More

    ಆಗಸ್ಟ್-ಸೆಪ್ಟೆಂಬರ್​ನಲ್ಲಿ ಫ್ಲೈಓವರ್ ಕಾಮಗಾರಿ ಪೂರ್ಣ

    ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ನಗರದಲ್ಲಿ ಪ್ರಗತಿಯಲ್ಲಿರುವ ಫ್ಲೈಓವರ್ ನಿರ್ಮಾಣ ಕಾಮಗಾರಿ ಜೂನ್​ನಲ್ಲಿ ಮುಗಿಯಬೇಕಿತ್ತು. ವಿವಿಧ ಇಲಾಖೆಗಳ ಅಧಿಕಾರಿಗಳ ನಡುವಿನ ಸಮನ್ವಯ ಕೊರತೆಯಿಂದ ವಿಳಂಬವಾಗಿದೆ. ಆಗಸ್ಟ್-ಸೆಪ್ಟೆಂಬರ್​ನಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.

    ಹುಬ್ಬಳ್ಳಿಯಲ್ಲಿ ಮಂಗಳವಾರ ಫ್ಲೈಓವರ್, ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫ್ಲೈಓವರ್ ನಿರ್ವಣಕ್ಕೆ ಕೇಂದ್ರ ಸರ್ಕಾರ 320 ಕೋಟಿ ರೂ. ನೀಡಿದೆ. ವಿದ್ಯುತ್ ತಂತಿ ಮಾರ್ಗ, ಒಳಚರಂಡಿ, ನೀರು ಪೂರೈಕೆ, ಇತ್ಯಾದಿಗಳ ಸ್ಥಳಾಂತರ ಹಾಗೂ ಭೂಸ್ವಾಧೀನ ಪ್ರಕ್ರಿಯೆ ನಡೆಸಿಕೊಡುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಈ ಪ್ರಕ್ರಿಯೆಗಳು ನಿಧಾನವಾಗಿವೆ ಎಂದರು.

    ವಿದ್ಯುತ್ ತಂತಿ ಮಾರ್ಗ, ಪರಿವರ್ತಕಗಳ ಸ್ಥಳಾಂತರಕ್ಕೆ ಹೆಸ್ಕಾಂನವರು 8.30 ಕೋಟಿ ರೂ. ವೆಚ್ಚ ಅಂದಾಜಿಸಿದ್ದಾರೆ. ಇದಕ್ಕೆ ರಾಷ್ಟ್ರೀಯ ಹೆದ್ದಾರಿ ಕಚೇರಿಯ ಲೋಕೋಪಯೋಗಿ ವಿಭಾಗದಿಂದ 5 ಕೋಟಿ ರೂ. ಒದಗಿಸಲಾಗುವುದು. ಇದರೊಂದಿಗೆ ತಾವು 2 ಕೋಟಿ ರೂ. ವಿನಿಯೋಗಿಸಿ ಸ್ಥಳಾಂತರ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಹೆಸ್ಕಾಂ ಎಂಡಿ ಸಭೆಯಲ್ಲಿ ತಿಳಿಸಿದ್ದಾರೆ. ಫ್ಲೈಓವರ್ ನಿರ್ವಣಕ್ಕಾಗಿ ಅಗೆದಿರುವ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಕಚೇರಿಯ ಲೋಕೋಪಯೋಗಿ ವಿಭಾಗ ಸರಿಪಡಿಸಿಕೊಡಲಿದೆ ಎಂದು ತಿಳಿಸಿದರು.

    ಪಿ.ಬಿ. ರಸ್ತೆ ಬಂಕಾಪುರ ಚೌಕ್​ವರೆಗೆ ಫ್ಲೈಓವರ್ ಕಾಮಗಾರಿ ವಿಸ್ತರಿಸುವ ಬಗ್ಗೆ ವಿಸõತ ಯೋಜನಾ ವರದಿ (ಡಿಪಿಆರ್) ತಯಾರಿಸುವಂತೆ ರಾಷ್ಟ್ರೀಯ ಹೆದ್ದಾರಿ ಕಚೇರಿಯ ಲೋಕೋಪಯೋಗಿ ವಿಭಾಗಕ್ಕೆ ಸೂಚಿಸಲಾಗಿಲ್ಲ. ಡಿಪಿಆರ್ ತಯಾರಿಸಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಬೇಗ ಕೊಟ್ಟರೆ ಲೋಕಸಭೆ ಚುನಾವಣೆ ಘೊಷಣೆಯಾಗುವ ಪೂರ್ವ ಕೇಂದ್ರ ಸರ್ಕಾರದಿಂದ ಇದಕ್ಕೆ ಅನುಮೋದನೆ ಪಡೆಯಲು ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

    ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ, ಶಾಸಕರಾದ ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ, ಮೇಯರ್ ವೀಣಾ ಬರದ್ವಾಡ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹೆಸ್ಕಾಂ ಎಂಡಿ ಮೊಹಮ್ಮದ್ ರೋಷನ್, ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್, ಎಸ್​ಪಿ ಗೋಪಾಲ ಬ್ಯಾಕೋಡ, ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಶಿವಾನಂದ ನಾಯಕ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts