More

    ಜನಸಂಖ್ಯೆ ಸ್ಫೋಟದಿಂದ ಆಹಾರ, ಉದ್ಯೋಗ ಸಮಸ್ಯೆ ಹೆಚ್ಚಾಗುವ ಸಾಧ್ಯತೆ

    ಚಿಕ್ಕಮಗಳೂರು: ಜನಸಂಖ್ಯೆ ಸ್ಫೋಟದಿಂದ ಎದುರಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಜತೆಗೆ ಸಣ್ಣ ಕುಟುಂಬದಿಂದ ಸಂತೃಪ್ತ ಜೀವನ ಎಂಬುದನ್ನು ಮನಗಾಣಬೇಕು ಎಂದು ಜಿಪಂ ಸಿಇಒ ಡಾ. ಗೋಪಾಲಕೃಷ್ಣ ಹೇಳಿದರು.
    ಡಾ. ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ತಾಲೂಕು ಆಡಳಿತ, ತಾಪಂ ಹಾಗೂ ಆರೋಗ್ಯ ಇಲಾಖೆ ಆಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜನಸಂಖ್ಯೆ ನಿಯಂತ್ರಣದಿಂದ ಮುಂದಿನ ಪೀಳಿಗೆಯನ್ನು ಉತ್ತಮಗೊಳಿಸಲು ಸಾಧ್ಯ ಎಂದರು.
    2011ರ ಜನಗಣತಿ ಪ್ರಕಾರ ದೇಶದ ಜನಸಂಖ್ಯೆ 121 ಕೋಟಿ ಇದೆ. ಪ್ರತಿ ವರ್ಷ 1.80 ಕೋಟಿಗೂ ಹೆಚ್ಚು ಜನಸಂಖ್ಯೆ ಏರುತ್ತಿದೆ. ಇದೇ ರೀತಿ ಮುಂದುವರಿದರೆ ಆಹಾರ, ನೀರು, ಬಟ್ಟೆ, ವಸತಿ, ನಿರುದ್ಯೋಗ ಸಮಸ್ಯೆ ಹೆಚ್ಚಾಗಲಿದೆ. ಮೂಲಸೌಲಭ್ಯ ಕೊರತೆ ಎದುರಿಸುವ ಜತೆಗೆ ಅರಣ್ಯನಾಶ, ಸಸ್ಯ ಸಂಪತ್ತು ನಾಶವಾಗುತ್ತದೆ ಎಂದು ಹೇಳಿದರು.
    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವತ್ಥ್‌ಬಾಬು ಮಾತನಾಡಿ, ಜನಸಂಖ್ಯೆ ನಿಯಂತ್ರಣದ ಬಗ್ಗೆ ಪ್ರತಿಯೊಬ್ಬರೂ ಇತರರಿಗೆ ಅರಿವು ಮೂಡಿಸಬೇಕು. ಅನೇಕ ಮುನ್ನೆಚ್ಚರಿಕೆ ಕ್ರಮವಹಿಸುವುದು, ಜನಸಂಖ್ಯಾ ನಿಯಂತ್ರಣಕ್ಕೆ ಆರೋಗ್ಯಕರ ಸೂತ್ರ ಅನುಸರಿಸುವುದು ಮುಖ್ಯ ಎಂದರು.
    ಆಯುಷ್ಯ ಇಲಾಖೆಯ ಡಾ. ಗೀತಾ, ತಾಲೂಕು ಆರೋಗ್ಯಾಧಿಕಾರಿ ಡಾ. ಸೀಮಾ, ಡಾ. ಹರೀಶ್, ಡಾ. ರೋಹಿತ್, ಡಾ. ಶಿವರಾಜ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts