More

    ಗುರಿ ಸಾಧನೆ ಕಡೆ ಗಮನಹರಿಸಿ

    ನಂಜನಗೂಡು: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಪ್ರತಿಭೆ ಅಡಕವಾಗಿದ್ದು, ವಿದ್ಯಾರ್ಥಿಗಳು ಕೀಳರಿಮೆ ಬಿಟ್ಟು ಗುರಿ ಸಾಧನೆೆ ಕಡೆ ಗಮನಹರಿಸಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.

    ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ಸ್ಕೌಟ್ಸ್ ಅಂಡ್ ಗೈಡ್ಸ್, ರೆಡ್‌ಕ್ರಾಸ್ ಹಾಗೂ ಇತರ ಚಟುವಟಿಕೆಗಳಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪಠ್ಯದ ಜತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿಯಾಗಿದೆ. ಇತ್ತೀಚಿನ ಯುವಕರಲ್ಲಿ ಹೆಚ್ಚಿನ ಮೊಬೈಲ್ ಬಳಕೆಯಿಂದಾಗಿ ಮಾನಸಿಕ ಅಸ್ವಸ್ಥತೆ, ಖಿನ್ನತೆಯಂತಹ ಸಮಸ್ಯೆಗಳು ಹೆಚ್ಚಾಗಿದೆ. ಇದರಿಂದ ಹೊರಬರಲು, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ಸಹಾಯಕವಾಗಿವೆ ಎಂದರು.

    ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಲಹೆಗಾರ ಡಾ.ಎಸ್.ತುಕರಾಮ್ ಮಾತನಾಡಿ, ನಮ್ಮ ಕಾಲಘಟ್ಟದಲ್ಲಿ ಬಡತನದಿಂದಾಗಿ ಶಿಕ್ಷಣ ಪಡೆಯುವುದೇ ಕಷ್ಟವಾಗಿತ್ತು. ಈಗ ಸರ್ಕಾರ ವಿದ್ಯಾಭ್ಯಾಸಕ್ಕೆ ಒತ್ತು ನೀಡಿ ಎಲ್ಲಾ ಸೌಕರ್ಯಗಳನ್ನು ಒದಗಿಸಿದೆ. ಆಧುನಿಕ ಜಗತ್ತಿನ ವಿದ್ಯಾರ್ಥಿಗಳಲ್ಲಿ ಪುಸ್ತಕ ಓದುವ ಹವ್ಯಾಸ ಕಡಿಮೆಯಾಗುತ್ತಿದ್ದು, ಭವಿಷ್ಯ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಅಭ್ಯಾಸದಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು ಎಂದರು.

    ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಪ್ರೊ.ರೇಣುಕಾಬಾಯಿ, ಪ್ರಾಧ್ಯಾಪಕ ಬಿ.ಜಗದೀಶ್, ಡಾ.ಮಧುಸೂಧನ್, ಪ್ರಕಾಶ್, ಎಸ್.ಮಂಜು, ಡಾ.ಎನ್.ಎಸ್.ಮಹದೇವಪ್ರಸಾದ್, ಡಿ.ಕೆ.ಉಷಾ, ಪ್ರೊ.ಈಶಕುಮಾರ್, ಡಾ.ಎಚ್.ಆರ್.ಹೇಮಲತಾ, ಶ್ರೀಧರ್, ಗ್ರಂಥಪಾಲಕರಾದ ಶೋಭಾ, ಹರೀಶ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts