More

    ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ‘ಫುಟ್​ಬಾಲ್’ ಚಿಹ್ನೆ ನೀಡಿದ ಚುನಾವಣಾ ಆಯೋಗ

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಚುನಾವಣೆಯ ಕಾವು ರಂಗೇರುತ್ತಿದೆ. ಈಗಾಗಲೇ ಎಲ್ಲಾ ಪಕ್ಷಗಳು ರಾಜ್ಯದಾದ್ಯಂತ ಪ್ರಚಾರ ಕಾರ್ಯ ಆರಂಭಿಸಿವೆ. ಹೊಸ ಹೊಸ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ಧೇಶದಿಂದ ಕ್ಷೇತ್ರದಲ್ಲಿ ನಿರಂತರ ಓಡಾಟ ನಡೆಸುತ್ತಿದ್ದಾರೆ. ಇದೆಲ್ಲದರ ನಡುವೆ ಜನರಿಗೆ ಕುತೂಹಲ ಕೆರಳಿಸಿರುವುದು ಜನಾರ್ಧನ ರೆಡ್ಡಿ ಅವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ.

    ಇದೀಗ ಜನಾರ್ಧನ ರೆಡ್ಡಿ ಅವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಫುಟ್​ಬಾಲ್ ಚಿಹ್ನೆ ಲಭಿಸಿದೆ. ತಮ್ಮ ಪಕ್ಷಕ್ಕೆ ಚುನಾವಣಾ ಆಯೋಗ ನೀಡಿರುವ ಫುಟ್​ಬಾಲ್ ಚಿಹ್ನೆಯನ್ನು ಜನಾರ್ಧನ ರೆಡ್ಡಿ ಬಿಡುಗಡೆಗೊಳಿಸಿದ್ದಾರೆ. “ಫುಟ್ಬಾಲ್ ಗುರುತಿಗೆ ಮತ – ಕರ್ನಾಟಕ ರಾಜ್ಯಕ್ಕೆ ಹಿತ” ಎಂಬ ಘೋಷವಾಕ್ಯವನ್ನು ಪಕ್ಷ ಹೊಂದಿದೆ. ಇದನ್ನೂ ಓದಿ: ಇಂದಿನಿಂದ 3 ದಿನ ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

    ಸುದ್ದಿಗೋಷ್ಠಿಯಲ್ಲಿ ಜನಾರ್ಧನ ರೆಡ್ಡಿ ಮಾತನಾಡುತ್ತಾ, ಕಲ್ಯಾಣ ಕರ್ನಾಟಕದ ಹಲವೆಡೆ ಏನು ಅಭಿವೃದ್ಧಿ ಆಗಿಲ್ಲ. ಜನರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುತ್ತೇನೆ. ಡಿ .25 ರಂದು ಪಕ್ಷ ಘೋಷಣೆ ಮಾಡಿದ ಮರುದಿನದಿಂದ ಪ್ರಚಾರ ಮಾಡುತ್ತಿದ್ದೇನೆ. ಗ್ರಾಮೀಣ ಭಾಗದಿಂದ ಹೋಬಳಿ ಮಟ್ಟದವರೆಗೂ ಪಕ್ಷದ ತಲುಪಿದೆ. ನಾನು ಊಹಿಸಿಕೊಂಡಿದ್ದಕ್ಕಿಂತ ಹೆಚ್ಚಾಗಿ ಜನ ಬೆಂಬಲ ವ್ಯಕ್ತವಾಗಿದೆ ಎಂದರು.

    ಕಳೆದ 90 ದಿನದಲ್ಲಿ 12 ಮಂದಿ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದೇನೆ. ಇನ್ನು 19 ಮಂದಿ ಅಭ್ಯರ್ಥಿಯನ್ನು ಘೋಷಣೆ ಮಾಡುತ್ತೇನೆ. ಈ ಬಾರಿ ಚುನಾವಣೆಯಲ್ಲಿ 50 ಕ್ಷೇತ್ರಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇವೆ. 30 ಕ್ಷೇತ್ರದಲ್ಲಿ ನೂರಕ್ಕೆ ನೂರು ಗೆಲ್ಲುತ್ತೇವೆ ಎಂದು ಜನಾರ್ಧನ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಯಾದಗಿರಿ | ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿಗಾಹುತಿಯಾದ ದಂಪತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts