More

    ಚೆಕ್‌ಪೋಸ್ಟ್‌ಗೆ ಹೆಚ್ಚುವರಿ ಸಿಬ್ಬಂದಿ -ಶಶಿಕಲಾ ಜೊಲ್ಲೆ

    ನಿಪ್ಪಾಣಿ: ಕೊಗನೋಳಿ ಚೆಕ್‌ಪೋಸ್ಟ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವುಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಇತರ ಜಿಲ್ಲೆಯ ಅಧಿಕಾರಿಗಳೂ ಕಾರ್ಯನಿರ್ವಹಿಸಲು ಬರಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

    ತಾಲೂಕಿನ ಕೊಗನೋಳಿ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿರುವ ಚೆಕ್‌ಪೋಸ್ಟ್ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರ ಮಾರ್ಗದರ್ಶನದಲ್ಲಿ ಜಿಲ್ಲಾಧಿಕಾರಿ ಹಾಗೂ ಎಸ್‌ಪಿ ನೇತೃತ್ವದಲ್ಲಿ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಲಾಗುತ್ತಿದೆ.

    ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಬೆಳಗ್ಗೆ ಉಪಾಹಾರ, ಚಹಾ, ಮಧ್ಯಾಹ್ನ ಊಟ, ಸಂಜೆ ಚಹಾದ ವ್ಯವಸ್ಥೆ ಮಾಡಲಾಗಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿ ರಾಜ್ಯದ ಒಂದು ಹೆಬ್ಬಾಗಿಲು ಇದ್ದಂತೆ. ರಾಜಸ್ಥಾನ, ಗುಜರಾತ, ಮಹಾರಾಷ್ಟ್ರ ಸೇರಿ ಮೊದಲಾದ ರಾಜ್ಯದವರು ಕರ್ನಾಟಕಕ್ಕೆ ನಿಪ್ಪಾಣಿ ತಾಲೂಕಿನ ಕೊಗನೋಳಿ ಗ್ರಾಮದ ಮೂಲಕ ಪ್ರವೇಶಿಸಬೇಕಾಗುತ್ತದೆ.

    ಅವರವರ ರಾಜ್ಯದಿಂದ ಅನುಮತಿ ತರುತ್ತಾರೆ. ಆದರೆ, ಕರ್ನಾಟಕ ರಾಜ್ಯದಿಂದ ಇನ್ನೂ ಅನುಮತಿ ಸಿಗದೆ ಇರುವುದರಿಂದ ನರೆಯ ರಾಜ್ಯಗಳ ಜನರು ಇಲ್ಲಿಯೇ ಸಿಲುಕಿಕೊಳ್ಳುತ್ತಾರೆ. ಅಂಥವರಿಗೆ ಸ್ಥಳದಲ್ಲೇ ಅರ್ಜಿ ಸಲ್ಲಿಸಿ ಪಾಸ್ ಪಡೆಯಲು ಎಲ್ಲ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು. ವೈದ್ಯಾಧಿಕಾರಿ ಡಾ. ವಿ.ವಿ.ಶಿಂಧೆ, ತಹಸೀಲ್ದಾರ್ ಪ್ರಕಾಶ ಗಾಯಕವಾಡ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts