ಭತ್ತದ ಕೃಷಿಯಲ್ಲಿ ಆಸಕ್ತಿಯಿಂದ ಆಹಾರ ಸಮತೋಲನ ಸಾಧ್ಯ

sid (2)
Published on

ವಿಜಯವಾಣಿ ಸುದ್ದಿಜಾಲ ಬೆಳ್ವೆ ಕೃಷಿ ಕ್ಷೇತ್ರದ ಉನ್ನತಿಗಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ವಿವಿಧ ಸೌಲಭ್ಯಗಳ ಮೂಲಕ ಪ್ರೋತ್ಸಾಹಿಸುತ್ತಿದೆ. ರೈತರು ಕೃಷಿಯ ಮೂಲಕ ತಮ್ಮ ಬದುಕು ಸದೃಡಗೊಳಿಸಿಕೊಳ್ಳಬೇಕು, ಯುವ ಸಮುದಾಯ ಕೃಷಿಯತ್ತ ಒಲವು ತೋರಿಸಬೇಕು, ಭತ್ತದ ಕೃಷಿಯಲ್ಲಿ ಪ್ರತಿಯೊಬ್ಬರು ಆಸಕ್ತಿ ಹೊಂದಿದಾಗ ಆಹಾರ ಸಮತೋಲನಕ್ಕೆ ಸಾಧ್ಯವಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೆಬ್ರಿ ತಾಲೂಕು ಯೋಜನಾಧಿಕಾರಿ ಲೀಲಾವತಿ ಹೇಳಿದರು. ಅವರು ಪ್ರಗತಿಪರ ಕೃಷಿಕ ಬೆಳ್ವೆ ಕೃಷ್ಣ ನಾಯ್ಕ ಕೃಷಿ ಕ್ಷೇತ್ರದಲ್ಲಿ ಯಂತ್ರಶ್ರೀ ಸಸಿ ನಾಟಿ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆ ಬೆಳ್ವೆ ವಲಯಾಧ್ಯಕ್ಷ ಎಚ್.ವಸಂತಕುಮಾರ್ ಶೆಟ್ಟಿ ಬೆಳ್ವೆ, ಸದಸ್ಯ ಸುರೇಶ ಶೆಟ್ಟಿ ಆರ್ಡಿ, ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ‌್ಗೋಳಿ, ಉಪಾಧ್ಯಕ್ಷ ಬಿ.ಹರೀಶ್ ಕಿಣಿ ಬೆಳ್ವೆ, ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಆರ್ಡಿ ಒಕ್ಕೂಟದ ಅಧ್ಯಕ್ಷ ಕೃಷ್ಣ ಪುತ್ರನ್ ಆರ್ಡಿ ಪ್ರಗತಿ ಪರ ಕೃಷಿಕ ಕೃಷ್ಣ ನಾಯ್ಕ ಬೆಳ್ವೆ, ಪ್ರಗತಿಪರ ಯುವ ಕೃಷಿಕ ಶರತ್ ಕುಮಾರ್ ಶೆಟ್ಟಿ ಆರ್ಡಿ, ವಿಠಲ ಶೆಟ್ಟಿ ಹೊನ್ಕಲ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೆಬ್ರಿ ತಾಲೂಕು ಕೃಷಿ ಅಧಿಕಾರಿ ಉಮೇಶ ಸಮಗ್ರ ಮಾಹಿತಿ ನೀಡಿದರು. ಮೇಲ್ವಿಚಾರಕ ರಾಘವೇಂದ್ರ ಗೌಡ ಸ್ವಾಗತಿಸಿದರು. ಕೃಷಿ ಅಧಿಕಾರಿ ಉಮೇಶ್ ಕಾರ್ಯಕ್ರಮ ನಿರೂಪಿಸಿ, ಸೇವಾ ಪ್ರತಿನಿಧಿ ಪ್ರಶಾಂತ್ ಗುಮ್ಮೋಲ ವಂದಿಸಿದರು.

ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘವು ರೈತರಿಗೆ ಭತ್ತ ಕೃಷಿಯ ಗದ್ದೆಯ ಉಳುಮೆ, ಕಟಾವು ಕಾರ್ಯಕ್ಕೆ ಯಂತ್ರಗಳನ್ನು ಹಾಗೂ ಆಧುನಿಕ ಕೃಷಿ ಪದ್ಧತಿಗೆ ವಿವಿಧ ಸೌಲಭ್ಯಗಳನ್ನು ರಿಯಾಯಿತಿ ದರದಲ್ಲಿ ನೀಡುತ್ತಿದ್ದೆವೆ, ಕೃಷಿ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಮಹತ್ವ ಯೋಜನೆಯನ್ನು ಜಾರಿಗೆ ತಂದು ಪ್ರೋತ್ಸಾಹಿಸಲಾಗುತ್ತಿದೆ. ಎಸ್.ಜಯರಾಮ ಶೆಟ್ಟಿ ಸುರ‌್ಗೋಳಿ, ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net