ಕನ್ನಡ ಭವನದಲ್ಲಿ ನಾಳೆ ವಿಶ್ವ ಜಾನಪದ ದಿನಾಚರಣೆ : ಕಸಾಪ ಅಧ್ಯಕ್ಷ ವಿಜಯಕುಮಾರ್ ತೇಗಲತಿಪ್ಪಿ ಹೇಳಿಕೆ

IMG-20230821-WA0027
Published on

ವಿಜಯವಾಣಿ ಸುದ್ದಿಜಾಲ ಕಲಬುರಗಿ

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಕನ್ನಡ ಭವನದಲ್ಲಿ ಮಂಗಳವಾರ [ಆ.೨೨] ಬೆಳಗ್ಗೆ ೧೧.೧೫ ಕ್ಕೆ `ವಿಶ್ವ ಜಾನಪದ ದಿನಾಚರನೆ' ಯನ್ನು ಏರ್ಪಡಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.


ಇಂದಿನ ಆಧುನಿಕ ಯುಗದಲ್ಲಿ ನಶಿಸಿ ಹೋಗುತ್ತಿರುವ ಜಾನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಇಂದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಜಾನಪದ ಪರಂಪರೆಯನ್ನು ಸಂರಕ್ಷಿಸಿ ಮುಂದಿನ ಹೊಸ ಪೀಳಿಗೆಗೆ ಪರಿಚಯಿಸುವ ಅಗತ್ಯವಿದ್ದು, ಅದಕ್ಕಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.


ಹಿರಿಯ ಜಾನಪದ ಕಲಾವಿದೆ ಶಕುಂತಲಾ ಡಿ ನಾಯಕ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಗೀತ ವಿವಿ ಯ ಸ್ಥಾಪಕ ಕುಲಪತಿ ಡಾ. ರಾಜಾ ಹನುಮಣ್ಣಾ ನಾಯಕ ದೊರೆ, ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಸೋಮಶೇಖರ ಗೋನಾಯಕ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.


ಜಾನಪದ ಕ್ಷೇತ್ರದ ಹಿರಿಯ ಕಲಾವಿದರಾದ ಪುಂಡಲಿಕ ಪೂಜಾರಿ, ಶರಣಪ್ಪ ದೊಡ್ಮನಿ, ದೇವೇಂದ್ರಪ್ಪ ಚಿಂಚನಸೂರ, ಬಾಬು ಪೂಜಾರಿ, ಲಲಿತಾಬಯಿ ನಾಯಕ್, ಶಂಕರಲಿAಗ ರುದ್ರವಾಡಿ, ಚಂದ್ರಕಾಂತ ಡಿಗ್ಗಿ ಅವರನ್ನು ಸತ್ಕರಿಸಲಾಗುವುದು ಎಂದು ತೇಗಲತಿಪ್ಪಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net