Monday, 10th December 2018  

Vijayavani

ಆರ್​ಬಿಐ ಗವರ್ನರ್​ ಸ್ಥಾನಕ್ಕೆ ಊರ್ಜಿತ್​ ಪಟೇಲ್​ ರಾಜೀನಾಮೆ- ವಿಜಯ ಮಲ್ಯ ಗಡಿಪಾರಿಗೆ ಯುಕೆ ನ್ಯಾಯಾಲಯ ಆದೇಶ        ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ -ಮೊದಲ ದಿನ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ -ಮೈತ್ರಿ ಸರ್ಕಾರ ವಿರುದ್ಧ ಬಿಜೆಪಿ ಗುಡುಗು        ಸರ್ಕಾರದ ವಿರುದ್ದ ರೈತರ ಹೋರಾಟ -ದೀಡ್ ದಂಡ ನಮಸ್ಕಾರ, ಬಾರುಕೋಲು ಚಳುವಳಿ -ಪೀಪಿ ಊದಿ ನಾಯಕರನ್ನು ಎಚ್ಚರಿಸಿದ ರೈತರು        ಚಿಕ್ಕಬಳ್ಳಾಪುರದಲ್ಲಿ ಒತ್ತುವರಿ ಅರಣ್ಯ ಭೂಮಿ ತೆರವು -ಜೆಸಿಬಿ ಮುಂದೆ ಬಿದ್ದು ಗೋಳಾಡಿದ ರೈತರು -ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ        940 ದಿನಗಳ ನಿರಂತರ ವಿದ್ಯುತ್ ಉತ್ಪಾದನೆ -ಕೈಗಾ ಅಣುಸ್ಥಾವರದಿಂದ ವಿಶ್ವ ದಾಖಲೆ -ಸ್ಥಳೀಯರ ವಿರೋಧದ ನಡುವೆಯೂ ಸಾಧನೆ        ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ -ನಾಳೆ ವಾರ್ಡ್ ಗೆ ಶಿಫ್ಟ್ ಸಾಧ್ಯತೆ -ಅಲ್ಪಸಂಖ್ಯಾತ ವೈದ್ಯರ ಚಿಕಿತ್ಸೆ ಅಂತ ಪ್ರಸ್ತಾಪಿಸಿದ್ದ ಡಿಕೆಶಿ ಕ್ಷಮೆ        ಮಂಡ್ಯದ ನವದಂಪತಿಗೆ ವಿಶೇಷ ಗಿಫ್ಟ್ -ದೇಸೀ ಹಸು ಉಡುಗೊರೆ ನೀಡಿದ ಗೆಳೆಯರು -ಕಾಮಧೇನು ನೋಡಿ ಮದುಮಕ್ಕಳ ಸಂತಸ       
Breaking News

ಆಹಾರ ಉತ್ಪಾದನೆಗೆ ಬರ

Tuesday, 25.09.2018, 3:04 AM       No Comments
<< ಅತಿವೃಷ್ಟಿ, ಅನಾವೃಷ್ಟಿಯಿಂದ ಅಪಾರ ಬೆಳೆಹಾನಿ >>

| ಅಭಿಲಾಷ್ ಪಿಲಿಕೂಡ್ಲು

ಬೆಂಗಳೂರು: ರಾಜ್ಯದ ಕೆಲ ಭಾಗಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಸಂಕಷ್ಟ ಎದುರಿಸುತ್ತಿದ್ದರೆ, ಇನ್ನಿತರೆಡೆ ಮಳೆ ಕೊರತೆಯಿಂದಾಗಿ ಕೃಷಿ ಚಟುವಟಿಕೆಗೆ ತೀವ್ರ ಹಿನ್ನಡೆ ಉಂಟಾಗಿದ್ದು, ಆಹಾರ ಉತ್ಪಾದನೆಯಲ್ಲಿ ಭಾರಿ ಪ್ರಮಾಣದ ಕುಸಿತವಾಗುವ ಆತಂಕ ಎದುರಾಗಿದೆ.

ಪ್ರಸಕ್ತ ವರ್ಷ ಬರೋಬ್ಬರಿ 14.40 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವುದು ಬಹುತೇಕ ನಿಶ್ಚಿತವಾಗಿದೆ. ಮುಂಗಾರಿನಲ್ಲಿ 74.69 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಇರಿಸಲಾಗಿತ್ತು. ಇದರಲ್ಲಿ 63.65 ಲಕ್ಷ ಹೆಕ್ಟೇರ್ ಬಿತ್ತನೆಯಾಗಿದ್ದು, ಅನಾವೃಷ್ಟಿಗೆ 14.40 ಲಕ್ಷ ಹೆಕ್ಟೇರ್ ಹಾಗೂ ಅತಿವೃಷ್ಟಿಗೆ 27 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಮಾಸಾಂತ್ಯಕ್ಕೆ ಬೆಳೆ ಹಾನಿ ಕುರಿತ ಸಮಗ್ರ ವರದಿ ಸಿದ್ಧವಾಗಲಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.

ಹುಸಿಯಾದ ನಿರೀಕ್ಷೆ

ಏಪ್ರಿಲ್-ಮೇ ತಿಂಗಳಲ್ಲಿ ಮುಂಗಾರುಪೂರ್ವ ಮಳೆ ಉತ್ತಮವಾಗಿ ಸುರಿದ ಕಾರಣ ಮುಂಗಾರು ಬಿತ್ತನೆ ಚುರುಕಾಗಿತ್ತು. ಅಂದಾಜು 100 ಲಕ್ಷ ಟನ್ ಆಹಾರ ಉತ್ಪಾದನೆ ಗುರಿಯನ್ನು ಕೃಷಿ ಇಲಾಖೆ ಹೊಂದಿತ್ತು. ಆದರೆ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಅನಾವೃಷ್ಟಿಯಿಂದಾಗಿ ಬಹುತೇಕ ಬೆಳೆ ಹಾನಿಯಾಗಿವೆ. ಇದು ಉತ್ಪಾದನೆ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಹಾನಿ?

ವಿಜಯಪುರ ಜಿಲ್ಲೆಯಲ್ಲಿ 4.30 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. ಇದರಲ್ಲಿ 3.47 ಲಕ್ಷ ಹೆಕ್ಟೇರ್ ಬಿತ್ತನೆಯಾಗಿದೆ. ಮಳೆ ಕೊರತೆಯಿಂದ 2.03 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆಗೆ ಹಾನಿಯಾಗಿದೆ. ಚಿತ್ರದುರ್ಗ, ಗದಗ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಕಲಬುರಗಿ ಜಿಲ್ಲೆಯಲ್ಲೂ ತಲಾ 1 ಲಕ್ಷ ಹೆಕ್ಟೇರ್​ಗಿಂತ ಹೆಚ್ಚಿನ ಬೆಳೆ ಪ್ರದೇಶ ಅನಾವೃಷ್ಟಿಗೆ ತುತ್ತಾಗಿದೆ. ಕೊಡಗು, ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಸ್ವಲ್ಪ ಬೆಳೆ ಹಾನಿಯಾಗಿವೆ.

ಯಾವ ಬೆಳೆ ನಷ್ಟ?

ಹಾನಿಗೊಳಗಾದ 14.40 ಲಕ್ಷ ಹೆಕ್ಟೇರ್​ನಲ್ಲಿ 10.90 ಲಕ್ಷ ಹೆಕ್ಟೇರ್ ಆಹಾರ ಧಾನ್ಯಗಳಾಗಿವೆ. 4.7 ಲಕ್ಷ ಹೆಕ್ಟೇರ್ ಏಕದಳ ಧಾನ್ಯ ಹಾಗೂ 6.1 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ದ್ವಿದಳ ಧಾನ್ಯಗಳು ಮಳೆಯಿಲ್ಲದೆ ಒಣಗುತ್ತಿವೆ. 8 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ, 12 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಜೋಳ, ನವಣೆ, 86 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ರಾಗಿ, 2.2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಹಾನಿಯಾಗಿವೆ. 3.9 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ, 1.9 ಲಕ್ಷ ಹೆಕ್ಟೇರ್ ಹೆಸರು ಬೆಳೆ ನಾಶವಾಗಿದೆ. 2.67 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸೂರ್ಯಕಾಂತಿ, ಸೋಯಾಬೀನ್ ಸೇರಿ ಎಣ್ಣೆಕಾಳುಗಳು, 85 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ, ಕಬ್ಬು ಹಾಗೂ ತಂಬಾಕು ಇನ್ನಿತರ ವಾಣಿಜ್ಯ ಬೆಳೆಗಳಿಗೆ ಹಾನಿಯಾಗಿದೆ.

ಲಿಂಬೆ ಉತ್ಪಾದನೆ ಕುಸಿತ?

ವಿಜಯಪುರ ಜಿಲ್ಲೆಯಲ್ಲಿ ಲಿಂಬೆ ಬೆಳೆ ಭಾರಿ ಕುಸಿತವಾಗುವ ಸಾಧ್ಯತೆಯಿದೆ. ಲಿಂಬೆ, ಬಾಳೆ, ದಾಳಿಂಬೆ, ಈರುಳ್ಳಿ ಬೆಳೆಗೆ ಭಾರಿ ಪ್ರಮಾಣದ ಹಾನಿಯಾಗಿದೆ. 2014-15ರಲ್ಲಿ 1.83 ಲಕ್ಷ ಟನ್ ಲಿಂಬೆ ಉತ್ಪಾದನೆಯಾಗಿದ್ದು, 2017-18ರಲ್ಲಿ ಇದು 1.78 ಲಕ್ಷ ಟನ್​ಗೆ ಕುಸಿದಿತ್ತು. ಈ ವರ್ಷ ಇನ್ನಷ್ಟು ಕುಸಿಯುವ ಸಾಧ್ಯತೆಯಿದೆ. ರಾಜ್ಯದಲ್ಲೇ ಅತಿ ಹೆಚ್ಚು ದ್ರಾಕ್ಷಿ ಬೆಳೆಯುವ ಜಿಲ್ಲೆ ಎಂಬ ಖ್ಯಾತಿಗೆ ಪಾತ್ರವಾಗಿರುವ ವಿಜಯಪುರ, ಈ ವರ್ಷ ಇದನ್ನು ಉಳಿಸಿಕೊಳ್ಳಲು ಹೆಣಗಾಡಬೇಕಾಗಿದೆ. ಬೆಳೆಗೆ ನೀರಿಲ್ಲದೆ ಟ್ಯಾಂಕರ್ ಮೂಲಕ ನೀರು ಹಾಯಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ನೀರಿನ ಕೊರತೆ ಇನ್ನಷ್ಟು ತೀವ್ರವಾಗುವ ಸಾಧ್ಯತೆಯಿದೆ.

ಅನಾವೃಷ್ಟಿಯಿಂದಾಗಿ ಆಹಾರ ಉತ್ಪಾದನೆಯಲ್ಲಿ ಇಳಿಕೆಯಾಗಲಿದೆ. ಕಳೆದೊಂದು ವಾರದಿಂದ ಜಂಟಿ ಸಮೀಕ್ಷೆ ನಡೆಯುತ್ತಿದ್ದು, ಕೆಲ ಜಿಲ್ಲೆಗಳಲ್ಲಿ ಪೂರ್ಣಗೊಂಡಿದೆ. ಕೆಲ ಜಿಲ್ಲೆಗಳಲ್ಲಿ ಸಮೀಕ್ಷೆ ಪ್ರಗತಿಯಲ್ಲಿದೆ. ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಬೆಳೆ ಹಾನಿ ಪರಿಹಾರ ನೀಡುವ ಕುರಿತು ಸಂಬಂಧಿಸಿದ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ.

| ಬಿ.ವೈ.ಶ್ರೀನಿವಾಸ್, ನಿರ್ದೇಶಕ, ಕೃಷಿ ಇಲಾಖೆ.

Leave a Reply

Your email address will not be published. Required fields are marked *

Back To Top