

ಚೆನ್ನೈ : ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡಿಂಗ್ ಆಗುತ್ತಿದ್ದಂತೆ ಟೈರ್ ( flight tyre damaged ) ಸ್ಫೋಟಗೊಂಡಿದೆ. ಇದರಿಂದ ಪ್ರಯಾಣಿಕರು ಹಾಗೂ ವಿಮಾನ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ( Chennai international airport ) ಶನಿವಾರ ರಾತ್ರಿ ಈ ಭೀಕರ ಅಪಘಾತ ಸಂಭವಿಸಿದೆ.
ಮಸ್ಕತ್ನಿಂದ ಹೊರಟಿದ್ದ ವಿಮಾನ ( flight ) 146 ಪ್ರಯಾಣಿಕರೊಂದಿಗೆ ಚೆನ್ನೈ ತಲುಪಿತ್ತು. ವಿಮಾನ ಲ್ಯಾಂಡಿಂಗ್ ಆಗುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಟೈರ್ ( tyre ) ಸ್ಫೋಟಗೊಂಡಿದೆ.
ಈ ಅವಘಡದಲ್ಲಿ ಯಾವುದೇ ಹಾನಿಯಾಗಿಲ್ಲ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಈ ವಿಮಾನ ಪ್ರಯಾಣವನ್ನು ರದ್ದುಗೊಳಿಸಲಾಗಿದೆ ಮತ್ತು ಪ್ರಯಾಣಿಕರಿಗೆ ಆಯಾ ಹೋಟೆಲ್ಗಳಲ್ಲಿ ವಸತಿ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಕಾರಣದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ವಿಮಾನ ಲ್ಯಾಂಡಿಂಗ್