Monday, 19th November 2018  

Vijayavani

ರಾಜಧಾನಿಯಲ್ಲಿ ಹಸಿರು ಕ್ರಾಂತಿ-ಸಿಎಂ ಎಚ್​ಡಿಕೆ, ಡಿಸಿಎಂ ಪರಮೇಶ್ವರ್​ಗೆ ಡೆಡ್​​ಲೈನ್-ಕೂಡಲೇ ಸ್ಥಳಕ್ಕೆ ಬರುವಂತೆ ರೈತರ ಪಟ್ಟು        ಸೈಟ್ ಕೇಳ್ತಿಲ್ಲ, BMW ಕಾರೂ ಕೇಳ್ತಿಲ್ಲ-ನಾವು ಕೇಳ್ತಿರೋದು ಬೆಳೆದ ಬೆಲೆಗೆ ಬೆಲೆಯಷ್ಟೇ-ಸಚಿವ ಕಾಶಂಪೂರ್​​ಗೆ ಮನವಿ ಸಲ್ಲಿಕೆ        ರೈತರು, ಹೆಣ್ಮಕ್ಕಳ ವಿಚಾರದಲ್ಲಿ ಗೌರವ ಇದೆ-ನನ್ನ ಹೇಳಿಕೆಯಲ್ಲಿ ಯಾವುದೇ ದುರುದ್ದೇಶ ಇಲ್ಲ-ಸಿಎಂ ಹೇಳಿಕೆ ಬಿಡುಗಡೆ        ಸಿಎಂ ಕೂಡಲೇ ಕ್ಷಮೆ ಕೇಳಬೇಕು-ನಾಳಿನ ಕೋರ್​​​ ಕಮಿಟಿ ಸಭೆಯಲ್ಲಿ ಹೋರಾಟದ ನಿರ್ಧಾರ-ಸರ್ಕಾರದ ವಿರುದ್ಧ ಗುಡುಗಿದ ಬಿಜೆಪಿ        ₹3,300 ಕೋಟಿ, 132 ಕಿ.ಮೀ. ದೂರ-ಗುರಗಾಂವ್​​ನಲ್ಲಿ ಎಕ್ಸ್​​ಪ್ರೆಸ್​​ ಹೈವೇ ಲೋಕಾರ್ಪಣೆಗೊಳಿಸಿದ ಪ್ರಧಾನಿ        ರೈಲು ಬರುವ ವೇಳೆ ಹಳಿ ಮಧ್ಯೆ ಮಲಗಿದ ಭೂಪ-ಪ್ರಾಣದ ಹಂಗು ತೊರೆದು ಹುಚ್ಚು ಸಾಹಸ-ಹೈದ್ರಾಬಾದ್​ನಲ್ಲೊಂದು ಮಿರ‍್ಯಾಕಲ್       
Breaking News

ಪ್ರವಾಹ ಎದುರಿಸಲು ಸನ್ನದ್ಧರಾಗಿ

Wednesday, 11.07.2018, 5:10 AM       No Comments

ಬಾಗಲಕೋಟೆ: ಮುಂಗಾರು ಮಾನ್ಸೂನ್ ಆರಂಭವಾಗಿದ್ದು, ಜಿಲ್ಲೆಯ ತ್ರಿವಳಿ ನದಿಗಳಾದ ಕೃಷ್ಣ, ಘಟಪ್ರಭೆ ಮತ್ತು ಮಲಪ್ರಭಾ ನದಿಗಳಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಮುಂಬರುವ ದಿನಗಳಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಿಸಲು ಅಧಿಕಾರಿಗಳು ಸನ್ನದ್ಧರಾಗ ಬೇಕೆಂದು ಜಿಲ್ಲಾಧಿಕಾರಿ ಶಾಂತಾರಾಮ ಕೆ.ಜಿ. ಸೂಚಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಪ್ರಕೃತಿ ವಿಕೋಪ ಹಾಗೂ ಪ್ರವಾಹ ನಿಯಂತ್ರಣ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರವಾಹದಿಂದ ಮುಳುಗಡೆಯಾಗುವ ಪ್ರದೇಶಗಳ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕಲ್ಲದೆ, ಜಾಗೃತಿ ಮೂಡಿಸಬೇಕು. ಆಯಾ ತಹಸೀಲ್ದಾರರು ಪ್ರವಾಹ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳಲು ಅಗತ್ಯ ಕ್ರಿಯಾಯೋಜನೆ ರೂಪಿಸಿಕೊಳ್ಳಬೇಕೆಂದು ನಿರ್ದೇಶನ ನೀಡಿದರು.

ಎಲ್ಲ ಇಲಾಖೆಗಳ ಮಾಹಿತಿ ಪಡೆದು ಪೂರ್ಣ ಪ್ರಮಾಣದ ಕ್ರಿಯಾಯೋಜನೆ ರೂಪಿಸಬೇಕು. ಪ್ರವಾಹ ಉಂಟಾದಲ್ಲಿ ವಿಳಂಬ ಮಾಡಬಾರದು. ತಹಸೀಲ್ದಾರ್, ಲೋಕೋಪಯೋಗಿ ಹಾಗೂ ಕುಡಿಯುವ ನೀರಿನ ಸರಬರಾಜು ಇಲಾಖೆಯವರು ಜಂಟಿಯಾಗಿ ಪ್ರವಾಹದಿಂದ ಬಾಧಿತಗೊಳಗಾಗುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದರು.

ಆಲಮಟ್ಟಿ, ನಾರಾಯಣಪುರ, ನವೀಲುತೀರ್ಥ ಹಾಗೂ ಹಿಪ್ಪರಗಿ ಜಲಾಶಯದ ಇಂಜಿನಿಯರ್​ಗಳು ಜಲಾಶಯದ ಅಧಿಕಾರಿಗಳೊಡನೆ ನಿರಂತರ ಸಂಪರ್ಕವಿಟ್ಟುಕೊಂಡು ನಿತ್ಯ ಹೊರ ಹರಿವು, ಸ್ಥಿತಿಗತಿ ಗಮನಿಸಬೇಕು. ಎಲ್ಲ ತಹಸೀಲ್ದಾರ ಕಚೇರಿ ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಗಳಲ್ಲಿ 247 ಕಂಟ್ರೋಲ್ ರೂಂ ಆರಂಭಿಸಬೇಕು. ಪ್ರವಾಹ ಪರಿಸ್ಥಿತಿ ಬಗ್ಗೆ ಬಾಧಿತಗೊಳ್ಳುವ ಎಲ್ಲ ಗ್ರಾಮಗಳಿಗೆ ತಹಸೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳು ಭೇಟಿ ನೀಡಬೇಕು. ಈ ಸಂದರ್ಭ ಗ್ರಾಮದ ಬಾಧಿತಗೊಳ್ಳುವ ಕುಟುಂಬ, ಜಾನುವಾರು ಹಾಗೂ ಹಾನಿಗೊಳಗಾಗಬಹುದಾದ ಕ್ಷೇತ್ರದ ಬಗ್ಗೆ ಸಂಪೂರ್ಣ ಮಾಹಿತಿ ಮತ್ತು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸ್ಥಳದ ಆಯ್ಕೆ ಆಹಾರ, ಧಾನ್ಯ ಸಂಗ್ರಹಣೆ, ಗಂಜಿ ಕೇಂದ್ರಕ್ಕಾಗಿ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಕೃಷ್ಣಾ ನದಿಯಿಂದ ಜಮಖಂಡಿ ತಾಲೂಕಿನಲ್ಲಿ ಮುತ್ತೂರು ಮತ್ತು ಕಂಕಣವಾಡಿ ಗ್ರಾಮಗಳು ಸಂಪೂರ್ಣ ಬಾಧಿತವಾಗುತ್ತಿದ್ದರೆ, 19 ಗ್ರಾಮಗಳು ಭಾಗಶಃ ಬಾಧಿತಗೊಳಗಾಗುತ್ತಿವೆ. ಬೀಳಗಿ ತಾಲೂಕಿನಲ್ಲಿ 10 ಗ್ರಾಮಗಳು ಭಾಗಶಃ ಬಾಧಿತಕ್ಕೊಳಗಾಗುತ್ತಿದ್ದು, ಆ ಗ್ರಾಮಗಳು ಈಗಾಗಲೇ ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಗೊಂಡಿದ್ದು, ಬೆಳೆ ಹಾನಿ ಮಾತ್ರ ಆಗಲಿದೆ. ನಾರಾಯಣಪುರ ಜಲಾಯಶದ ಹಿನ್ನೀರಿನಿಂದ ಬಾಗಲಕೋಟೆ ತಾಲೂಕಿನಲ್ಲಿ 18 ಹಳ್ಳಿಗಳು ಬಾಧಿತವಾಗುತ್ತವೆ. ಬೊಮ್ಮನಗಿಯಲ್ಲಿ 8 ಕುಟುಂಬಗಳ ಪ್ರವಾಹ ಬಂದಾಗ ಸ್ಥಳಾಂತರಗೊಳಿಸಬೇಕಾಗುತ್ತದೆ. ಹುನಗುಂದ ಧನ್ನೂರಿನ 70 ಕುಟುಂಬಗಳಿಗೆ ಸಮಸ್ಯೆ ಆಗುತ್ತದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಎಸಿ ಶಂಕರಗೌಡ ಸೋಮನಾಳ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back To Top