26.8 C
Bangalore
Friday, December 13, 2019

ನೆರೆ ಸಂತ್ರಸ್ತರಿಗೆ ಮುಖ್ಯಮಂತ್ರಿ ಸಾಂತ್ವನ

Latest News

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಮಲ್ಲಾಪುರದಲ್ಲಿ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ: ಜಾತ್ರೆ ಕಣ್ತುಂಬಿಕೊಂಡ ಅಪಾರ ಭಕ್ತರು

ನೆಲಮಂಗಲ: ತಾಲೂಕಿನ ಮಲ್ಲಾಪುರದ ಪ್ರಸಿದ್ಧ ಶ್ರೀ ಬಯಲು ಉದ್ಭವ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಕಡಲೆಕಾಯಿ ಪರಿಷೆ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಪರಿಷೆ...

ಹೆದ್ದಾರಿ 4ರ ಜಾಸ್ ಟೋಲ್ ಬಳಿ ಲಾರಿ-ಬಸ್ ಡಿಕ್ಕಿಯಾಗಿ 16 ಮಂದಿಗೆ ಗಾಯ

ನೆಲಮಂಗಲ: ತುಮಕೂರು-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 4ರ ಜಾಸ್ ಟೋಲ್ ಬಳಿ ಗುರುವಾರ ರಾಜ್ಯ ಸಾರಿಗೆ ಬಸ್ ಮತ್ತು ಲಾರಿ ನಡುವೆ ಸಂಭವಿಸಿರುವ ಅಪಘಾತದಲ್ಲಿ ಚಾಲಕ...

ವಿಜಯವಾಣಿ ಸುದ್ದಿಜಾಲ ಮಂಗಳೂರು
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ದ.ಕ.ಜಿಲ್ಲೆಗೆ ಭೇಟಿ ನೀಡಿ ಬೆಳ್ತಂಗಡಿ ಮತ್ತು ಬಂಟ್ವಾಳದಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಿದರು. ಸಂತ್ರಸ್ತರಿಗೆ ಅಹವಾಲು ಸ್ವೀಕರಿಸಿ ಸಾಂತ್ವನ ನೀಡಿದ ಸಿಎಂ ಸ್ಥಳದಲ್ಲೇ ಅಗತ್ಯ ನೆರವು ಘೋಷಿಸಿದರು. ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು ನೆರೆ ಹಾನಿ ಸಂಬಂಧಿಸಿ ಮಾಹಿತಿ ಪಡೆದರು.

ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಬೆಳ್ತಂಗಡಿಯ ಕುಕ್ಕಾವು ಸೇತುವೆ ಇದ್ದ ಪ್ರದೇಶಕ್ಕೆ ಆಗಮಿಸಿದ ಸಿಎಂ ಪ್ರವಾಹ ಹಾಗೂ ಭೂ ಕುಸಿತದಿಂದ ಉಂಟಾದ ಹಾನಿಯನ್ನು ವೀಕ್ಷಿಸಿದರು. ಶಾಸಕ ಹರೀಶ್ ಪೂಂಜಾ, ಸಂಸದ ನಳಿನ್‌ಕುಮಾರ್ ಕಟೀಲ್, ಆರ್‌ಎಸ್‌ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸ್ಥಳದಲ್ಲಿ ಉಪಸ್ಥಿತರಿದ್ದು ಹಾನಿ ಬಗ್ಗೆ ವಿವರ ನೀಡಿದರು. ಅಧಿಕಾರಿಗಳು ಸಕಾಲದಲ್ಲಿ ಬಂದಿಲ್ಲ ಎಂದು ಸ್ಥಳೀಯ ಕೆಲವು ಯುವಕರು ಈ ಸಂದರ್ಭ ಅಧಿಕಾರಿಗಳನ್ನು ಏರುಸ್ವರದಲ್ಲಿ ತರಾಟೆಗೆ ತೆಗೆದುಕೊಂಡರು. ಮಾಧ್ಯಮದವರ ವಿರುದ್ಧವೂ ಕಿಡಿ ಕಾರಿದರು.

ಗದ್ಗದಿತರಾದ ಸಿಎಂ
ಕುಕ್ಕಾವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತೆರೆದ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ಸಿಎಂ ಸಂತ್ರಸ್ತರ ಅಹವಾಲು ಸ್ವೀಕರಿಸಿದರು. ಮನೆ, ಆಸ್ತಿ ಸಂಪೂರ್ಣ ಹಾನಿಗೀಡಾದ ಬಗ್ಗೆ ಮಹಿಳೆಯರು ಕಣ್ಣೀರಿಡುತ್ತಾ ವಿವರಿಸಿದಾಗ ಸಿಎಂ ಗದ್ಗದಿತರಾದರು. ಹಾನಿಗೀಡಾದ 321 ಮನೆಗಳಿಗೆ ಅಗತ್ಯ ವಸ್ತು ಖರೀದಿಗೆ ತಕ್ಷಣ ತಲಾ 10 ಸಾವಿರ ರೂ. ನೀಡಲಾಗುವುದು. ಸುಮಾರು 275 ಮನೆಗಳ ನಿರ್ಮಾಣಕ್ಕೆ ತಲಾ 5 ಲಕ್ಷ ರೂ. ನೀಡುವುದಾಗಿ ಸಿಎಂ ಭರವಸೆ ನೀಡಿದರು.

ಪರಿಶೀಲನಾ ಸಭೆ
ಧರ್ಮಸ್ಥಳದಲ್ಲಿ ದೇವರ ದರ್ಶನದ ಬಳಿಕ ಪ್ರಾಕೃತಿಕ ವಿಕೋಪ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಜಿಲ್ಲೆಯ ಶಾಸಕರು ತಮ್ಮ
ಕ್ಷೇತ್ರಗಳ ಸಮಸ್ಯೆಗಳ ಬಗ್ಗೆ ಅಹವಾಲು ಮಂಡಿಸಿದರು. ಜನಪ್ರತಿನಿಧಿಗಳ ಬೇಡಿಕೆಗೆ ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಸ್ಪಂದನೆಯೂ ವ್ಯಕ್ತವಾಯಿತು. ಕಾನೂನು, ಕಟ್ಟಳೆಗಳನ್ನು ಬದಿಗಿಟ್ಟು ಮಾನವೀಯತೆ ನೆಲೆಯಲ್ಲಿ ಗರಿಷ್ಠ ಪರಿಹಾರಕ್ಕೆ ಅಧಿಕಾರಿಗಳು ಮುಂದಾಗಬೇಕು. ಹೊಸದಾಗಿ ಮನೆ ನಿರ್ಮಾಣಕ್ಕೆ ಜಾಗ ಹಾಗೂ ಖಾತಾ ಸಮಸ್ಯೆ ಸಹಿತ ಸೂಕ್ತ ದಾಖಲೆ ಪತ್ರಗಳ ಕೊರತೆ ಇದ್ದರೆ ಅದನ್ನು ಸರಿಪಡಿಸುವ ಹೊಣೆ ಅಧಿಕಾರಿಗಳದ್ದು ಎಂದು ಸಿಎಂ ಹೇಳಿದರು.

ಎಡಿಬಿ ಅನುದಾನ ಹೊಂದಾಣಿಕೆ
ಉಳ್ಳಾಲ, ಸಸಿಹಿತ್ಲು ಸಹಿತ ಕಡಲ್ಕೊರೆತ ಪ್ರದೇಶದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಎಡಿಬಿ ಯೋಜನೆಯ 900 ಕೋಟಿ ರೂ.ಮೊತ್ತದಲ್ಲಿ ಎರಡನೇ ಹಂತದ 152 ಕೋಟಿ ರೂ. ಬಳಸಬಹುದು. ಕೃಷಿ ಹಾನಿಗೆ ಪ್ರತ್ಯೇಕ ಪರಿಹಾರ ನೀಡಲಾಗುವುದು. ಹಾನಿಗೊಂಡ ರಸ್ತೆ ಹಾಗೂ ಸೇತುವೆಗಳನ್ನು ಸರಿಪಡಿಸಲಾಗುವುದು. ಈ ಬಗ್ಗೆ ಜಿಲ್ಲಾ ಪಂಚಾಯ್ತಿ ಹಾಗೂ ಲೋಕೋಪಯೋಗಿ ಇಲಾಖೆಯಿಂದ ಜಿಲ್ಲಾಡಳಿತ ಸಮಗ್ರ ವರದಿಯನ್ನು ತರಿಸಿಕೊಂಡು ಸರ್ಕಾರಕ್ಕೆ ಆದಷ್ಟು ಬೇಗ ಸಲ್ಲಿಸಬೇಕು ಎಂದು ಸಿಎಂ ಸೂಚಿಸಿದರು. ಜಿಲ್ಲೆಯ ಮೆಡಿಕಲ್ ಕಾಲೇಜುಗಳ ನೆರವು ಪಡೆದು ಪ್ರತೀ ಸಂತ್ರಸ್ತ ಮನೆಯಲ್ಲಿ ಆರೋಗ್ಯ ತಪಾಸಣೆ ನಡೆಸಬೇಕು. ಕುಡಿಯುವ ನೀರು ಕಲುಷಿತ ಪ್ರಕರಣಗಳಿಗೆ ಆಸ್ಪದ ನೀಡಬಾರದು. ಸಾಂಕ್ರಾಮಿಕ ರೋಗಗಳ ಬಗ್ಗೆ ಎಚ್ಚರ ವಹಿಸಬೇಕು ಎಂದು ಸಿಎಂ ಸಲಹೆ ನೀಡಿದರು.

ಇನ್ನು ಬದುಕಿ ಏನು ಪ್ರಯೋಜನ, ಸಂತ್ರಸ್ತರ ಅಳಲು
ಮನೆ, ಆಸ್ತಿ ಕಳಕೊಂಡಿದ್ದೇವೆ. ಇನ್ನು ಬದುಕಿ ಏನು ಪ್ರಯೋಜನ. ನಮಗೆ ಎಲ್ಲಿದೆ ಆಸರೆ.. ಹೀಗೆಂದು ಕುಕ್ಕಾವು ಪರಿಹಾರ ಕೇಂದ್ರದಲ್ಲಿ ಮಹಿಳೆಯರು ತಮ್ಮ ಮಕ್ಕಳನ್ನು ತಬ್ಬಿ ಮುಖ್ಯಮಂತ್ರಿ ಅವರ ಮುಂದೆ ಸಂಕಷ್ಟ ತೋಡಿಕೊಂಡರು. ಇದ್ದಕ್ಕಿದ್ದಂತೆ ಮನೆ ನೀರಿನಲ್ಲಿ ಕೊಚ್ಚಿಹೋಯಿತು. ಜೀವ ಮಾತ್ರ ಉಳಿದಿದೆ. ಕಪಾಟಿನಲ್ಲಿ ಕಷ್ಟ ಪಟ್ಟು ದುಡಿದು ಸಂಪಾದಿಸಿದ ಹಣ, 120 ಗ್ರಾಂ ಚಿನ್ನವಿತ್ತು. ಈಗ ಸುಮಾರು 10 ಕಿ.ಮೀ ದೂರದಲ್ಲಿ ಕಪಾಟು ನದಿಯಲ್ಲಿ ಪತ್ತೆಯಾಗಿದೆ.. ಹೀಗೆಂದು ಸಂತ್ರಸ್ತರೊಬ್ಬರು ಸಮಸ್ಯೆ ತೋಡಿಕೊಂಡರು. ಎಲ್ಲವನ್ನೂ ತಾಳ್ಮೆಯಿಂದ ಆಲಿಸಿದ ಮುಖ್ಯಮಂತ್ರಿ, ಆತಂಕ ಪಡಬೇಡಿ. ಸರ್ಕಾರ ನಿಮ್ಮ ಜತೆ ಇದೆ ಎಂದು ಭರವಸೆ ನೀಡಿದರು.

ಬೆಳ್ತಂಗಡಿ ವಿಪತ್ತು ಬಾಧಿತ ಪ್ರದೇಶ ಘೋಷಣೆ
ಮಂಗಳೂರು: ಕಳೆದ ಕೆಲವು ದಿನಗಳಲ್ಲಿ ಸುರಿದ ಮಳೆಯ ಪ್ರವಾಹದಿಂದ ಗರಿಷ್ಠ ಪ್ರಮಾಣದಲ್ಲಿ ನಷ್ಟ ಸಂಭವಿಸಿರುವ ಬೆಳ್ತಂಗಡಿ ತಾಲೂಕನ್ನು ವಿಪತ್ತು ಬಾಧಿತ ಪ್ರದೇಶವೆಂದು ಘೋಷಿಸಿ ತೊಂದರೆಗೊಳಗಾದ ಜನರಿಗೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು ಎಂದು ಶಾಸಕ ಯು.ಟಿ.ಖಾದರ್ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ.

ಮಳೆಯಿಂದ ಜಿಲ್ಲೆಯ ವಿವಿಧೆಡೆ ನಷ್ಟ ಸಂಭವಿಸಿದ ಪ್ರದೇಶಗಳ ಜನರಿಗೆ ಅಗತ್ಯ ಸೌಕರ್ಯ ಒದಗಿಸಲು ಜಿಲ್ಲೆಗೆ ವಿಶೇಷ ಪ್ಯಾಕೇಜ್ ಒದಗಿಸಬೇಕು. ಕಳೆದ ವರ್ಷ ಕೊಡಗಿನಲ್ಲಿ ಪ್ರಾಕೃತಿಕ ವಿಕೋಪದಿಂದ ವಸತಿ, ಜಮೀನು, ಜೀವನ ನಿರ್ವಹಣೆ ವ್ಯವಸ್ಥೆ ಕಳೆದುಕೊಂಡವರಿಗೆ ಸಮ್ಮಿಶ್ರ ಸರ್ಕಾರ ಕಳೆದ ಬಾರಿ ಕೊಡಗು ಪರಿಹಾರ ನೀಡಿದ ಮಾದರಿಯಲ್ಲೇ ಈ ಬಾರಿಯ ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸಬೇಕು ಎಂದವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಸಿಎಂ ಬಳಿಗೆ ಕಾಂಗ್ರೆಸ್ ನಿಯೋಗ
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕರಾದ ಐವನ್ ಡಿಸೋಜ, ಮೊದಿನ್ ಬಾವ ಅವರನ್ನು ಒಳಗೊಂಡ ಪಕ್ಷದ ಮುಖಂಡರ ನಿಯೋಗ ಈ ಬಗ್ಗೆ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದೆ ಎಂದು ಖಾದರ್ ಮಾಹಿತಿ ನೀಡಿದರು.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....