ಪ್ರವಾಹದಲ್ಲಿ ಸಿಲುಕಿದ್ದ ದಂಪತಿ ರಕ್ಷಣೆ

Latest News

ಚೆನ್ನೈ ರೈಲು ನಿಲ್ದಾಣವೊಂದರಲ್ಲಿ ಸೆಲೆಬ್ರಿಟಿ ನಾಯಿ: ಪ್ರಯಾಣಿಕರನ್ನು ಎಚ್ಚರಿಸುವ ಶ್ವಾನದ ಕತೆ ಬಲು ರೋಚಕ!

ಚೆನ್ನೈ: ಮಾಲೀಕನಿಂದ ಪರಿತ್ಯಕ್ತಗೊಂಡಿರುವ ನಾಯಿಯೊಂದು ಚೆನ್ನೈನ ಪಾರ್ಕ್​ ಟೌನ್​ ರೈಲ್ವೆ ನಿಲ್ದಾಣದ ದಿನ ನಿತ್ಯದ ಪ್ರಯಾಣಿಕರ ನಡುವೆ ಮಿನಿ ಸೆಲೆಬ್ರಿಟಿಯಾಗಿ ಮಿಂಚುತ್ತಿದೆ. ರೈಲು ಹಳಿಗಳನ್ನು...

ಶಿಕ್ಷಣ ಸಚಿವ ಸುರೇಶ್ ಕುಮಾರ್ ವಾಸ್ತವ್ಯ ಹೂಡಿದ ಶಾಲೆಯಲ್ಲಿ ಶಿಕ್ಷಕರಿಂದ ಮಹಾ ಪ್ರಮಾದ

ಚಾಮರಾಜನಗರ: ಸಚಿವರ ಬಳಕೆಗೆಂದು ಮೀಸಲಿಟ್ಟ ಶೌಚಗೃಹವನ್ನು ಶಾಲಾ ಮಕ್ಕಳ ಕೈಯಲ್ಲಿ ಸ್ವಚ್ಛಗೊಳಿಸುವ ಮೂಲಕ ಶಾಲಾ ಶಿಕ್ಷಕರು ಪ್ರಮಾದವೆಸಗಿರುವ ಘಟನೆ ರಾಜ್ಯದ ಗಡಿಭಾಗದ ಶಾಲೆಯೊಂದರಲ್ಲಿ...

ರಾಷ್ಟ್ರ ರಕ್ಷಣೆಗೆ ಪ್ರಾಣವನ್ನೇ ಪಣಕ್ಕಿಡುವ ಧೀರ ಯೋಧರಿಗಾಗಿ “ಐರನ್​ ಮ್ಯಾನ್​” ಉಡುಪು ಅಭಿವೃದ್ಧಿಪಡಿಸಿದ ಯುವಕ!

ವಾರಾಣಸಿ: ಹಾಲಿವುಡ್​ ಐರನ್​ ಮ್ಯಾನ್​ ಚಿತ್ರದಿಂದ ಸ್ಪೂರ್ತಿಗೊಂಡು ವಾರಾಣಸಿಯ ಖಾಸಗಿ ವಿಶ್ವವಿದ್ಯಾಲಯದ ಉದ್ಯೋಗಿಯೊಬ್ಬರು "ಐರನ್​ ಮ್ಯಾನ್​" ಉಡುಪನ್ನು ಅಭಿವೃದ್ಧಿಪಡಿಸಿ ಸುದ್ದಿಯಾಗಿದ್ದಾರೆ. ಎದುರಾಳಿಯೊಂದಿಗೆ ಸೆಣಸಾಡುವ...

ಐಟಿ-ಬಿಟಿ ಅಭಿವೃದ್ಧಿಗೆ ಸರ್ಕಾರದ ಸಹಕಾರ: ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ, ಬೆಂಗಳೂರು ಟೆಕ್ ಸಮಿಟ್​ಗೆ ಅದ್ದೂರಿ ಚಾಲನೆ

ಬೆಂಗಳೂರು: ಆವಿಷ್ಕಾರ, ಸೇವಾ ಕ್ಷೇತ್ರಗಳ ಜತೆಗೆ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಕ್ಷೇತ್ರಗಳ ಅಭಿವೃದ್ಧಿಗೆ ಬೇಕಾಗುವ ಎಲ್ಲ ರೀತಿಯ ಸಹಕಾರವನ್ನು ಸರ್ಕಾರ ನೀಡಲಿದೆ....

ಬಿಐಎಸ್ ವರದಿ ಆತಂಕಕಾರಿ: ಜಲಮಂಡಳಿಗೆ ತಜ್ಞರ ಸಲಹೆ, ಗುಣಮಟ್ಟದ ನೀರಿಗೆ ನಾಗರಿಕರ ಆಗ್ರಹ

ಬೆಂಗಳೂರು: ಬೆಂಗಳೂರು ಜಲಮಂಡಳಿ ಸರಬರಾಜು ಮಾಡುತ್ತಿರುವ ಕುಡಿಯುವ ನೀರು ಶುದ್ಧವಲ್ಲ ಎಂಬುದು ಭಾರತೀಯ ಗುಣಮಟ್ಟ ಸಂಸ್ಥೆ (ಬಿಐಎಸ್) ನಡೆಸಿದ ಅಧ್ಯಯನದಲ್ಲಿ ಬಯಲಾಗಿದೆ. ಇದು...

ಬೆಳಗಾವಿ: ಬಳ್ಳಾರಿ ನಾಲಾ ಪ್ರವಾಹದಲ್ಲಿ ಸಿಲುಕಿ 3 ದಿನಗಳವರೆ ಮರ ಏರಿ ಕುಳಿತುಕೊಂಡಿದ್ದ ದಂಪತಿಯನ್ನು ರಕ್ಷಣೆ ಮಾಡುವಲ್ಲಿ ಜಿಪಂ ಸಿಇಒ ಡಾ.ಕೆ.ವಿ.ರಾಜೇಂದ್ರ ನೇತೃತ್ವದ ರಕ್ಷಣಾ ತಂಡ ಕೊನೆಗೂ ಯಶಸ್ವಿಯಾಗಿದೆ.

ಬೆಳಗಾವಿ ತಾಲೂಕಿನ ಉರಬಿನಟ್ಟಿ ಗ್ರಾಮದ ಕಾಡಪ್ಪ ಘೀವಾರಿ (35) ಹಾಗೂ ಪತ್ನಿ ರತ್ನಾಯಿಬಾಯಿ ಘೀವಾರಿ (30) ಪ್ರಾಣಾಪಾಯದಿಂದ ಪಾರಾದ ದಂಪತಿ. ಖಾನಾಪುರ ಹಾಗೂ ಬೆಳಗಾವಿ ತಾಲೂಕಿನಲ್ಲಿ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಬಳ್ಳಾರಿ ನಾಲಾ ಪ್ರವಾಹದಲ್ಲಿ ದಂಪತಿ ಮಂಗಳವಾರ ಮನೆಯಲ್ಲಿಯೇ ಸಿಲುಕಿಕೊಂಡಿದ್ದರು. ನಂತರ ಪ್ರವಾಹ ಪ್ರಮಾಣ ಹೆಚ್ಚಾಗಿ ಮನೆ ಸಂಪೂರ್ಣ ಜಲಾವೃತಗೊಂಡಿದ್ದರಿಂದ ದಂಪತಿ ಜೀವ ರಕ್ಷಣೆಗಾಗಿ ಮರ ಏರಿ ಕುಳಿತುಕೊಂಡಿದ್ದರು. ಆದರೆ, ನೀರಿನ ರಭಸ ಹೆಚ್ಚಾಗಿದ್ದರಿಂದ ರಕ್ಷಣೆ ಮಾಡಲು ಸಾಧ್ಯವಾಗಿರಲಿಲ್ಲ. ಕೊನೆಗೆ ಬುಧವಾರ ರಾತ್ರಿ ಜಿಪಂ ಸಿಇಒ ಡಾ.ಕೆ.ವಿ.ರಾಜೇಂದ್ರ ನೇತೃತ್ವದ ಸೇನೆ ಹಾಗೂ ಎನ್‌ಡಿಆರ್‌ಎಫ್ ತಂಡಗಳು ಸತತ 6 ಗಂಟೆ ಕಾರ್ಯಾಚರಣೆ ನಡೆಸಿ ದಂಪತಿಯನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿವೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಕೇಶ ಸಿಂಗ್ ತಿಳಿಸಿದ್ದಾರೆ.

ಕಾಡಪ್ಪ ಮತ್ತು ಆತನ ಪತ್ನಿ ರತ್ನಾಯಿಬಾಯಿ ಕಮಲಾಪುರ ಬಳಿ ಬಳ್ಳಾರಿ ನಾಲಾದ ಪ್ರವಾಹದಲ್ಲಿ 3 ದಿನಗಳಿಂದ ಸಿಲುಕಿಕೊಂಡಿದ್ದರು. ಎನ್‌ಡಿಆರ್‌ಎಫ್ ಹಾಗೂ ಸೇನಾ ತಂಡಗಳು 6 ಗಂಟೆ ಸತತ ಕಾರ್ಯಾಚರಣೆ ನಡೆಸಿ ದಂಪತಿಯನ್ನು ರಕ್ಷಣೆ ಮಾಡಿವೆ. ಇದೀಗ ಅವರನ್ನು ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ. ದಂಪತಿ ಗಾಬರಿಗೊಂಡಿದ್ದರಿಂದ ಸದ್ಯ ಮಾತನಾಡುವ ಸ್ಥಿತಿಯಲ್ಲಿಲ್ಲ. ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.
|ಡಾ.ವಿ.ಕೆ.ರಾಜೇಂದ್ರ, ಜಿಪಂ ಸಿಇಒ, ಬೆಳಗಾವಿ


ಕಾಡಪ್ಪ ಮತ್ತು ಆತನ ಪತ್ನಿ ರತ್ನಾಯಿಬಾಯಿ ನದಿ ಪ್ರವಾಹದಲ್ಲಿ 3 ದಿನ ಸಿಲುಕೊಂಡಿದ್ದರಿಂದ ಅವರ ದೇಹದಲ್ಲಿನ ಉಷ್ಣಾಂಶ ಕಡಿಮೆ ಆಗಿದೆ. ಆದರೆ, ಜೀವಕ್ಕೆ ಯಾವುದೇ ಪ್ರಾಣಾಪಾಯ ಇಲ್ಲ. ಚಿಕಿತ್ಸೆ ಗೆ ಸ್ಪಂದಿಸುತ್ತಿದ್ದಾರೆ.
|ಡಾ.ಎಸ್.ಟಿ.ಕಳಸದ, ಬಿಮ್ಸ್ ನಿರ್ದೇಶಕ

- Advertisement -

Stay connected

278,592FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...