19 C
Bangalore
Thursday, November 14, 2019

ಕಳೆದುಕೊಂಡ ಜಾಗದಲ್ಲೇ ಮತ್ತೆ ಭವಿಷ್ಯದ ಕನಸು ಕಾಣುತ್ತಿರುವ ನೆರೆ ಸಂತ್ರಸ್ತರು

Latest News

ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕಿಸ್ತಾನದಲ್ಲಿ ಟೊಮ್ಯಾಟೊಗೆ ಬೆಲೆ ಎಷ್ಟಿರಬಹುದು? ಎಂದು ಊಹಿಸಬಲ್ಲಿರಾ?

ಇಸ್ಲಮಾಬಾದ್​: ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳನ್ನು ಭಾರತದಿಂದ ಆಮದು ಮಾಡಿಕೊಳ್ಳಲು ಸಾಧ್ಯವಾಗದ ಕಾರಣ ಪಾಕಿಸ್ತಾನದಲ್ಲಿ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಲೆ ಗಗನಕ್ಕೇರಿದೆ...

ಬೇಷರತ್ ಕ್ಷಮೆಯಾಚಿಸಿದ್ದ ರಾಹುಲ್ ಗಾಂಧಿ: ನ್ಯಾಯಾಂಗ ನಿಂದನೆ ಮೊಕದ್ದಮೆ ಕೈ ಬಿಟ್ಟ ಸುಪ್ರೀಂ ಕೋರ್ಟ್​

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಉಲ್ಲೇಖಿಸಿ ಚೌಕೀದಾರ್​ ಚೋರ್ ಹೈ ಎಂದಿದ್ದ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿಯವರ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ವಿಚಾರಣೆ...

ಕಂಠೀರವ ಸ್ಟುಡಿಯೋದಲ್ಲಿ ರೆಬಲ್ ಸ್ಟಾರ್ ದಿ. ಅಂಬರೀಷ್ ಅವರ ಮೊದಲ ಪುಣ್ಯ ತಿಥಿ: ಅರಮನೆ ಮೈದಾನದಲ್ಲಿ ಬೃಹತ್​ ಕಾರ್ಯಕ್ರಮ

ಬೆಂಗಳೂರು: ಖ್ಯಾತ ನಟ ಹಾಗೂ ಮಾಜಿ ಸಚಿವ ದಿ. ಅಂಬರೀಷ್ ಅವರ ಮೊದಲ ವರ್ಷದ ಪುಣ್ಯ ತಿಥಿ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಕಂಠೀರವ...

ದೇಶದ ಕಾರು ಮಾರುಕಟ್ಟೆಯ ಟಾಪ್ 10 ಕಾರುಗಳ ಪಟ್ಟಿಗೆ ಕೊರಿಯನ್​ ಕಂಪನಿ ಕಾರು!: ಉಳಿದಂತೆ ಮಾರುತಿಯದ್ದೇ ಕಾರುಬಾರು..

ಮುಂಬೈ: ದೇಶದ ಕಾರು ಮಾರುಕಟ್ಟೆಯ ಕಳೆದ ತಿಂಗಳ ಕಾರು ಮಾರಾಟ ದತ್ತಾಂಶ ಪ್ರಕಾರ, ಟಾಪ್​ 10 ಕಾರುಗಳ ಪಟ್ಟಿಯಲ್ಲಿ ಮಾರುತಿ ಕಾರುಗಳದ್ದೇ ಕಾರುಬಾರು....

ರಫೇಲ್ ವಿವಾದ ಇನ್ನು ಮುಗಿದ ಅಧ್ಯಾಯ: ಮರುಪರಿಶೀಲನಾ ಅರ್ಜಿಗಳು ವಜಾಗೊಳಿಸಿ ಸುಪ್ರೀಂ ಆದೇಶ

ನವದೆಹಲಿ: ವಿವಾದಾತ್ಮಕ ರಫೇಲ್ ಒಪ್ಪಂದವನ್ನು ಮೇಲ್ವಿಚಾರಣೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಗುರುವಾರ ತಳ್ಳಿಹಾಕಿದೆ. ರಫೇಲ್ ಒಪ್ಪಂದವನ್ನು ನ್ಯಾಯಾಲಯ ತನಿಖೆಗೆ ಒಳಪಡಿಸುವುದಿಲ್ಲ ಎಂದು...

ಸುದೀಶ್ ಸುವರ್ಣ ಕಳಸ

ಕಳಸ: ಭೀಕರ ಪ್ರವಾಹಕ್ಕೆ ಸಿಲುಕಿ ಸಂತ್ರಸ್ತರಾಗಿರುವ ಕಳಸ ತಾಲೂಕಿನ ಆರು ಗ್ರಾಮಗಳು ಹಳಿ ತಪ್ಪಿದ ರೈಲಿನಂತಾಗಿದ್ದು, ಕಳೆದುಕೊಂಡ ಜಾಗದಲ್ಲೇ ಮತ್ತೆ ಭವಿಷ್ಯ ಕಟ್ಟಿಕೊಳ್ಳಲು ನಿರಾಶ್ರಿತರು ಮುಂದಾಗಿದ್ದಾರೆ.

ಆರು ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಮರು ನಿರ್ಮಾಣ ಕಾರ್ಯ ಆರಂಭವಾಗಿದೆ. ಒಂದು ಕಡೆ ಸರ್ಕಾರ ಪರಿಹಾರ ಘೊಷಿಸಿ ಮಾಡಿ ಸಂತ್ರಸ್ತರ ಕಣ್ಣಲ್ಲಿ ಭರವಸೆ ಬೆಳಕು ಮೂಡಿಸಿದರೆ, ಮತ್ತೊಂದು ಕಡೆ ಸ್ಥಳೀಯರೇ ತಮ್ಮ ಊರನ್ನು ಮತ್ತೆ ನಿರ್ವಿುಸಲು ಟೊಂಕ ಕಟ್ಟಿ ಕೆಲಸ ಮಾಡುತ್ತಿದ್ದಾರೆ.

ರಾಜಕೀಯ ಪಕ್ಷಗಳು ಕಾರ್ಯಕರ್ತರು ತಮ್ಮ ಪಾಲಿನ ಸೇವೆಗೆ ಮುಂದಾಗಿದ್ದಾರೆ. ಇವರೊಂದಿಗೆ ಧಾರ್ವಿುಕ ಮತ್ತು ಸಾಮಾಜಿಕ ಸಂಘಟನೆಗಳು ಅವಿರತವಾಗಿ ಶ್ರಮಿಸುತ್ತಿವೆ. ರಾಜ್ಯದ ವಿವಿಧ ಭಾಗಗಳಿಂದ ಸಂಗ್ರಹಿಸಿದ ಆಹಾರ ಪದಾರ್ಥಗಳು, ಬಟ್ಟೆ ಮುಂತಾದ ವಸ್ತುಗಳನ್ನು ಆಯಾಯ ಪ್ರದೇಶಗಳಿಗೆ ತೆರಳಿ ತಲುಪಿಸಲಾಗುತ್ತಿದೆ.

ತಾಲೂಕಿನ ಬಹುತೇಕ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ. ಉಳಿದೆಡೆ ಮೆಸ್ಕಾಂ ಇಲಾಖೆ ಹಗಲಿರುಳು ಶ್ರಮಿಸಿ ಸಂಪರ್ಕ ಕಲ್ಪಿಸಲು ಯತ್ನಿಸುತ್ತಿದೆ. ಜೆಸಿಬಿಗಳ ಮೂಲಕ ರಸ್ತೆಗಳ ಮರುನಿರ್ವಣ ಕಾರ್ಯ ನಡೆಯುತ್ತಿದೆ.

ಬದುಕು ಕಟ್ಟಿಕೊಳ್ಳುವತ್ತ ಜನತೆ: ಪ್ರವಾಹ ಇಳಿದು ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಅಪಾಯದಲ್ಲಿದ್ದ ಕುಟುಂಬಗಳು ಮತ್ತೆ ಮನೆ ಕಡೆ ಹೆಜ್ಜೆ ಹಾಕಿದ್ದಾರೆ. ಕೃಷಿ ಭೂಮಿಗಳು ಸಂಪೂರ್ಣ ಕೊಚ್ಚಿ ಹೋಗಿರುವುದನ್ನು ನೋಡಿ ಕಣ್ಣೀರಿಡುತ್ತಿದ್ದಾರೆ. ಮನೆ, ಹಣ, ಆಸ್ತಿ ಕಳೆದುಕೊಂಡಿರುವ ಕುಟುಂಬಗಳು ಮತ್ತೆ ತಮ್ಮ ಬದುಕು ಕಟ್ಟಿಕೊಳ್ಳಲು ಮುಂದಾಗುತ್ತಿದ್ದಾರೆ. ಬಿದ್ದಿರುವ ಮನೆ ಅಡಿಯಲ್ಲಿ ಅಳಿದುಳಿದ ಸಾಮಗ್ರಿಗಳನ್ನು ತೆಗೆಯುವ ಕಾರ್ಯ ನಡೆಯುತ್ತಿದೆ.

ಪ್ರವಾಸಿಗರಿಲ್ಲದೆ ನೀರವ ಮೌನ: ಸದಾ ಜನರಿರುತ್ತಿದ್ದ ಪಟ್ಟಣದಲ್ಲಿ ನೀರವ ಮೌನ ಆವರಿಸಿದೆ. ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರ ಇಲ್ಲದೆ ವ್ಯಾಪಾರಸ್ಥರು ಬಾಗಿಲು ಮುಚ್ಚುವಂತಹ ಪರಿಸ್ಥಿತಿ ನಿರ್ವಣವಾಗಿದೆ. ಪ್ರವಾಸಿಗರು ಬಾರದೆ ಹೋಂ ಸ್ಟೇ, ಲಾಡ್ಜ್, ಪ್ರವಾಸಿಗರನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದ ಮಲ್ನಾಡ್ ಮಳಿಗೆಗಳು ವ್ಯಾಪಾರವಿಲ್ಲದೆ ಬಿಕೋ ಎನ್ನುತ್ತಿವೆ. ಹೊರನಾಡು, ಕಳಸ ದೇವಾಲಯಗಳಲ್ಲಿ ಭಕ್ತರ ಸಂಖ್ಯೆ ಇಳಿಕೆಯಾಗಿದೆ. ಕಳಸ-ಕೊಟ್ಟಿಗೆಹಾರ ಹೊರತುಪಡಿಸಿ ಉಳಿದೆಡೆ ವಾಹನ ಸಂಚಾರ ಹಾಗೂ ಬಸ್​ಗಳ ಓಡಾಟ ಆರಂಭವಾಗಿದೆ.

ವಾಟ್ಸ್​ಆಪ್ ಗ್ರೂಪ್​ನಿಂದ ನಿರಂತರ ಸೇವೆ: ತಾಲೂಕಿನ ಬಹುತೇಕ ಕಡೆ ಮನೆಗಳು ಕುಸಿದು ರಸ್ತೆ ಸಂಚಾರವಿಲ್ಲದೆ ಅತಂತ್ರರಾಗಿರುವ ಸ್ಥಳೀಯರಿಗೆ ನಮ್ಮೂರು ಕಳಸ ವಾಟ್ಸ್ ಆಪ್ ಗ್ರೂಪ್ ಮತ್ತು ಮಲ್ನಾಡ್ ಹೆಲ್ಪ್​ಲೈನ್ ಗ್ರೂಪ್ ಸದಸ್ಯರು ಸ್ಥಳಗಳಿಗೆ ತೆರಳಿ ಅಗತ್ಯ ಸಾಮಗ್ರಿಗಳನ್ನು ನೀಡಿ ಧೈರ್ಯ ತುಂಬುತ್ತಿದ್ದಾರೆ. ಗ್ರೂಪ್​ಗಳ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಇರುವವರಿಗೆ ಯಾವುದೇ ತೊಂದರೆಯಾಗದಂತೆ ಸಂರ್ಪಸಲು ಸೂಚಿಸಲಾಗಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹೋಗದ ಸ್ಥಳಗಳಿಗೆ ತೆರಳಿ ಅಲ್ಲಿ ಅಗತ್ಯ ಸೌಲಭ್ಯ ನೀಡಲಾಗುತ್ತಿದೆ. ಗ್ರೂಪ್ ಮೂಲಕವೇ ಅಧಿಕಾರಿಗಳಿಗೆ ಮಾಹಿತಿ ನೀಡಿ ಸೌಲಭ್ಯ ನೀಡಲು ಸಹಕರಿಸುತ್ತಿದ್ದಾರೆ.

- Advertisement -

Stay connected

278,453FansLike
560FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...

VIDEO: ದುರ್ಗಾಪೂಜಾ ಥೀಮ್​...

ಕೋಲ್ಕತ: ತೃಣಮೂಲ ಕಾಂಗ್ರೆಸ್​ನಿಂದ ನೂತನವಾಗಿ ಆಯ್ಕೆಯಾದ ಸಂಸದೆಯರಾದ ನುಸ್ರತ್ ಜಹಾನ್​ ಹಾಗೂ ಮಿಮಿ ಚಕ್ರಬರ್ತಿ ದುರ್ಗಾಪೂಜಾ ಹಾಡಿಗೆ ಮನಮೋಹಕವಾಗಿ ನೃತ್ಯ ಮಾಡಿದ್ದು ವಿಡಿಯೋ ಭರ್ಜರಿ ವೈರಲ್​ ಆಗಿದೆ. ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರುವ ಈ...