More

    ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿ

    ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿ ರೈತರ ಅನುಕೂಲಕ್ಕಾಗಿ ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

    ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆಯು 17,400 ಹೆಕ್ಟರ್ ಪ್ರದೇಶದಲ್ಲಿ ಬೆಳೆಯಲಾಗಿದ್ದು, ಬಹುತೇಕ ಬೆಳೆಯು ಕಟಾವು ಹಂತದಲ್ಲಿದೆ. ಸದ್ಯ ಕಟಾವು ಪ್ರಗತಿಯಲ್ಲಿದ್ದು, ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವು ಯಂತ್ರಗಳ ಮೂಲಕ ಕಟಾವು ಕೈಗೊಳ್ಳಲಾಗುತ್ತಿದೆ.

    ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲಿಕರು ರೈತರಿಂದ ಪ್ರತಿ ಗಂಟೆಗೆ 4,000 ರೂ. ವರೆಗೆ ಬಾಡಿಗೆ ಹಣ ನಿಗದಿ ಪಡಿಸಿರುವ ಕುರಿತು ದೂರುಗಳ ಬಂದಿದ್ದು, ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿರುವ ಕಾರಣ ಕಟಾವು ಮಾಡಲು ಯಂತ್ರಕ್ಕೆ ಪ್ರತಿ ಗಂಟೆಗೆ ನ್ಯೂ ಹಾಲೆಂಡ್ /ಜಾನ್ ಡೀರ್ ಕಂಪನಿಯ ದೊಡ್ಡ ಕಟಾವು ಯಂತ್ರಕ್ಕೆ 3350 ರೂ. ಹಾಗೂ ಕ್ಲಾಸ್ ಮತ್ತು ಎಸಿಸಿ ಕಂಪನಿಯ ಕಟಾವು ಯಂತ್ರಕ್ಕೆ 2,700 ರೂ. ಮೀರದಂತೆ ಬಾಡಿಗೆ ನಿಗದಿಪಡಿಸಲಾಗಿದೆ. ಇದಕ್ಕಿಂತ ಹೆಚ್ಚಿನ ಹಣ ಪಡೆದಲ್ಲಿ ರಾಗಿ ಕಟಾವು ಯಂತ್ರದ ಮಾಲೀಕರ ವಿರುದ್ದ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಕೆ.ಎ.ದಯಾನಂದ ಅವರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts