More

    ಮಾ.2ಕ್ಕೆ ಜಾನಪದ ಗ್ರಾಮಸಿರಿ ಕಾರ್ಯಕ್ರಮ


    ಮಡಿಕೇರಿ: ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಮಾ.2ರಂದು ಹೆಬ್ಬಾಲೆ ಪ್ರಾಥಮಿಕ ಶಾಲಾ ಮೈದಾನದಲ್ಲಿ ಜಾನಪದ ಗ್ರಾಮಸಿರಿ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದೆ.


    ಕುಶಾಲನಗರದ ಹೆಬ್ಬಾಲೆ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ಭಾನುವಾರ ಕಸಾಪ ತಾಲೂಕು ಅಧ್ಯಕ್ಷ ಕೆ.ಎಸ್.ನಾಗೇಶ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.


    ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಜಾನಪದ ಗ್ರಾಮಸಿರಿ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಆರ್ಥಿಕ ಸಮಿತಿ, ಮೆರವಣಿಗೆ ಸಮಿತಿ, ಆಹಾರ ಸಮಿತಿ, ಸಾಂಸ್ಕೃತಿಕ ಸಮಿತಿ, ಜಾನಪದ ಕ್ರೀಡಾ ಸಮಿತಿ, ವೇದಿಕೆ ಸಮಿತಿ, ಪ್ರಚಾರ ಸಮಿತಿ, ವಸ್ತುಪ್ರದರ್ಶನ ಸಮಿತಿ ಸೇರಿದಂತೆ ಹಲವು ಸಮಿತಿಗಳನ್ನು ರಚಿಸಿ ಗಣ್ಯರನ್ನು ಅಧ್ಯಕ್ಷರು, ಸಂಚಾಲಕರನ್ನು ಈ ಸಭೆಯಲ್ಲಿ ನೇಮಿಸಲಾಯಿತು. ಅಲ್ಲದೆ, ಫೆ. 10ರೊಳಗೆ ಸಮಿತಿಗಳಿಗೆ ಬೇಕಾಗುವ ಅಂದಾಜು ಖರ್ಚು ವೆಚ್ಚಗಳ ಮಾಹಿತಿ ನೀಡುವಂತೆ ಆರ್ಥಿಕ ಸಮಿತಿ ಅಧ್ಯಕ್ಷ ನಟೇಶ್ ಗೌಡ ತಿಳಿಸಿದರು.

    ಸಭೆಯಲ್ಲಿ ಹೆಬ್ಬಾಲೆ ಗ್ರಾಪಂ ಅಧ್ಯಕ್ಷೆ ಅರುಣಾಕುಮಾರಿ, ತೊರೆನೂರು ಗ್ರಾಪಂ ಅಧ್ಯಕ್ಷೆ ಶೋಭಾ ಪ್ರಕಾಶ್, ಪ್ರಮುಖರಾದ ಟಿ.ಡಿ.ಸೋಮಣ್ಣ, ಕೃಷ್ಣೇಗೌಡ, ಟಿ.ಬಿ.ಜಗದೀಶ್, ಚಂದ್ರಶೇಖರ್, ಚಂದ್ರಪ್ಪ, ರೂಪಾ ಮಹೇಶ್, ಟಿ.ಎಲ್.ರಮೇಶ್, ಪ್ರದೀಪ್ ರೆಡ್ಡಿ, ಕಸಾಪ ತಾಲೂಕು ಕಾರ್ಯದರ್ಶಿ ಎಸ್.ನಾಗರಾಜ್, ಖಜಾಂಚಿ ಕೆ.ವಿ.ಉಮೇಶ್, ಹೆಬ್ಬಾಲೆ ಘಟಕದ ಅಧ್ಯಕ್ಷ ಎಂ.ಎನ್. ಮೂರ್ತಿ, ಕಾರ್ಯದರ್ಶಿ ಕವಿತಾ ಪುಟ್ಟೇಗೌಡ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts