More

    ಶೇ.100 ಫಲಿತಾಂಶದತ್ತ ಗಮನಹರಿಸಿ

    ಸಾಗರ: ಸತತ ಏಳು ವರ್ಷ ಶೇ.100 ಫಲಿತಾಂಶ ಪಡೆದಿರುವುದರ ಹಿಂದೆ ಪರಿಶ್ರಮವಿದೆ. ಈ ಶ್ರದ್ಧೆ ಮತ್ತು ಪರಿಶ್ರಮ ಮುಂದುವರಿದರೆ ಮುಂದೆಯೂ ಶೇ.100 ಫಲಿತಾಂಶ ಪಡೆಯಲು ಸಾಧ್ಯ ಎಂದು ಶಿಕ್ಷಣ ಇಲಾಖೆ ಸಮನ್ವಯಾಧಿಕಾರಿ ಡಾ. ಅನ್ನಪೂರ್ಣಾ ಹೇಳಿದರು.

    ಸಾಗರದ ನೆಹರು ಮೈದಾನದಲ್ಲಿರುವ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಬುಧವಾರ 2022-23ನೇ ಸಾಲಿನಲ್ಲಿ ಶೇ.100 ಫಲಿತಾಂಶ ಪಡೆಯಲು ಕಾರಣರಾದ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಮಾತನಾಡಿದರು.
    ಸತತ ಶೇ.100 ಫಲಿತಾಂಶ ಪಡೆಯುವುದು ಸಣ್ಣ ವಿಷಯವಲ್ಲ. ಶಿಕ್ಷಕರು, ಪಾಲಕರು, ಮಕ್ಕಳು, ಶಾಲಾಭಿವೃದ್ಧಿ ಸಮಿತಿ ಇದಕ್ಕೆ ತೋರಿಸಿದ ಬದ್ಧತೆಯೇ ಕಾರಣ. ಈ ಫಲಿತಾಂಶ ಸರಣಿಯು ಹೀಗೆಯೇ ಮುಂದುವರಿಯಬೇಕು. ಈ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿರುವ ಮಕ್ಕಳು ಇದೇ ಸಾಧನೆ ಮಾಡಬೇಕು ಎಂದರು.
    ಮುಖ್ಯ ಶಿಕ್ಷಕ ದತ್ತಾತ್ರೇಯ ಭಟ್ ಮಾತನಾಡಿ, ಕಳೆದ ವರ್ಷ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಫಲಿತಾಂಶ ಪಡೆದ ಮಕ್ಕಳನ್ನು ಸನ್ಮಾನಿಸುವ ಮೂಲಕ ಈ ವರ್ಷದ ಮಕ್ಕಳಿಗೆ ಪ್ರೇರಣೆ ಸಿಗಲಿ ಎನ್ನುವುದು ನಮ್ಮ ಉದ್ದೇಶ. 2011-12ರಲ್ಲಿ ಆರಂಭವಾದ ಉರ್ದು ಪ್ರೌಢಶಾಲೆ ಅಲ್ಪಸಂಖ್ಯಾತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತ ಬಂದಿದೆ. ಮುಂದಿನ ದಿನಗಳಲ್ಲೂ ಶಾಲೆಯನ್ನು ಶೈಕ್ಷಣಿಕವಾಗಿ ಇನ್ನಷ್ಟು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
    ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎ.ಆರ್.ಸನಾವುಲ್ಲಾ, ಪತ್ರಕರ್ತ ರಮೇಶ್ ಹೆಗಡೆ ಗುಂಡೂಮನೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts