿಕೊಳ್ಳುತ್ತಿದ್ದು, ಎರಡು ಅಥವಾ ಮೂರು ದಿನದಲ್ಲಿ ಶಸ್ತ್ರಚಿಕಿತ್ಸೆ ನಡೆಯುವ ಸಾಧ್ಯತೆ ಇದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇನ್ನು ಶಂಕರೇಗೌಡ ಅವರು ಆರೋಗ್ಯದಿಂದ ಇದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ. ಅದಾಗ್ಯೂ ಕೆಲವರು ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹರಡುತ್ತಿದ್ದು, ದಯವಿಟ್ಟು ಯಾರೂ ಹಾಗೆ ಮಾಡಬೇಡಿ ಎಂದು ಕುಟುಂಬದವರು ಮನವಿ ಮಾಡುತ್ತಿದ್ದಾರೆ. ಆದರೂ ಕೆಲ ಕಿಡಿಗೇಡಿಗಳು ಸುಳ್ಳು ಮಾಹಿತಿಯನ್ನು ಹರಿಬಿಟ್ಟು ಗೊಂದಲ ಸೃಷ್ಟಿ ಮಾಡುತ್ತಿರುವುದು ಮುಂದುವರಿದಿದೆ.
ಶೂಟ್ ಮಾಡ್ಕೊಂಡು ಉದ್ಯಮಿ ಆತ್ಮಹತ್ಯೆ; ಡೆತ್ನೋಟ್ನಲ್ಲಿತ್ತು ಆ ಇಬ್ಬರ ಹೆಸರು..