ಮಂಡ್ಯ: ಜಿಲ್ಲೆಯಲ್ಲಿ ಲಾಟರಿ ಟಿಕೆಟ್ ಮಾರಾಟದಿಂದ ಕೌಟುಂಬಿಕ ಕಲಹಗಳು ಉಂಟಾಗುವುದರ ಜತೆಗೆ ಆರ್ಥಿಕ ನಷ್ಟಗಳು ಸಂಭವಿಸುತ್ತಿದೆ. ಆದ್ದರಿಂದ ಈ ಬಗ್ಗೆ ಜನಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲೆಯಲ್ಲಿ ಅನಧಿಕೃತ ಲಾಟರಿ ಮಾರಾಟ ಮತ್ತು ಮಟ್ಕಾ ಹಾವಳಿಯನ್ನು ನಿಯಂತ್ರಿಸುವ ಫ್ಲೈಯಿಂಗ್ ಸ್ಕ್ವಾಡ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೇರೆ ರಾಜ್ಯದಿಂದ ಅನಧಿಕೃತವಾಗಿ ಲಾಟರಿ ಟಿಕೆಟ್ ತಂದು ಜಿಲ್ಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಅನಧಿಕೃತ ಲಾಟರಿ ಟಿಕೆಟ್‌ಗೆ ಸಂಬಂಧಿಸಿದಂತೆ ಪ್ರಸ್ತುತ ವರ್ಷದಲ್ಲಿ 4 ಪ್ರಕರಣ ದಾಖಲಾಗಿವೆ. ಕಿರುಗಾವಲು ವ್ಯಾಪ್ತಿಯಲ್ಲಿ ಹೆಚ್ಚು ದೂರುಗಳು ಕೇಳಿ ಬರುತ್ತಿದೆ ಎಂದರು.
ಲಾಟರಿ ಹಾವಳಿ ಹಾಗೂ ನಕಲಿ ಲಾಟರಿ ಮಾರಾಟ ತಡೆಗಟ್ಟಲು ಹೆಚ್ಚೆಚ್ಚು ಅರಿವು ಮೂಡಿಸಬೇಕು. ಗ್ರಾಮ ಪಂಚಾಯಿತಿ, ಸ್ತ್ರೀ ಶಕ್ತಿ ಸಂಘ ಹಾಗೂ ಸ್ವಸಹಾಯ ಸಂಘಗಳ ಮೂಲಕ ಜನ ಜಾಗೃತಿ ಮೂಡಿಸಬೇಕು. ಜತೆಗೆ ಶಾಲಾ ಮಕ್ಕಳಿಂದ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಅನಧಿಕೃತವಾಗಿ ಲಾಟರಿ ಟಿಕೆಟ್ ಮಾರಾಟಗಾರರು ಹಾಗೂ ಕೊಳ್ಳುವವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ-1 ಸಿ.ಇ.ತಿಮ್ಮಯ್ಯ, ಸಣ್ಣ ಉಳಿತಾಯ ಮತ್ತು ರಾಜ್ಯ ಲಾಟರಿ ಸಹಾಯಕ ನಿರ್ದೇಶಕ ಗಿರೀಶ್, ಅಭಿವೃದ್ಧಿ ಅಧಿಕಾರಿ ಶಿವಕುಮಾರ್, ವಾಣಿಜ್ಯ ತೆರಿಗೆ ಇಲಾಖೆಯ ಬಿ.ಎಸ್.ಲೋಕೇಶ್ ಇತರರಿದ್ದರು.
ಲಾಟರಿ ಹಾವಳಿ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ
You Might Also Like
2025ರಲ್ಲಿ ಈ 3 ರಾಶಿಯವರಿಗೆ ರಾಜಯೋಗ!? ಅನೇಕ ರೀತಿಯಲ್ಲಿ ಹಣದ ಹರಿವು, ಐಷಾರಾಮಿ ಜೀವನ | Royal Life
Royal Life : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ…
ಜೇನುತುಪ್ಪ ಜತೆ ಹುರಿದ ಶುಂಠಿ ತಿಂದರೆ ಗಂಟಲು ನೋವು ಮಾಯಾ! ಹೀಗಿವೆ ಪ್ರಯೋಜನಗಳು
ಬೆಂಗಳೂರು: ಜೇನುತುಪ್ಪ ಮತ್ತು ಶುಂಠಿ ಆರೋಗ್ಯಕ್ಕೆ ತುಂಬಾ ಪ್ರಯೋಜನ ಎಂಬ ವಿಷಯ ಬಹುತೇಕರಿಗೆ ತಿಳಿದಿದೆ. ಈ…
ಸಾಮಾನ್ಯವಾಗಿ ಮಾಡುವ ಈ ತಪ್ಪುಗಳಿಂದಲೇ ಲೈಂಗಿಕ ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತೆ ಎಚ್ಚರ! Relationship Tips
Relationship Tips : ಪರಸ್ಪರ ತಿಳುವಳಿಕೆಯುಳ್ಳ ಉತ್ತಮ ಲೈಂಗಿಕ ಜೀವನವು ಸಂತೋಷದ ದಾಂಪತ್ಯಕ್ಕೆ ಕಾರಣವಾಗುತ್ತದೆ. ಲೈಂಗಿಕ…