ಕಾರವಾರ/Food Festival: ಇಲ್ಲಿನ ಬಜಾರ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಮಕ್ಕಳ ಸಂತೆ ಗಮನ ಸೆಳೆಯಿತು. ಶಾಲೆಯ ಆವರಣದಲ್ಲಿ ಹಾಕಲಾಗಿದ್ದ 30 ಕ್ಕೂ ಹೆಚ್ಚಿನ ಸ್ಟಾಲ್‌ಗಳಲ್ಲಿ 150 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವಿವಿಧ ಉತ್ಪನ್ನಗಳನ್ನು ಮಾರಾಟ ಮಾಡಿದರು.
Food Festival
ಚಪ್ಪಲಿ, ಬ್ಯಾಗ್ ಮುಂತಾದ ವಸ್ತುಗಳ ಜತೆಗೆ, ಜೋಳದ ರೊಟ್ಟಿ, ವಿವಿಧ ಪೇಯಗಳು, ಪಾನಿಪುರಿಯಂಥ ಚಾಟ್ ಮಸಾಲಾ ವಸ್ತುಗಳನ್ನು ಮಕ್ಕಳು ಮಾರಾಟ ಮಾಡಿದರು. ವಿವಿಧ ಶಾಲೆಯ ವಿದ್ಯಾರ್ಥಿಗಳು, ನೂರಾರು ಪಾಲಕರು ಆಗಮಿಸಿ ವಸ್ತುಗಳನ್ನು ಖರೀದಿಸಿದರು.
ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ್ ಮಕ್ಕಳ ಸಂತೆಗೆ ಚಾಲನೆ ನೀಡಿದರು. ನಗರಭೆ ಸದಸ್ಯ ಪ್ರೇಮಾನಂದ ಗುನಗಾ, ಸಾಮಾಜಿಕ ಕಾರ್ಯಕರ್ತೆ ಸುಮಂಗಲಾ ಹನೇಹಳ್ಳಿ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಶಿಕ್ಷರು ವಿದ್ಯಾರ್ಥಿಗಳಿಗೆ ಸಹಕರಿಸಿದರು.
ಇದನ್ನೂ ಓದಿ: https://www.vijayavani.net/conviction-for-rapist