More

    ಕೃಷಿ ಯೋಜನೆ ಸದುಪಯೋಗ ಪಡಿಸಿಕೊಳ್ಳಿ

    ಹೂವಿನಹಡಗಲಿ: ಗ್ರಾಮದ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಹಸೀಲ್ದಾರ್ ಕೆ.ಶರಣಮ್ಮ ಹೇಳಿದರು.

    ತಾಲೂಕಿನ ನವಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶನಿವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಗ್ರಾಮದ ಸಮಸ್ಯೆಗಳನ್ನು ಸರ್ಕಾರಿ ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಪರಿಹಾರವನ್ನು ಕಂಡುಕೊಳ್ಳಬೇಕು. ಗ್ರಾಮದ ಜನರು ವಾಸಿಸುವ ಮನೆಗಳ ಸುತ್ತ-ಮುತ್ತಲೂ ಸ್ವಚ್ಛತೆ ಕಾಪಾಡುವುದರೊಂದಿಗೆ ಪ್ರತಿಯೊಬ್ಬರೂ ಆರೋಗ್ಯದ ಕಡೆ ಗಮನ ಹರಿಸಬೇಕು. ರೈತರು ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳುವ ಮೂಲಕ ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಬೇಕು. ತಾಲೂಕು ಮತ್ತು ಗ್ರಾಮೀಣ ಭಾಗದ ಸರ್ಕಾರಿ ಕಚೇರಿಗಳಿಗೆ ನೇರವಾಗಿ ಭೇಟಿ ನೀಡಿ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಸಾರ್ವಜನಿಕರು ಅರ್ಜಿ ನೀಡಿದರೆ ಅಗತ್ಯ ದಾಖಲೆಗಳನ್ನು ಪಡೆದು ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು. ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಅವುಗಳನ್ನು ಬಳಸಿಕೊಳ್ಳುವ ಮೂಲಕ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಕೊಡಿಸಬೇಕು ಎಂದರು. ತಾಪಂ ಇಒ ಎಸ್.ಎಸ್.ಪ್ರಕಾಶ್, ಕ್ಷೇತ್ರ ಸಮನ್ವಯಾಧಿಕಾರಿ ಎ.ಕೊಟೇಪ್ಪ, ಗ್ರಾಪಂ ಅಧ್ಯಕ್ಷ ಕಿರಣಕುಮಾರ್ ಎಂ, ಪಿಡಿಒ ಮಹಮ್ಮದಗೌಸ್ ಬಿ ಇತರರಿದ್ದರು.

    ಅರ್ಜಿಗಳ ವಿಲೇವಾರಿ: ರಾಮದಲ್ಲಿ ವಿದ್ಯುತ್ ಸಂಪರ್ಕ, ವಸತಿ ರಹಿತರಿಗೆ ಆಶ್ರಯ ಯೋಜನೆಯಡಿಯಲ್ಲಿ ವಸತಿ ಸೌಲಭ್ಯ ಸೇರಿ 57 ಅರ್ಜಿಗಳನ್ನು ಸಾರ್ವಜನಿಕರು ನೀಡಿದ್ದು, ಅದರಲ್ಲಿ 47 ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಉಳಿದ 10 ಅರ್ಜಿಗಳಿಗೆ ಮುಂದಿನ ದಿನಗಳಲ್ಲಿ ಸೂಕ್ತ ಪರಿಹಾರ ಒದಗಿಸಲಾಗುವುದು.
    > ಕೆ.ಶರಣಮ್ಮ, ತಹಸೀಲ್ದಾರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts