More

    ಐದು ವರ್ಷ ನಮ್ಮದೇ ಸರ್ಕಾರ, ನಾನೇ ಸಿಎಂ: ಸಿದ್ದರಾಮಯ್ಯ

    ಹೊಸಪೇಟೆ: ಐದು ವರ್ಷ ನಮ್ಮದೇ ಸರ್ಕಾರ ಅಧಿಕಾರದಲ್ಲಿರುತ್ತದೆ. ಈಗ ನಾನೇ ಮುಖ್ಯಮಂತ್ರಿ, ನಾನೇ ಮುಂದುವರಿಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು

    ನಗರದಲ್ಲಿ ಗುರುವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
    ಮುಖ್ಯಮಂತ್ರಿ ವಿಚಾರದಲ್ಲಿ ನಮ್ಮ ಪಕ್ಷದವರು ಗೊಂದಲದ ಹೇಳಿಕೆ ನೀಡುತ್ತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಐದು ವರ್ಷ ಸುಭದ್ರ ಆಡಳಿತ ನೀಡುತ್ತದೆ.
    ಯಾರೊ ಕೆಲಸಕ್ಕೆ ಬಾರದವರ ಮಾತುಗಳಿಗೆ ಮಹತ್ವ ನೀಡುವ ಅಗತ್ಯವಿಲ್ಲ ಎಂದು ಪರೋಕ್ಷವಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ತಿರುಗೇಟು ನೀಡಿದರು.

    ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರಿAದ ಬಿಜೆಪಿ ಬ್ರಮನಿರಸಗೊಂಡಿದ್ದಾರೆ. ಬಿಜೆಪಿಗೆ ಅಧಿಕಾರವಿಲ್ದೇ ಇರಲು ಸಾಧ್ಯವಿಲ್ಲ. ಈ ಹಿಂದೊಮ್ಮೆ ಆಪರೇಷನ್ ಕಮಲದಲ್ಲಿ ಯಶಸ್ಸು ಕಂಡಿದ್ದರಿAದ ಈಗ ಮತ್ತೊಮ್ಮೆ ಅಂತಹ ಪ್ರಯತ್ನಕ್ಕೆ ಕೈಹಾಕುತ್ತಿದೆ. ಅದು ಸಾಧ್ಯವಿಲ್ಲ.
    ರಾಜ್ಯದ ಜನರು ೧೩೬ ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿದ್ದಾರೆ. ಹೀಗಾಗಿ ಸರ್ಕಾರಕ್ಕೆ ಯಾವುದೇ ಭಯವಿಲ್ಲ. ಮೂವರು ಡಿಸಿಎಂ ಸೇರಿದಂತೆ ಮಹತ್ವದ ನಿರ್ಧಾರಗಳನ್ನು ಹೈಕಮಾಂಡ್ ಕೈಗೊಳ್ಳುತ್ತದೆ. ನಮ್ಮದು ಪ್ರಾದೇಶಿಕ ಪಕ್ಷವಲ್ಲ. ಕಾಂಗ್ರೆಸ್ ರಾಷ್ಟಿçÃಯ ಪಕ್ಷವಾಗಿದ್ದರಿಂದ ವರಿಷ್ಠರ ಜತೆಗೆ ಚರ್ಚಿಸಿ, ತೀರ್ಮಾನಿಸಲಾಗುತ್ತದೆ ಎಂದು ಹೇಳಿದರು.

    ಐದು ವರ್ಷ ನಮ್ಮದೇ ಸರ್ಕಾರ, ನಾನೇ ಸಿಎಂ: ಸಿದ್ದರಾಮಯ್ಯ

    ರಾಜ್ಯದಲ್ಲಿ ಯಾವುದೇ ರೀತಿಯ ಅಕ್ರಮ ಗಣಿಗಾರಿಕೆಗೆ ಅವಕಾಶವಿಲ್ಲ. ನಮ್ಮ ಹೋರಾಟದ ಫಲವಾಗಿ ಎ, ಬಿ, ಸಿ ಎಂದು ವರ್ಗೀಕರಿಸಲಾಗಿದೆ.
    `ಸಿ’ ಸೇರಿದಂತೆ ಯಾವುದೇ ಕ್ಯಾಟಗರಿಯಲ್ಲಿರುವ ಗಣಿಗಳು ಸಕ್ರಮವಿದ್ದರೆ ತಡೆಯುವುದಿಲ್ಲ. ಸಂಬAಧಿಸಿದ ಇಲಾಖೆಗಳಿಂದ ಪರವಾನಗೆ ಪಡೆಯದೇ ಗಣಿಗಾರಿಕೆ ನಡೆಸುತ್ತಿದ್ದರೆ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದರು.

    ಕನ್ನಡ ವಿಶ್ವವಿದ್ಯಾಲಯಕ್ಕೆ ಹಣಕಾಸಿನ ತೊಂದರೆಯಿರುವ ಬಗ್ಗೆ ವರದಿ ನೀಡಿದರೆ, ಖಂಡಿತ ಅನುದಾನ ಬಿಡುಗಡೆ ಮಾಡುತ್ತೇನೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಮಹಿಳಾ ಪೊಲೀಸ್ ಠಾಣೆ ಸ್ಥಾಪನೆ ಕುರಿತ ಪ್ರಸ್ತಾವನೆ ಪರಿಶೀಲಿಸುವುದಾಗಿ ಪ್ರತಿಕ್ರಿಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts