ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ, ಎಲ್ಲಿ ಪಾರ್ಕಿಂಗ್, ಎಲ್ಲಿ ನೋ ಪಾರ್ಕಿಂಗ್

lalbagh flower show (9) vvani
Published on

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ತೋಟಗಾರಿಕೆ ಇಲಾಖೆ ಲಾಲ್‌ಬಾಗ್‌ನಲ್ಲಿ ಆ.4 ರಿಂದ 15 ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. 10 ಲಕ್ಷ ಜನರು ಆಗಮಿಸುವ ಹಿನ್ನೆಲೆಯಲ್ಲಿ ಲಾಲ್‌ಬಾಗ್ ಸುತ್ತಲ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿ ನಗರ ಸಂಚಾರ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಬರುವ ವಾಹನಗಳಿಗೆ ಡಾ.ಮರಿಗೌಡ ರಸ್ತೆ, ಅಲ್ ಅಮೀನ್ ಕಾಲೇಜು ಆವರಣದಲ್ಲಿ ದ್ವಿಚಕ್ರ ವಾಹನಗಳ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಲಾಗಿದೆ. ಕೆಎಚ್ ರಸ್ತೆ, ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣ ಪಾರ್ಕಿಂಗ್‌ನಲ್ಲಿ ಕಾರುಗಳಿಗೆ, ಡಾ.ಮರಿಗೌಡ ರಸ್ತೆ-ಹಾಪ್ ಕಾಮ್ಸ್‌ನಲ್ಲಿ ಮತ್ತು ಜೆ.ಸಿ.ರಸ್ತೆ ಕಾರ್ಪೋರೇಷನ್ ಪಾರ್ಕಿಂಗ್ ಸ್ಥಳದಲ್ಲಿ ಬೈಕ್, ಕಾರುಗಳನ್ನು ನಿಲ್ಲಿಸಲು ಅವಕಾಶ ನೀಡಲಾಗಿದೆ.

ಇಲ್ಲಿ ವಾಹನ ನಿಲ್ಲಿಸಲು ಅವಕಾಶ :

ಆದರೆ ಮಾತ್ರ ಡಾ.ಮರಿಗೌಡ ರಸ್ತೆ, ಲಾಲ್‌ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್ ವರೆಗೆ, ಕೆಎಚ್ ರಸ್ತೆ, ಕೆಎಚ್ ವೃತ್ತದಿಂದ ಶಾಂತಿನಗರ ಜಂಕ್ಷನ್ ವರೆಗೆ, ಲಾಲ್‌ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ಬಾಗ್ ಮುಖ್ಯದ್ವಾರ, ಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್‌ನಿಂದ ವಿಲ್ಸನ್ ಗಾರ್ಡ್‌ನ್ 12ನೇ ಕ್ರಾಸ್, ಬಿಎಂಟಿಸಿ ರಸ್ತೆಯಲ್ಲಿ, ಕೃಂಬಿಗಲ್ ರಸ್ತೆ, ಲಾಲ್‌ಬಾಗ್ ವೆಸ್ಟ್‌ಗೇಟ್‌ನಿಂದ ಆರ್.ವಿ. ಟೀಚರ್ಸ್‌ ಕಾಲೇಜು, ಆರ್.ವಿ.ಟೀಚರ್ಸ್‌ ಕಾಲನಿಯಿಂದ ಅಶೋಕ ಪಿಲ್ಲರ್, ಸಿದ್ದಾಪುರ ಜಂಕ್ಷನ್ ವರೆಗಿನ ರಸ್ತೆಯ ಎರಡು ಬದಿ ವಾಹನಗಳ ಪಾರ್ಕಿಂಗ್‌ನ್ನು ನಿಷೇಧಿಸಲಾಗಿದೆ.

ಈ ಪ್ರದೇಶದಲ್ಲಿ ನೋ ಪಾರ್ಕಿಂಗ್ :


ಡಾ.ಮರಿಗೌಡ ರಸ್ತೆ, ಲಾಲ್‌ಬಾಗ್ ರಸ್ತೆ, ಕೆಎಚ್ ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬಿಎಂಟಿಸಿ ಬಸ್, ಮೆಟ್ರೋ, ಕ್ಯಾಬ್ ಬಳಸುವುದು ಒಳಿತು.
ಎಂ.ಎನ್. ಅನುಚೇತ್-ಜಂಟಿ ಪೊಲೀಸ್ ಆಯುಕ್ತ(ಸಂಚಾರ)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net