More

    ನಟಿಗೆ ಖಾಸಗಿ ಅಂಗ ಪ್ರದರ್ಶನ: ಜೈಲಿನಿಂದ ಬಿಡುಗಡೆಯಾದ ಆರೋಪಿಗೆ ಅದ್ಧೂರಿ ಸ್ವಾಗತ!

    ಕೊಚ್ಚಿ: ನಟಿಗೆ ಖಾಸಗಿ ಅಂಗ ಪ್ರದರ್ಶಿಸಿದ ಆರೋಪದ ಮೇಲೆ ಜೈಲು ಪಾಲಾಗಿದ್ದ ಯುವಕನಿಗೆ ನಿನ್ನೆ ಜಾಮೀನು ಸಿಕ್ಕಿದ್ದು, ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಆರೋಪಿಗೆ ಅಖಿಲ ಕೇರಳ ಪುರುಷರ ಸಂಘ ಹೂವಿನ ಹಾರ ಹಾಕಿ ಅದ್ಧೂರಿ ಸ್ವಾಗತವನ್ನು ನೀಡಿದೆ.

    ಆರೋಪಿ ಸಾವದ್​ ಅಲುವಾ ಉಪ ಕಾರಾಗೃಹದಿಂದ ಬಿಡುಗಡೆಯಾಗಿದ್ದು, ಪುರುಷರ ಸಂಘದ ಸದಸ್ಯರು ಹೂವಿನ ಹಾರ ಹಾಕಿ ಬರಮಾಡಿಕೊಂಡು ಆತನಿಗೆ ಧೈರ್ಯ ತುಂಬಿದರು. ಇದನ್ನೂ ಓದಿ: ನಿಗಮ-ಮಂಡಳಿ ಲೆಕ್ಕಾಚಾರ ಶುರು: ಪ್ರಮುಖರ ಮೇಲೆ ಆಕಾಂಕ್ಷಿಗಳ ಒತ್ತಡ; ಬಜೆಟ್ ಮಂಡನೆ ಬಳಿಕ ನೇಮಕ ಪ್ರಕ್ರಿಯೆ

    ಮಾನಸಿಕ ಸ್ಥಿತಿಯೇ ಬದಲಾಗಿದೆ

    ಸಾವದ್​ಗೆ ಸ್ವಾಗತ ನೀಡುವುದಾಗಿ ಪುರುಷರ ಸಂಘದ ಮುಖ್ಯಸ್ಥ ಅಜಿತ್​ ಕುಮಾರ್ ಮೊನ್ನೆಯೇ ತಿಳಿಸಿದ್ದರು. ಬಿಡುಗಡೆಯಾದಾಗ ಸ್ವಾಗತ ಕೋರುತ್ತೇವೆ. ಈ ಆಪಾದನೆಯಿಂದ ಆತ ಆತ್ಮಹತ್ಯೆ ಮಾಡಿಕೊಳ್ಳುವ ಹಂತಕ್ಕೆ ಹೋಗಿದ್ದ. ಮನೆಯಿಂದ ಹೊರಬರಲಾಗದ ಪರಿಸ್ಥಿತಿಯಲ್ಲಿದ್ದಾನೆ. ಅವರ ಕುಟುಂಬ ಊರನ್ನೇ ಬಿಟ್ಟಿದೆ. ಸಾವದ್​ ಒಳ್ಳೆಯ ಕುಟುಂಬದಿಂದ ಬಂದವನು. ಈ ಘಟನೆಯಿಂದ ಸಂಪೂರ್ಣ ಕುಗ್ಗಿ ಹೋಗಿದ್ದಾನೆ. ಊಟವನ್ನೂ ಸಹ ಮಾಡುತ್ತಿಲ್ಲ. ಜೈಲಿನಿಂದ ಬಂದ ಬಳಿಕ ಆತನ ಮುಂದಿನ ನಡೆ ಏನು? ಆತನ ಮಾನಸಿಕ ಸ್ಥಿತಿಯೇ ಬದಲಾಗಿದೆ. ಅವರಿಗೆ ಹೊಸ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತೇವೆ ಎಂದು ಅಜಿತ್​ ಭರವಸೆ ನೀಡಿದ್ದಾರೆ.

    ನಾನೂ ಕೂಡ ನಂಬಿದ್ದೆ

    ಆರಂಭದಲ್ಲಿ ನಟಿ ಮಾಡಿದ ಆರೋಪವನ್ನು ನಾನೂ ಕೂಡ ನಂಬಿದ್ದೆ. ಆದರೆ, ಘಟನೆ ನಡೆದ ಎರಡು ದಿನಗಳ ಬಳಿಕ ನಟಿ ತಮ್ಮ ಇನ್‌ಸ್ಟಾಗ್ರಾಂ ಐಡಿ ಬಗ್ಗೆ ಹೇಳಿದ ನಂತರ ಆಕೆಯ ಉದ್ದೇಶ ನನಗೆ ಅರ್ಥವಾಯಿತು. ಇನ್​ಸ್ಟಾಗ್ರಾಂನಲ್ಲಿ ಹೆಚ್ಚಿನ ಫಾಲೋವರ್ಸ್​ ಪಡೆಯುವುದು ಆಕೆಯ ತಂತ್ರ ಎಂದು ಗೊತ್ತಾಯಿತು. ಆಕೆ ತನ್ನ ಇನ್​ಸ್ಟಾಗ್ರಾಂನಲ್ಲಿ ಒಳಉಡುಪು ಧರಿಸಿರುವ ಚಿತ್ರಗಳು ಮತ್ತು ವಿಡಿಯೋಗಳನ್ನು ಹೆಚ್ಚಾಗಿ ಹಂಚಿಕೊಳ್ಳುತ್ತಿರುವುದು ಸಾರ್ವಜನಿಕ ಗಮನವನ್ನು ಸೆಳೆಯುವುದಕ್ಕಾಗಿ. ಇಂತಹ ಘಟನೆಯ ಬಳಿಕ ಯಾವುದೇ ಹುಡುಗಿಯಾಗಲಿ ಅಷ್ಟೊಂದು ಕೂಲ್ ಆಗಿ ಮಾತನಾಡಲು ಸಾಧ್ಯವಾಗುವುದಿಲ್ಲ ಎಂದು ಅಜಿತ್​ ಕುಮಾರ್​ ಹೇಳಿದರು. ಡಿಜಿಪಿಗೆ ದೂರು ನೀಡಿದ ಬಳಿಕ ಆಕೆ ಹೊರಗೆ ಕಾಣುತ್ತಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಅನ್ನಭಾಗ್ಯ ಯೋಜನೆ: 10 ಕೆ.ಜಿ. ಆಹಾರಧಾನ್ಯ ಉಚಿತವಾಗಿ ವಿತರಿಸಲು ಆದೇಶ

    ಘಟನೆ ಹಿನ್ನೆಲೆ ಏನು?

    ಈ ಘಟನೆ ಮೇ 16ರ ಮಂಗಳವಾರ ನಡೆದಿತ್ತು. ನಟಿ ಹಾಗೂ ಮಾಡೆಲ್​ ಆಗಿರುವ ನಂದಿತಾ ಶಂಕರ ಅವರು ಇನ್​ಸ್ಟಾಗ್ರಾಂನಲ್ಲಿ ಘಟನೆಯನ್ನು ವಿವರಿಸಿದ್ದರು. ಅವರು ಹೇಳುವ ಪ್ರಕಾರ ಸಿನಿಮಾ ಶೂಟಿಂಗ್​ಗಾಗಿ ಎರ್ನಾಕುಲಂಗೆ ತೆರಳುತ್ತಿದ್ದರಂತೆ. ಈ ವೇಳೆ ಅಂಗಮಾಲಿ ಬಳಿ ಕೊಯಿಕ್ಕೋಡ್​ ಮೂಲದ ಆರೋಪಿ ಸಾವದ್​ ಬಸ್ಸನ್ನು ಏರಿದ್ದ. ಬಳಿಕ ಆತ ಇಬ್ಬರು ಮಹಿಳೆಯರು ಮಧ್ಯೆ ಬಂದು ಕುಳಿತುಕೊಂಡನಂತೆ. ಆ ಇಬ್ಬರು ಮಹಿಳೆಯರಲ್ಲಿ ನಂದಿತಾ ಕೂಡ ಒಬ್ಬರು. ಬಸ್​ ಹೊರಡಲು ಆರಂಭಿಸಿದಾಗ ನಂದಿತಾ ಅವರನ್ನು ಸ್ಪರ್ಶಿಸಲು ಆರಂಭಿಸಿದ್ದಾನಂತೆ. ನಾನು ಕಿಟಕಿ ಪಕ್ಕದಲ್ಲಿ ಕುಳಿತಿದ್ದೆ. ಎಲ್ಲಿಗೆ ಹೋಗುತ್ತಿದ್ದೀರಾ ಎಂದು ಕೇಳಿದ. ಆತ ಕೇಳಿದ ಎಲ್ಲದಕ್ಕೂ ನಾನು ಉತ್ತರಿಸಿದೆ. ನೋಡಲು ಆತ ಒಳ್ಳೆಯವನಂತೆ ಕಾಣುತ್ತಿದ್ದ. ಬಸ್​ ಕೆಲ ದೂರ ಸಾಗಿದ ಕೂಡಲೇ ಆತನ ಕೈ ನನ್ನ ದೇಹವನ್ನು ಸ್ಪರ್ಶಿಸುತ್ತಿರುವಂತೆ ಭಾಸವಾಯಿತು. ನಾನು ಆತನ ಕಡೆ ನೋಡಿದಾಗ ಆತನ ಒಂದು ಕೈ ಆತನ ಖಾಸಗಿ ಅಂಗದ ಮೇಲಿರುವುದನ್ನು ಗಮನಿಸಿದೆ. ಇದರಿಂದ ನನಗೆ ತೀವ್ರ ಮುಜುಗರವಾಯಿತು. ಬಳಿಕ ಬಸ್​ನ ಕಿಟಕಿ ಗಾಜನ್ನು ಮೇಲಕ್ಕೇರಿಸಿ ಆತನಿಂದ ಅಂತರ ಕಾಯ್ದುಕೊಂಡೆ. ಆದರೂ ತನ್ನ ದುಷ್ಕೃತ್ಯ ಮುಂದುವರಿಸಿದ್ದ. ಮತ್ತೆ ನೋಡುವಷ್ಟರಲ್ಲಿ ತನ್ನ ಪ್ಯಾಂಟ್​ ಜಿಪ್​ ತೆರೆದು ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ. ಈ ಕ್ಷಣದಲ್ಲಿ ಏನು ಮಾಡಬೇಕೆಂದು ತೋಚಲಿಲ್ಲ. ಬಳಿಕ ಮೊಬೈಲ್​ನಲ್ಲಿ ವಿಡಿಯೋ ರೆಕಾರ್ಡ್​ ಮಾಡಿಕೊಂಡು ಏನು ನಿನ್ನ ಸಮಸ್ಯೆ ಎಂದು ಆತನನ್ನು ಪ್ರಶ್ನೆ ಮಾಡಿದೆ. ಪ್ರಶ್ನೆ ಕೇಳುತ್ತಿದ್ದಂತೆಯೇ ಆತ ತಕ್ಷಣ ತನ್ನ ಪ್ಯಾಂಟ್​ ಜಿಪ್​ ಅನ್ನು ಹಾಕಿಕೊಂಡನು. ನಾನು ನನ್ನ ಧ್ವನಿಯನ್ನು ಜೋರು ಮಾಡಿದೆ. ಈ ವೇಳೆ ಬಸ್​ ಸಿಬ್ಬಂದಿ ಬಳಿ ಬಂದರು. ನಡೆದ ಘಟನೆಯನ್ನು ಅವರ ಮುಂದೆ ವಿವರಿಸಿದೆ. ದೂರು ನೀಡುತ್ತೀರಾ ಎಂದು ಬಸ್​ ಕಂಡಕ್ಟರ್​ ಪ್ರಶ್ನಿಸಿದರು. ನಾನು ಹೌದು ಎಂದೆ. ಈ ವೇಳೆ ಆರೋಪಿ ತನ್ನ ಪ್ಯಾಂಟ್​ ಜಿಪ್​ ಓಪನ್​ ಆಗಿಲ್ಲ ಎಂದು ವಾದಿಸಿದನು. ಬಸ್​, ವಿಮಾನ ನಿಲ್ದಾಣದ ಹತ್ತಿರ ನಿಲ್ಲುತ್ತಿದ್ದಂತೆ ಹಾಗೂ ಬಸ್​ನ ಬಾಗಿಲು ತೆರೆಯುತ್ತಿದ್ದಂತೆ ಆತ ಓಡಿ ಹೋದ. ಬಳಿಕ ಕಂಡಕ್ಟರ್​ ಮತ್ತು ಡ್ರೈವರ್ ಸ್ಥಳೀಯರ ನೆರವಿನಿಂದ​ ಚೇಸ್​ ಮಾಡಿ ಹಿಡಿದರು ಎಂದು ನಂದಿತಾ ವಿಡಿಯೋದಲ್ಲಿ ವಿವರಿಸಿದ್ದರು. (ಏಜೆನ್ಸೀಸ್​)

    ನಟಿಗೆ ಖಾಸಗಿ ಅಂಗ ಪ್ರದರ್ಶಿಸಿದ ಆರೋಪ: ಯುವಕನ ಪರ ನಿಂತ ಪುರುಷರ ಸಂಘ, ಕಳಚಿಬಿತ್ತಾ ನಟಿಯ ಮುಖವಾಡ?

    ಬಸ್ಸಿನಲ್ಲಿ ಮಹಿಳೆಯರಿಬ್ಬರ ಮಧ್ಯೆ ಕುಳಿತು ಕಾಮಚೇಷ್ಟೆ: ವಿಡಿಯೋ ಹರಿಬಿಟ್ಟು ಘಟನೆ ವಿವರಿಸಿದ ನಟಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts