More

    ಧ್ವಜ ಸಂಹಿತೆ ಪಾಲನೆಯಲ್ಲಿ ಇರಲಿ ಎಚ್ಚರ: ದಾವಣಗೆರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪೂರ್ವ ಸಿದ್ಧತಾ ಸಭೆ

    ದಾವಣಗೆರೆ: ಸರ್ಕಾರಿ ಕಚೇರಿಗಳಲ್ಲಿ ಹಳೆಯ ಧ್ವಜಗಳ ಬದಲಿಗೆ ಕಡ್ಡಾಯವಾಗಿ ಹೊಸ ಧ್ವಜ ಖರೀದಿಸಿ ಧ್ವಜ ಸಂಹಿತೆ ಪ್ರಕಾರ ಧ್ವಜಾರೋಹಣ ನೆರವೇರಿಸಬೇಕು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.

    ಡಿಸಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕಡ್ಡಾಯವಾಗಿ ಎಲ್ಲ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿರಬೇಕು ಎಂದರು.

    ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿ ಕಟ್ಟಡಗಳ ಹಾಗೂ ನಗರದ ಮುಖ್ಯ ವೃತ್ತಗಳಾದ ಜಯದೇವ ವೃತ್ತ, ಹೊಂಡದ ವೃತ್ತ, ಗುಂಡಿ ವೃತ್ತ, ಗಾಂಧಿ ವೃತ್ತ, ರಾಮ್ ಆ್ಯಂಡ್ ಕೋ ವೃತ್ತ, ಕೆಇಬಿ, ಶಿವಪ್ಪ, ಹಗೆದಿಬ್ಬ, ಶಿವಾಜಿ, ಅಂಬೇಡ್ಕರ್ ಸೇರಿ ಇತರೆ ವೃತ್ತಗಳಿಗೆ ದೀಪಾಲಂಕಾರ ಮಾಡಲು ಕೆಆರ್‌ಐಡಿಎಲ್ ಇಂಜಿನಿಯರ್‌ಗೆ ತಿಳಿಸಲಾಗಿದೆ ಎಂದರು.

    ಜಿಲ್ಲೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿ ಸಿದ್ಧಪಡಿಸಲಾಗಿದ್ದು, ಸನ್ಮಾನಿಸಲು ತೀರ್ಮಾನಿಸಲಾಗಿದೆ. ಇದಕ್ಕೆ ಜಿಲ್ಲಾಡಳಿತದ ಅನುಮೋದನೆ ಪಡೆಯುವಂತೆ ತಹಸೀಲ್ದಾರ್ ಅವರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

    ಪ್ಲಾಸ್ಟಿಕ್ ಧ್ವಜಗಳನ್ನು ಕಡ್ಡಾಯವಾಗಿ ಬಳಸುವಂತಿಲ್ಲ. ಒಂದು ಪಕ್ಷ ಅಂಗಡಿಗಳಲ್ಲಿ, ವ್ಯಾಪಾರ ವಹಿವಾಟು ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಧ್ವಜಗಳ ಮಾರಾಟ ಮತ್ತು ಬಳಕೆ ಮಾಡಿದಲ್ಲಿ ಅಂತಹವರ ವಿರುದ್ಧ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
    ಶಿವಾನಂದ ಕಾಪಶಿ ಜಿಲ್ಲಾಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts