

ಹನೂರು: ಗೌರಿ- ಗಣೇಶ ಹಬ್ಬದ ಹಿನ್ನೆಲೆಯಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿರುವ ಗ್ರಾಮಗಳಿಗೆ ಶನಿವಾರ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಗ್ರಾಮಸ್ಥರಿಗೆ ಹಬ್ಬದ ಶುಭಾಶಯ ತಿಳಿಸಿದರು.
ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಕ್ಷೇತ್ರ ವ್ಯಾಪ್ತಿಯಲ್ಲಿ ಕೆರೆಕಟ್ಟೆ ಹಾಗೂ ಜಲಾಶಯಗಳಲ್ಲಿ ನೀರು ಸಂಗ್ರಹವಾಗಿದೆ. ಇದರಿಂದ ಅಂತರ್ಜಲ ಮಟ್ಟ ಉತ್ತಮವಾಗಿದೆ. ರೈತರು ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದಾರೆ ಎಂದರು.
ಗಣೇಶ ಮೂರ್ತಿ ವಿಸರ್ಜನೆಯ ವೇಳೆ ಸರ್ಕಾರದ ನಿಯಮವನ್ನು ಪಾಲಿಸುವುದರ ಮೂಲಕ ಯಾವುದೇ ಅಹಿತಕರ ಘಟನೆ ಜರುಗದಂತೆ ಹಾಗೂ ಗಲಾಟೆಗೆ ಆಸ್ಪದ ನೀಡದಂತೆ ಪ್ರತಿಯೊಬ್ಬರೂ ಶಿಸ್ತು ಮತ್ತು ಸಂಯಮವನ್ನು ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಸ್ಥಳೀಯ ಮುಖಂಡರಾದ ವಿಜಯ್‌ಕುಮಾರ್, ಪ್ರಶಾಂತ್‌ಕುಮಾರ್, ಶ್ರೀರಂಗ, ಹುಚ್ಚಯ್ಯ, ರಾಜೇಂದ್ರ, ಮಹದೇವ, ತಂಗವೇಲು, ಮುರುಗೇಶ್, ರಾಮು, ಅರುಳ್‌ಸ್ವಾಮಿ ಇತರರು ಇದ್ದರು.