ಭೀಕರ ಅಪಘಾತ: ಟ್ರಕ್​-ಆಟೋ ಮುಖಾಮುಖಿ ಡಿಕ್ಕಿ, ಐವರು ಸಾವು..

accident
Published on

ಬೀದರ್: ಟ್ರಕ್​ ಹಾಗೂ ಆಟೋ ಮುಖಾಮುಖಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವಿಗೀಡಾಗಿದ್ದಾರೆ. ಅದರಲ್ಲೂ ಮೃತಪಟ್ಟ ಐವರೂ ಮಹಿಳೆಯರು. ಇಂಥದ್ದೊಂದು ಭೀಕರ ಅಪಘಾತ ಬೀದರ್ ಜಿಲ್ಲೆಯಲ್ಲಿ ಸಂಭವಿಸಿದೆ.

ಐಷರ್ ಟ್ರಕ್ ಹಾಗೂ ಆಟೋರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪ್ರಕರಣದಲ್ಲಿ ಮಹಿಳೆಯೊಬ್ಬಳು ಸ್ಥಳದಲ್ಲೇ ಸಾವಿಗೀಡಾದರೆ, ಇನ್ನು ನಾಲ್ವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರಭಾವತಿ (36), ಯಾದಮ್ಮ (40), ಗುಂಡಮ್ಮ (52), ಜಕ್ಕಮ್ಮ (32), ರುಕ್ಮಿಣಿ (60) ಸಾವೀಗೀಡಾದ ದುರ್ದೈವಿಗಳು. ಇನ್ನು ಆರು ಮಂದಿಗೆ ಗಾಯಗಳಾಗಿದ್ದು, ಅವರನ್ನು ಬೀದರ್ ಹಾಗೂ ಮನ್ನಾಖೇಳ್ಳಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೀದರ್ ಜಿಲ್ಲೆ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಮೃತಪಟ್ಟ ಐವರು ಮಹಿಳೆಯರು ಹಾಗೂ 6 ಮಂದಿ ಗಾಯಾಳುಗಳು ಉಡಮನಳ್ಳಿ ಗ್ರಾಮಸ್ಥರು. ಬೆಮಳಖೇಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಉಂಟಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net