More

    ಪ್ರವಾಹ ಭೀತಿ ಪ್ರದೇಶಗಳಿಗೆ ಎಡಿಸಿ ಭೇಟಿ – ಕಾಳಜಿ ಕೇಂದ್ರ ತೆರೆಯಲು ಅಧಿಕಾರಿಗಳಿಗೆ ಸೂಚನೆ

    ಹೂವಿನಹಡಗಲಿ: ತುಂಗಭದ್ರಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ಭೀತಿಯಲ್ಲಿರುವ ಪ್ರದೇಶಗಳಿಗೆ ಅಪರ ಜಿಲ್ಲಾಧಿಕಾರಿ ಮಂಜನಾಥ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

    ತಾಲೂಕಿನ ನದಿ ತೀರದ ಕುರುವತ್ತಿ, ಮೈಲಾರ, ಅಂಗೂರು, ಬ್ಯಾಲಹುಣ್ಸಿ, ಬನ್ನಿಮಟ್ಟಿ ಸೇರಿ ವಿವಿಧ ಗ್ರಾಮಗಳಿಗೆ ತೆರಳಿ ಪ್ರವಾಹ ಪರಿಸ್ಥಿತಿ ವೀಕ್ಷಿಸಿದರು. ನದಿ ತಟದಲ್ಲಿರುವ ಮನೆಗಳಿಗೆ ನೀರು ನುಗ್ಗಿವಂತಿದ್ದರೆ ಅಂತಹ ಕುಟುಂಬಗಳನ್ನು ಸ್ಥಳಾಂತರಿಸಲು ಕಾಳಜಿ ಕೇಂದ್ರ ತೆರೆಯಬೇಕು. ನದಿ ಪಾತ್ರದಲ್ಲಿ ಯಾರೂ ವಿನಾಕಾರಣ ತಿರುಗಾಡದಂತೆ ಎಚ್ಚರಿಕೆ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

    ಎರಡು ದಿನಗಳಿಂದ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಈವರೆಗೆ ವಿವಿಧ ಬೆಳೆಯ 200 ಎಕರೆ ಹಾನಿಯಾಗಿದೆ. ಅಪಾಯದ ಸ್ಥಿತಿಯಲ್ಲಿ ಯಾವುದೇ ಹಳ್ಳಿಗಳಿಲ್ಲ. ಮುಂಜಾಗ್ರತಾ ಕ್ರಮವಾಗಿ 40ಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರ ಮಾಡಿ ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳೆ ಹಾನಿ ಮಾಹಿತಿ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಹಸೀಲ್ದಾರ್ ಕೆ.ವಿಜಯಕುಮಾರ ತಿಳಿಸಿದರು.

    ಬ್ಯಾರೇಜ್ ಒಳಹರಿವು ಹೆಚ್ಚಳ
    ಸಿಂಗಟಾಲೂರು ಏತ ನೀರಾವರಿ ಬ್ಯಾರೇಜ್‌ಗೆ ಶನಿವಾರ 99,835 ಕ್ಯೂಸೆಕ್ ಒಳಹರಿವಿದೆ. ಅಷ್ಟೇ ಪ್ರಮಾಣದ ನೀರನ್ನು 22 ಗೇಟ್‌ಗಳು ತೆಗೆದು ತುಂಗಭದ್ರಾ ನದಿಗೆ ಬಿಡಲಾಗಿದೆ ಎಂದು ಸಿಂಗಟಾಲೂರು ಏತ ನೀರಾವರಿ ಯೋಜನೆಯ ಇಇ ಐಗೋಳ ಪ್ರಕಾಶ ಮಾಹಿತಿ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts