20.4 C
Bangalore
Monday, December 9, 2019

ಫಲಪುಷ್ಪ ಪ್ರದರ್ಶನಕ್ಕೆ ತಯಾರಿ

Latest News

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

<< ಅಳುಪೋತ್ಸವಕ್ಕೆ 10 ಸಾವಿರ ಹೂವುಗಳಿಂದ ಕಲಾಕೃತಿ > ಗಮನ ಸೆಳೆಯಲಿದೆ ಸಂಸ್ಥಾನದ ಲಾಂಛನ>>

ಅವಿನ್ ಶೆಟ್ಟಿ ಉಡುಪಿ
ಐತಿಹಾಸಿಕ ಗತವೈಭವ ಸಾರುವ ತುಳುನಾಡಿನ ರಾಜಧಾನಿಯಾಗಿದ್ದ 365 ದೇವಾಲಯಗಳ ನಗರ ಬಾರಕೂರು ಜ.25ರಿಂದ 27ರ ತನಕ ಜರುಗುವ ಪ್ರಥಮ ಅಳುಪೋತ್ಸವಕ್ಕೆ ಸಜ್ಜುಗೊಳ್ಳುತ್ತಿದ್ದು, ಉತ್ಸವದಲ್ಲಿ ಫಲಪುಷ್ಪ ಪ್ರದರ್ಶನ ಗಮನ ಸೆಳೆಯಲಿದೆ. ಪ್ರದರ್ಶನಕ್ಕೆ ತಯಾರಿ ಭರದಿಂದ ಸಾಗುತ್ತಿದ್ದು ಸುಮಾರು 10 ಸಾವಿರ ಸಂಖ್ಯೆಯ ಹೂವುಗಳು, 7 ಸಾವಿರ ಹೂವಿನ ಗಿಡಗಳು, ಸಿರಿಧಾನ್ಯದ ಕಲಾಕೃತಿಗಳು ಗಮನ ಸೆಳೆಯಲಿವೆ.

15ರಿಂದ 20 ಮಂದಿ ತೋಟಗಾರಿಕೆ ಇಲಾಖೆ ಅಧಿಕಾರಿ, ಸಿಬ್ಬಂದಿ ಸಿದ್ಧತಾ ಕಾರ‌್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಮೂರು ದಿನಗಳ ಕಾಲ ನಡೆಯುವ ವಿವಿಧ ಜಾತಿ ಹಾಗೂ ಬಣ್ಣದ ಹೂವುಗಳನ್ನು ಒಂದೆಡೆ ಸೇರಿಸಲು, ಕಣ್ಣು ಹಾಯಿಸಿದಲ್ಲೆಲ್ಲ ಹೂಗಳ ಚಿತ್ತಾರ, ತರಕಾರಿಗಳಿಂದಲೇ ಮೂಡಿರುವ ಸುಂದರ ಕಲಾಕೃತಿ ಕಣ್ತುಂಬಿಕೊಳ್ಳಲು ಯೋಜನೆ ರೂಪಿಸಲಾಗುತ್ತಿದೆ. ಬಾರ್ಕೂರು ಕೋಟೆಗಳ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ.

ಪುಣೆಯಿಂದ ಹೂವುಗಳ ಆಗಮನ: ಮಹಾರಾಷ್ಟ್ರದ ಪುಣೆ ಮತ್ತು ಬೆಂಗಳೂರಿನಿಂದ ಹೂವುಗಳನ್ನು ತರಿಸಲಾಗುತ್ತಿದೆ. ಗುಲಾಬಿ, ಓಯಸಿಸ್ ಬ್ರಿಕ್, ಕಾರ್ನಿಶಿಯನ್, ಮರಿಗೋಲ್ಡ್ ಕ್ರೈಸೇನಿಥಂ, ಅಸ್ಪರಗೋಲ್ಡ್, ಆರ್ಕಿಡ್, ಜರ್ಬೆರ, ಅಲ್ಸೋಮೇರಿಯ ಲಿಲ್ಲಿ ಹೂಗಳನ್ನು ತರಿಸಲಾಗಿದೆ.

ಸಂಸ್ಥಾನದ ಲಾಂಛನ ವಿಶೇಷ: ಬಾರಕೂರು ಅಳುಪ ಸಂಸ್ಥಾನದ ಲಾಂಛನ ವಿಶೇಷವಾಗಿ ಗಮನ ಸೆಳೆಯಲಿದೆ. ಎರಡೂ ಬದಿಯಲ್ಲಿ ಮೀನು, ಮೇಲ್ಭಾಗದಲ್ಲಿ ಸಿಂಹಾಸನದ ಛತ್ರ ಹೂಗಳಿಂದ ಅಲಂಕರಿಸಲಾಗುತ್ತದೆ. 12 ಅಡಿ ಎತ್ತರದಲ್ಲಿ ಹೂವಿನಿಂದ ಲಾಂಛನ ಮೂಡಿಬರಲಿದೆ. ಇದಕ್ಕಾಗಿ ಮರಿಗೋಲ್ಡ್ ಕ್ರೈಸೇನಿಥಂ 5 ಸಾವಿರ ಹೂವು, ಕಾರ್ನಿಶಿಯನ್ 2400 ಹೂವುಗಳನ್ನು ಬಳಸಲಾಗುತ್ತದೆ. ಕೆಳಭಾಗದಲ್ಲಿ ಕಮಲ ಆಕೃತಿಯಲ್ಲಿ ಹೂವನ್ನು ಅಲಂಕರಿಸಲಾಗುತ್ತದೆ.

ಸಿರಿಧಾನ್ಯ ಆಕೃತಿ: ಹೂವು ಮಾತ್ರವಲ್ಲದೆ ಸಿರಿಧಾನ್ಯದ ಆಕೃತಿಗಳು ವಿಶೇಷವಾಗಿರಲಿದೆ. ಗೋವನ್ನು ಕಾಯುವ ಶ್ರೀಕೃಷ್ಣ ಆಕೃತಿ ರಚಿಸಲಾಗುತ್ತದೆ. ಶ್ರೀ ಕೃಷ್ಣ 6 ಅಡಿ, ಗೋವಿನ ಆಕೃತಿ 5 ಅಡಿ ಇರುತ್ತದೆ. 1800 ಹೂಗಳಿಂದ ಆನೆ, 1 ಸಾವಿರ ಹೂವುಗಳಿಂದ ಚಿಟ್ಟೆಗಳ ಆಕೃತಿ ಮೂಡಿಬರಲಿದೆ. ಗುಲಾಬಿ ಮತ್ತು ಲಿಲ್ಲಿಸ್ ಹೂಗಳಿಂದ ಆನೆ, ಚಿಟ್ಟೆ ಆಕೃತಿ ರಚಿಸಲಾಗುತ್ತದೆ.

ಫಲಪುಷ್ಪ ಪ್ರದರ್ಶನ ಆಕರ್ಷಕವಾಗಿ ರೂಪಿಸಲು ಯೋಜನೆ ರೂಪಿಸಿದ್ದೇವೆ. ಜ.23ರಿಂದ ಕೆಲಸಗಳು (ಇಂದಿನಿಂದ) ಆರಂಭವಾಗುತ್ತದೆ. ಅಳುಪ ಸಂಸ್ಥಾನದ ಲಾಂಛನ ವಿಶೇಷವಾಗಿದ್ದು, ಇತರೆ ಕಲಾಕೃತಿಗಳು, 7 ಸಾವಿರ ಹೂವಿನ ಗಿಡಗಳು ನೋಡುಗಳ ಗಮನ ಸೆಳೆಯಲಿದೆ.
– ನಿದೀಶ್ ಹೊಳ್ಳ ಸಹಾಯಕ ತೋಟಗಾರಿಕೆ ಅಧಿಕಾರಿ.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...