

ಮುಂಬೈ: ವಾಣಿಜ್ಯ ನಗರಿ ಮುಂಬೈನ ಗೇಟ್ವೇ ಸೇರಿದಂತೆ ನಗರದ ಹಲವು ಭಾಗಗಳು ಶನಿವಾರ ಅಚ್ಚರಿಯ ಘಟನೆಯೊಂದಕ್ಕೆ ಸಾಕ್ಷಿಯಾಯಿತು. ಆನ್ಲೈನ್ ಶಾಪಿಂಗ್ ದೈತ್ಯ ಫ್ಲಿಪ್ಕಾರ್ಟ್ಗೆ ಸೇರಿದ ವಾಹನವೊಂದು ಎರಡು ಸಾವಿರ ಮುಖಬೆಲೆಯ ನೋಟುಗಳನ್ನು ಗಾಳಿಯಲ್ಲಿ ಮಳೆ ಸುರಿಸಿದಂತೆ ಸುರಿಸಿದೆ.
ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚಲನಚಿತ್ರದ ದೃಶ್ಯದಂತೆ ಎರಡು ಸಾವಿರ ಮುಖಬೆಲೆಯ ನೋಟುಗಳು ಗಾಳಿಯಲ್ಲಿ ತೇಲಿಬರುತ್ತಿದ್ದರೆ, ಜನರು ಕುತೂಹಲಭರಿತರಾಗಿ ನೋಡುತ್ತಿರುವುದು ಕಂಡು ಬರುತ್ತದೆ. ಅಕ್ಟೋಬರ್ 8ರಿಂದ ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್ ಆರಂಭವಾಗಲಿದ್ದು, ಅದರ ಪ್ರಚಾರಕ್ಕಾಗಿ ಈ ರೀತಿ ಮಾಡಿತೇ ಎಂದು ಹಲವರು ಪ್ರಶ್ನಿಸಿದ್ದಾರೆ.
ವೈರಲ್ ಆಗಿರುವ ವಿಡಿಯೋದಲ್ಲಿ ಫ್ಲಿಪ್ಕಾರ್ಟ್ ಕಂಪನಿಗೆ ಸೇರಿದ ವಾಹನವೊಂದು ವಾಣಿಜ್ಯ ನಗರಿ ಮುಂಬೈನ ಪ್ರಮುಖ ಬೀದಿಗಳಲ್ಲಿ ಎರಡು ಸಾವರಿ ಮುಖಬೆಲೆಯ ನೋಟುಗಳನ್ನು ಗಾಳಿಯಲ್ಲಿ ತೂರುತ್ತಾ ಹೋಗುತ್ತಿರುವುದು ಕಂಡು ಬರುತ್ತದೆ. ರಸ್ತೆ ಬದಿಗಳಲ್ಲಿ ಇದನ್ನು ನೋಡುತ್ತಾ ಜನರು ಸುಮ್ಮನೆ ನಿಂತಿರುವುದು ಕಂಡು ಬರುತ್ತದೆ.
ಇದು ಆಕಸ್ಮಿವಾಗಿ ಆಯಿತೇ ಅಥವಾ ಪ್ರಚಾರಕ್ಕಾಗಿ ಕಂಪನಿ ಈ ರೀತಿ ಮಾಡಿತೇ ಎಂದು ಹಲವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ವಿಡಿಯೋ ಹಂಚಿಕೊಂಡಿರುವ ಫ್ಲಿಪ್ ಕಾರ್ಟ್, ಸದ್ಯದಲ್ಲೇ ಸ್ಪಷ್ಟನೆ ನೀಡಲಿದ್ದೇವೆ ಎಂದು ತಿಳಿಸಿದೆ. ಅಂದಹಾಗೆ ಫ್ಲಿಪ್ ಕಾರ್ಟ್ ಬಿಗ್ ಬಿಲಿಯಾನ್ ಡೇಸ್ ಸೇಲ್ ಅಭಿಯಾನ ಅಕ್ಟೋಬರ್ 8 ರಿಂದ 15ರವರೆಗೆ ನಡೆಯಲಿದೆ.