ಹಲ್ಲಿಬಿದ್ದ ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಕೊಪ್ಪಳ: ಬೇವೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.

ಮಕ್ಕಳಿಗೆ ತಯಾರಾಗಿದ್ದ ಬಿಸಿಯೂಟದಲ್ಲಿ ಹಲ್ಲಿ ಬಿದ್ದಿತ್ತು ಎನ್ನಲಾಗಿದೆ. ಅದು ಗೊತ್ತಾಗದೆ ಆ ಊಟವನ್ನೇ ಸೇವಿಸಿದ ಪರಿಣಾಮ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.