More

    ಶುದ್ಧ ನೀರಿನ ಘಟಕ ಸರಿಪಡಿಸಿ ; ಅಧಿಕಾರಿಗಳಿಗೆ ಜಿಪಂ ಅಧ್ಯಕ್ಷೆ ಲತಾ ಸೂಚನೆ

    ತುಮಕೂರು: ಜಿಲ್ಲೆಯಲ್ಲಿ ಬಹುತೇಕ ಶುದ್ಧ ನೀರಿನ ಘಟಕಗಳು ಕೈಕೊಟ್ಟಿದ್ದು, ಅವುಗಳನ್ನು ಸರಿಪಡಿಸಿ ಎಂದು ಎಲ್ಲ ಸಭೆಗಳಲ್ಲಿ ಸೂಚಿಸಿದಂತೆ ಮಂಗಳವಾರದ ಸಭೆಯಲ್ಲೂ ಜಿಪಂ ಅಧ್ಯಕ್ಷೆ ಎಂ.ಲತಾ ಸೂಚಿಸಿದರು.

    ಜಿಪಂ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆರ್‌ಒ ಪ್ಲಾಂಟ್‌ಗಳ ಬಗ್ಗೆ ಜಿಲ್ಲೆಯೆಲ್ಲೆಡೆ ದೂರುಗಳಿದ್ದು, ಎಷ್ಟು ಸರಿ ಹೇಳಿದರೂ ಸರಿಪಡಿಸುತ್ತಿಲ್ಲ ಎಂದು ಅಧಿಕಾರಿಗಳ ಮೇಲೆ ಲತಾ ಗರಂ ಆದರು.

    ಬೇಸಿಗೆ ಹಿನ್ನೆಲೆಯಲ್ಲಿ ನೀರಿನ ಅಭಾವವಿರುವ ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಿ, ಖಾಸಗಿ ಬೋರ್‌ವೆಲ್‌ಗಳಿಂದ ನೀರು ಪೂರೈಸಲು ಅವಕಾಶ ಕಲ್ಪಿಸಲಾಗಿದ್ದು, ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು.

    ಸಿಇಒ ಶುಭಾ ಕಲ್ಯಾಣ್ ಮಾತನಾಡಿ, ದುರಸ್ಥಿ ಮಾಡಬೇಕಿರುವ ಆರ್‌ಒ ಪ್ಲಾಂಟ್‌ಗಳ ಪಟ್ಟಿ ಮಾಡಿ, ದುರಸ್ಥಿಯಲ್ಲಿದೆ ಎಂದು ಬೋರ್ಡ್ ಹಾಕಬೇಕು. ವಾಟರ್‌ಮೆನ್‌ಗಳು ಪರಸ್ಪರ ಅಂತರ ಕಾಯ್ದುಕೊಂಡು ಕಾರ್ಯನಿರ್ವಹಿಸಬೇಕು ಎಂದರು.

    ಡಿಎಚ್‌ಒ ಡಾ.ಚಂದ್ರಿಕಾ ಮಾತನಾಡಿ, ಜಿಲ್ಲೆಯಲ್ಲಿ 1769 ಮಂದಿ ಕ್ವಾರಂಟೈನ್ ಮಾಡಲಾಗಿದ್ದು, 633 ಜನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದರಲ್ಲಿ 560 ಜನರು ಡಿಸ್ಚಾರ್ಜ್ ಆಗಿದ್ದಾರೆ. 3315 ಜನರ ಗಂಟಲುಸ್ರಾವ ಮಾದರಿ ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಅದರಲ್ಲಿ 2701 ಮಾದರಿ ನೆಗೆಟಿವ್ ಎಂದು ದೃಢಪಟ್ಟಿದೆ ಎಂದರು.

    474 ತಪಾಸಣೆಯ ವರದಿಯನ್ನು ನಿರೀಕ್ಷಿಸಲಾಗಿದ್ದು, ಈವರೆಗೂ ಇಬ್ಬರು ಮೃತಪಟ್ಟಿದ್ದು, ಒಬ್ಬರು ಗುಣಮುಖ ಹಾಗೂ ನಾಲ್ಕು ಮಂದಿಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿಂದ ಆರೋಗ್ಯ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.

    ಗ್ರಾಪಂ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನದಲ್ಲಿ ಸ್ವಚ್ಛತೆ ಮಾಡುವವರಿಗೆ ಮಾಸ್ಕ್, ಸ್ಯಾನಿಟೈಜರ್ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಕ್ಕಳು, ಗರ್ಭಿಣಿ, ಬಾಣಂತಿಯರಿಗೆ ಊಟದ ವ್ಯವಸ್ಥೆ ಮಾಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ನಟರಾಜ್ ಅವರಿಂದ ಜಿಪಂ ಉಪಾಧ್ಯಕ್ಷೆ ಶಾರದಾ ಮಾಹಿತಿ ಪಡೆದುಕೊಂಡರು. ಜಿಪಂ ಅಧಿಕಾರಿಗಳು ಸಭೆಯಲ್ಲಿದ್ದರು.

    207 ಗ್ರಾಮಗಳಲ್ಲಿ ನೀರಿಗೆ ಅಭಾವ: ಜಿಲ್ಲೆಯ 207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೀವ್ರ ಅಭಾವ ಎದುರಾಗಿದ್ದು, 106 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ಹಾಗೂ 101 ಗ್ರಾಮದಲ್ಲಿ ಖಾಸಗಿ ಕೊಳವೆಬಾವಿ ಮೂಲಕ ನೀರು ಪೂರೈಸಲಾಗುತ್ತಿದೆ. ಕುಡಿಯುವ ನೀರಿಗಾಗಿ 8.60ಕೋಟಿ ರೂಪಾಯಿ ಬಂದಿದ್ದು, ಚಿಕ್ಕನಾಯಕನಹಳ್ಳಿ, ತಿಪಟೂರು ಹಾಗೂ ಶಿರಾ ತಾಲೂಕಿಗೆ ತಲಾ 50 ಲಕ್ಷ ರೂ. ಹಾಗೂ ಉಳಿದ ತಾಲೂಕುಗಳಿಗೆ ತಲಾ 1 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಜಿಲ್ಲೆಯಲ್ಲಿರುವ 1170 ಆರ್‌ಒ ಪ್ಲಾಂಟ್‌ಗಳಲ್ಲಿ 194 ರಿಪೇರಿಯಲ್ಲಿವೆ.

    ಎಲ್ಲ ಗರ್ಭಿಣಿಯರನ್ನು ಪರೀಕ್ಷೆಗೊಳಪಡಿಸಬೇಕು. ಹೊರಭಾಗ ಅಥವಾ ಹಾಟ್‌ಸ್ಪಾಟ್ ಪ್ರದೇಶಗಳಿಂದ ಬಂದವರು ಸರ್ಕಾರಿ ಅಥವಾ ಖಾಸಗಿ ವೈದ್ಯರ ಬಳಿ ಬಂದಾಗ ಸ್ಕೋರ್ ಶೀಟ್ ಪ್ರಶ್ನೆಗೆ ಉತ್ತರಿಸಬೇಕು, ಅದರಲ್ಲಿ 6ಕ್ಕಿಂತ ಹೆಚ್ಚಿನ ಸ್ಕೋರ್ ಬಂದರೆ ಅವರ ಗಂಟಲು ದ್ರವ ಮಾದರಿ ಪರೀಕ್ಷೆಗೊಳಪಡಿಸಬೇಕು.
    ಶುಭಾಕಲ್ಯಾಣ್ ಸಿಇಒ, ಜಿಪಂ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts